BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ
ತುಮಕೂರು

ಜಿಲ್ಲೆಯಲ್ಲಿ ನೀರಿನ ಜೈವಿಕ ಪರೀಕ್ಷೆ

೧೯ ಮಾದರಿ ಅನರ್ಹ ತಕ್ಷಣ ಕ್ರಮಕ್ಕೆ ಡಿಸಿ ಸೂಚನೆ
By News Desk BenkiyabaleUpdated:October 17, 2025 12:04 pm

ತುಮಕೂರು: ಜಿಲ್ಲೆಯ ೧೦ ತಾಲೂಕುಗಳಲ್ಲಿ ೪೦ ನೀರಿನ ಮೂಲಗಳ ಮಾದರಿಗಳನ್ನು ಜೈವಿಕ ಪರೀಕ್ಷೆಗೊಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ೧೯ ಮಾದರಿಗಳು ಕುಡಿಯಲು ಯೋಗ್ಯವಲ್ಲವೆಂದು ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ೯, ಸಿರಾ-೬, ತುಮಕೂರು-೩ ಮತ್ತು ಗುಬ್ಬಿ-೧ ನೀರಿನ ಮೂಲಗಳು ಕುಡಿಯಲು ಯೋಗ್ಯವಿಲ್ಲವೆಂದು ವರದಿ ಬಂದಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳಿಂದ ಸರಬರಾಜು ಮಾಡಬಾರದು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಮೃತ್ ಮತ್ತು ಜಲ್ ಜೀವನ್ ಮಿಷನ್ ಯೋಜನೆಗಳಡಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರಲ್ಲದೆ, ಸಾರ್ವಜನಿಕರಿಗೆ ನೀರು ಸರಬರಾಜು ಮಾಡುವ ಎಲ್ಲ ಕೊಳವೆಬಾವಿಗಳಲ್ಲಿ ಕಡ್ಡಾಯವಾಗಿ ಕ್ಲೋರಿನೇಷನ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರದಲ್ಲಿನ ಎಲ್ಲಾ ಸರ್ಕಾರಿ ವಿದ್ಯಾರ್ಥಿನಿಲಯಗಳು ಹಾಗೂ ಪ್ರಾಥಮಿಕ ಶಾಲೆಗಳಿಗೆ ಪೂರೈಕೆ ಮಾಡುವ ಕುಡಿಯುವ ನೀರನ್ನು ನಿಯಮಿತವಾಗಿ ಪರೀಕ್ಷೆಗೊಳಪಡಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಮಳೆಯಿಂದಾಗಿ ಈಗಾಗಲೇ ಸಂಭವಿಸಿರುವ ಮನೆ, ಬೆಳೆ ಹಾಗೂ ಪಶು ಹಾನಿ ಪ್ರಕರಣಗಳ ಕುರಿತು ಮಾಹಿತಿ ನೀಡಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸೊಳ್ಳೆ ನಿಯಂತ್ರಿಸಲು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ದಿನ ಧೂಮೀಕರಣ ಕೈಗೊಳ್ಳಬೇಕು. ನಗರ ಪ್ರದೇಶಗಳಲ್ಲಿ ಯಾವುದೇ ರೀತಿ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಮೇಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ, ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಸೇರಿದಂತೆ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleತಿಪಟೂರಿಗೆ ಮುಂಜಾನೆ ಬಸ್ ಇಲ್ಲದೆ ಪರದಾಟ
Next Article ಸಚಿವರಿಂದ ತಿಮ್ಮರಾಜನಹಳ್ಳಿ, ಊರುಕೆರೆ ವಿಭಾಗದ ತಪಾಸಣೆ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.