BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ
ತುಮಕೂರು

ಜೆಜೆಎಂ ಕಾಮಗಾರಿ: ಶೀಘ್ರ ಕಾರ್ಯಾದೇಶ ನೀಡುವಂತೆ ಸೂಚನೆ

By News Desk BenkiyabaleUpdated:October 15, 2025 12:56 pm

ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಗೆ ಸಂಬ0ಧಿಸಿದ0ತೆ ಬಾಕಿಯಿರುವ ಕಾರ್ಯಾದೇಶಗಳನ್ನು ಶೀಘ್ರವೇ ನೀಡಬೇಕೆಂದು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಕಾರ್ಯನಿರ್ವಾಹಕ ಇಂಜಿನಿಯರ್ ಕುಮಾರಸ್ವಾಮಿ ಅವರಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾ ಪಂಚಾಯಿತಿ ವಿಡಿಯೋ ಸಂವಾದ ಸಭಾಂಗಣದಲ್ಲಿ ಬರಪೀಡಿತ ತಾಲೂಕುಗಳ ತುರ್ತು ಕುಡಿಯುವ ನೀರಿನ ಪೂರೈಕೆ ಕುರಿತು ನೀರು ಮತ್ತು ನೈರ್ಮಲ್ಯ ಸಭೆ ನಡೆಸಿ ಮಾತನಾಡಿದ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶವನ್ನು ಹೊಂದಲಾಗಿದ್ದು, ಜೆಜೆಎಂ ಕಾಮಗಾರಿಗೆ ಸಂಬAಧಿಸಿದ0ತೆ ಇನ್ನೂ ೨೦೦ ಕಾರ್ಯಾದೇಶವನ್ನು ನೀಡಿರು ವುದಿಲ್ಲ. ಕೂಡಲೇ ಕಾರ್ಯಾದೇಶ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.
ಜಲ್ ಜೀವನ್ ಮಿಷನ್ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟವನ್ನು ಕಾಪಾಡಬೇಕು. ಜೆಜೆಎಂ ಅನುಷ್ಠಾನದಲ್ಲಿ ಯಾವುದೇ ರೀತಿಯ ಅಸಡ್ಡೆ ಅಥವಾ ಅಸಮರ್ಪಕ ಕಾರ್ಯ ನಿರ್ವಹಣೆಯನ್ನು ಸಹಿಸಲಾಗುವುದಿಲ್ಲ. ಪ್ರತಿಯೊಂದು ಕಾಮಗಾರಿ ಸ್ಥಳದಲ್ಲೂ ತಾಂತ್ರಿಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬಳಕೆಯಾಗುವ ಸಾಮಗ್ರಿಗಳು ಗುಣಮಟ್ಟದ್ದಾಗಿರಬೇಕು ಹಾಗೂ ನೀರು ಪೂರೈಕೆ ಮಾರ್ಗಗಳಲ್ಲಿ ಸೋರಿಕೆ ಅಥವಾ ದೋಷ ಉಂಟಾಗದ0ತೆ ನಿಗಾವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಸಾರ್ವಜನಿಕ ನೀರು ಸರಬರಾಜು ಮಾಡುತ್ತಿರುವ ಕೊಳವೆಬಾವಿಗಳು ಬತ್ತಿ ಹೋದ ಸಂದರ್ಭಗಳಲ್ಲಿ ನೀರಿನ ಕೊರತೆಯಿಂದ ಜನತೆ ಸಂಕಷ್ಟ ಅನುಭವಿಸದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು. ಕೊಳವೆಬಾವಿ ಬತ್ತಿರುವ ಸ್ಥಳಗಳಲ್ಲಿ ಹೊಸ ಸಾರ್ವಜನಿಕ ಕೊಳವೆಬಾವಿ ಕೊರೆಸಲು ಶೀಘ್ರವಾಗಿ ಪ್ರಸ್ತಾವನೆ ತಯಾರಿಸಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕರ ಗಮನಕ್ಕೆ ತರಬೇಕು ಎಂದು ಹೇಳಿದರು.
ಹೊಸ ಕೊಳವೆಬಾವಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪರ್ಯಾಯವಾಗಿ ಹತ್ತಿರದ ಕೊಳವೆಬಾವಿ ಮೂಲಗಳಿಂದ ಸಾರ್ವಜನಿಕರಿಗೆ ತಾತ್ಕಾಲಿಕ ಕುಡಿಯುವ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಬೇಕು. ಯಾವುದೇ ಗ್ರಾಮದಲ್ಲಿ ನೀರಿನ ತೊಂದರೆ ಉಂಟಾದರೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಸಭೆಗೆ ಗೈರಾಗಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ ಅವರಿಗೆ ಸೂಚನೆ ನೀಡಿದರಲ್ಲದೆ, ಸಭೆಗೆ ಹಾಜರಾಗುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿ. ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕಾದರೆ ಸಮನ್ವಯ ಅಗತ್ಯ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಗಳು ಸುಸ್ಥಿತಿಯಲ್ಲಿರುವಂತೆ ಗಮನವಿಡಬೇಕು. ಘಟಕಗ ಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಿ, ಕ್ಲೋರಿನೇಷನ್ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿರುವುದನ್ನು ಖಚಿತಪಡಿ ಸಿಕೊಳ್ಳಬೇಕು ಎಂದು ಜಿಲ್ಲೆಯ ಎಲ್ಲಾ ಇಓಗಳಿಗೆ ಸೂಚನೆ ನೀಡಿದರು.
ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವಂತೆ ತಿಳಿಸಿದರಲ್ಲದೆ, ಯಾವುದೇ ಘಟಕ ಕಾರ್ಯರಹಿತವಾಗಿರುವ ಮಾಹಿತಿ ಬಂದ ಕೂಡಲೇ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು. ಜನರಿಗೆ ಶುದ್ಧ ನೀರಿನ ಪೂರೈಕೆ ನಿರಂತರವಾಗಿರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಸಣ್ಣಮುಸಿಯಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ: ಸಿದ್ರಾಮಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಚಂದ್ರಶೇಖರ್, ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

 

(Visited 1 times, 1 visits today)
tumkur ಜಿಲ್ಲಾಡಳಿತ
Previous Articleಹುಳಿಯಾರು ವಾರದ ಸಂತೆಗೆ ಸೌಕರ್ಯಕ್ಕಾಗಿ ರೈತರ ಧರಣಿ ೬ ನೇ ದಿನಕ್ಕೆ
Next Article ಸಮೀಕ್ಷೆ ಸಮರ್ಪಕ ಪಾರದರ್ಶಕತೆಯಿಂದ ನಡೆಸಲು ಆಗ್ರಹ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.