ತುಮಕೂರು: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಮುಂದಿನ ೫ ವರ್ಷದ ಅವಧಿಗೆ ನಡೆಯಲಿರುವ ನಿರ್ದೇಶಕರ ಸ್ಥಾನದ ಚುನಾವಣೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ನಾಮಪತ್ರ ಸಲ್ಲಿಸಿದರು.
ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ಚುನಾವಣಾಧಿಕಾರಿಗಳಾಗಿರುವ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್ ಅವರಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎನ್. ರಾಜಣ್ಣ ಅವರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮುಂದಿನ ೫ ವರ್ಷದ ಅವಧಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಉತ್ಸಾಹದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ನಮ್ಮ ಜಿಲ್ಲೆಯ ಆಡಳಿತ ಮಂಡಳಿಯಲ್ಲಿ ಎಲ್ಲ ಪಕ್ಷದವರು, ಎಲ್ಲ ಜಾತಿಯವರು ಇದ್ದಾರೆ. ಸಹಕಾರಿಗಳದ್ದೇ ಒಂದು ಪಕ್ಷವಾಗಿದೆ. ಎಲ್ಲರೂ ಕೂಡ ಒಮ್ಮv ವಾಗಿ ಕಳೆದ ೨೦-೨೫ ವರ್ಷಗಳಿಂದ ನಡೆದುಕೊಂಡು ಬಂದಿದ್ದೇವೆ ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣದಲ್ಲಿ ಏನು ಆಗುತ್ತದೆ, ಏನು ಆಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಅಂತಹ ವಿಚಾರಗಳಿಗೆ ವಿಶೇಷವಾದ ಒತ್ತು ಕೊಡುವ ಅವಶ್ಯತೆ ಇಲ್ಲ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಅರ್ಜಿ ಹಾಕಲು ಸರ್ವರಿಗೂ ಸ್ವತಂತ್ರ ಇದೆ. ಅರ್ಜಿ ಹಾಕುವವರಿಗೆ ಹಾಕಬೇಡಿ ಅಥವಾ ಹಾಕಿ ಎಂದು ನಾವು ಹೇಳುವುದಿಲ್ಲ. ಅವರವರ ಅಪೇಕ್ಷೆಯಂತೆ ಸ್ಪರ್ಧೆ ಮಾಡುತ್ತಾರೆ. ಮತದಾರರು ಯಾರಿಗೆ ಆಶೀರ್ವಾದ ಮಾಡುತ್ತಾರೋ ಅವರು ನಿರ್ದೇಶಕರಾಗಿ ಆಯ್ಕೆಯಾಗುತ್ತಾರೆ ಎಂದರು.
ವಿಷ್ಣುವರ್ಧನ್ ಸ್ಮಾರಕ ನೆಲಸಮ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದಿಂದ ಅಭಿಮಾನ್ ಸ್ಟುಡಿಯೋದಲ್ಲಿ ೨ ಎಕರೆ ಜಾಗ ಕೊಟ್ಟಿದ್ದರು ಎಂದು ನಾನು ಮಾಧ್ಯಮಗಳಲ್ಲಿ ಓದಿದ್ದೆ. ತಾತ್ಕಾಲಿಕವಾಗಿ ಸ್ಮಾರಕವನ್ನು ನಿರ್ಮಾಣ ಮಾಡಿದ್ದರು. ಆದರೆ ಆ ಜಾಗದವರು ಕೋರ್ಟ್ ಆದೇಶದ ಮೂಲಕ ಈಗ ಸ್ಮಾರಕ ನೆಲಸಮ ಮಾಡಿದ್ದಾರೆ ಎಂಬ ಮಾಹಿತಿಯನ್ನು ಪತ್ರಿಕೆ, ಮಾಧ್ಯಮಗಳ ಮೂಲಕ ಓದಿದ್ದೇನೆ. ನನಗೆ ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ಪ್ರಧಾನಿಗಳು ದಿನಕ್ಕೆ ಒಂದೊAದು ರೈಲು ಬಿಡುತ್ತಾರೆ. ಭದ್ರಾಮೇಲ್ದಂಡೆ ಯೋಜನೆಗೆ ೫ ಸಾವಿರ ಕೋಟಿ ಕೊಡುತ್ತೇನೆ ಎಂದು ರೈಲು ಬಿಟ್ಟಿಲ್ಲವ್ವಾ ಎಂದು ಪ್ರಶ್ನಿಸಿದ ಅವರು, ನಮ್ಮ ರಾಜ್ಯದಿಂದ ಸೋಮಣ್ಣನವರು ರೈಲ್ವೆ ಮತ್ತು ಜಲಶಕ್ತಿ ಸಚಿವರಾಗಿದ್ದಾರೆ, ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡಲು ಎಲ್ಲ ಸಚಿವರಿಗೂ ಓದಿಕೊಂಡು ಬನ್ನಿ ಎಂದು ಮುಖ್ಯಮಂತ್ರಿಗಳು ಸೂಚನೆ ಕೊಟ್ಟಿದ್ದಾರೆ. ಆ. ೧೬ ರಂದು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡಲು ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಅಂದು ಅಂತಿಮ ನಿರ್ಣಯವಾಗಲಿದೆ ಎಂದರು.
ನಾನು ಕಳೆದ ಎರಡೂವರೆ ಮೂರು ತಿಂಗಳ ಹಿಂದೆಯೇ ಹಾಸನ ಉಸ್ತುವಾರಿಯಿಂದ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆ. ಹಾಗಾಗಿ ಬಿಡುಗಡೆಗೊಳಿಸಿದ್ದಾರೆ. ಹಾಸನ ಜಿಲ್ಲೆ ಅಭಿವೃದ್ಧಿ ಕಡೆ ಹೆಚ್ಚು ಸಮಯ ಮೀಸಲಿಡಬೇಕು. ನನಗೆ ಸಮಯ ನೀಡಲು ಆಗುತ್ತಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿ, ಸಹಕಾರ ಕ್ಷೇತ್ರದ ಬಗ್ಗೆ ಹೆಚ್ಚು ಒತ್ತು ನೀಡುವ ಅಗತ್ಯವಿದೆ. ನನಗೆ ಯಾವ ಜಿಲ್ಲೆಯ ಉಸ್ತುವಾರಿ ಕೊಡಿ ಎಂದು ಕೇಳಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಳೆದ ೩ ವರ್ಷದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದೇ ಇರಲಿಲ್ಲ. ನಾನು ಉಸ್ತುವಾರಿ ಸಚಿವನಾದ ಬಳಿಕ ಎಲ್ಲ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ನಾನು ಎಲ್ಲೇ ಇದ್ದರೂ ಪಕ್ಷದ ಸಂಘಟನೆಗಾಗಿ ಕೆಲಸ ಮಾಡುತ್ತೇನೆ. ನನ್ನ ಮೊದಲ ಆದ್ಯತೆ ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಮೀಸಲಾಗಿರುತ್ತದೆ ಎಂದರು.
ಕೇAದ್ರದಲ್ಲಿ ಇಂದಿರಾಗಾAಧಿ ಕಾಲದಿಂದಲೂ ಕಾಂಗ್ರೆಸ್ ಪಕ್ಷದ ಆಡಳಿತ ನಡೆಸಿದೆ. ಯಾವತ್ತೂ ಕೂಡ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ.ಗಳನ್ನು ದುರುಪಯೋಗಪಡಿಸಿಕೊಂಡಿಲ್ಲ. ಆದರೆ ಬಿಜೆಪಿಯವರು ಈ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ. ಇದೇ ರೀತಿ ದೇಶದ ವಿವಿಧೆಡೆಯೂ ಮತಗಳ್ಳತನವಾಗಿದೆ. ಹಾಗಾಗಿ ಇದು ಸರಿಯಲ್ಲ ಎಂದು ರಾಹುಲ್‌ಗಾಂಧಿ ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿದ್ದಾರೆ ಎಂದು ಹೇಳಿದರು.
ನಾಮಪತ್ರ ಸಲ್ಲಿಸಿದವರ ವಿವರ
ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಎ ವರ್ಗದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ತಿಪಟೂರಿನ ಶಾಸಕ ಕೆ. ಷಡಕ್ಷರಿ, ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಚಿ.ನಾ.ಹಳ್ಳಿಯ ಎಸ್.ಆರ್. ರಾಜಕುಮಾರ್, ಕುಣಿಗಲ್‌ನ ಬಿ. ಶಿವಣ್ಣ, ಪ್ರಮೋದ್ ಎಸ್., ಮಧುಗಿರಿಯ ಜಿ.ಜೆ. ರಾಜಣ್ಣ, ತುರುವೇಕೆರೆ ಎಂ. ಸಿದ್ದಲಿಂಗಪ್ಪ, ಸಿರಾ ಜಿ.ಎಸ್. ರವಿ, ಕೊರಟಗೆರೆ ಎಸ್. ಹನುಮಾನ್, ಗುಬ್ಬಿ ಹೆಚ್.ಸಿ. ಪ್ರಭಾಕರ್, ಬಿ ವರ್ಗದಲ್ಲಿ ವಿಧಾನ ಪರಿಷತ್ ಸದಸ್ಯ ಟಿಎಪಿಸಿಎಂಎಸ್‌ನಿAದ ಆರ್. ರಾಜೇಂದ್ರ, ಸಿ ವರ್ಗದಲ್ಲಿ ಪತ್ತಿನ ಸಹಕಾರ ಸಂಘದ ಎಸ್. ಲಕ್ಷಿ÷್ಮÃನಾರಾಯಣ್, ಡಿ ವರ್ಗದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಬಿ. ನಾಗೇಶ್‌ಬಾಬು, ಡಿ (೧) ರಲ್ಲಿ ಮಹಿಳಾ ಸಹಕಾರ ಸಂಘದಿAದ ಮಾಲತಿ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
(Visited 1 times, 1 visits today)