BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಜ್ಞಾನ ವೃದ್ಧಿ, ವ್ಯಕ್ತಿತ್ವ ರೂಪಿಸಿಕೊಳ್ಳಲು ಓದುವ ಹವ್ಯಾಸ ಸಹಕಾರಿ’
ಇತರೆ ಸುದ್ಧಿಗಳು

‘ಜ್ಞಾನ ವೃದ್ಧಿ, ವ್ಯಕ್ತಿತ್ವ ರೂಪಿಸಿಕೊಳ್ಳಲು ಓದುವ ಹವ್ಯಾಸ ಸಹಕಾರಿ’

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ: ಉತ್ತಮ ಓದುಗರಿಗೆ ಗೌರವಾರ್ಪಣೆ
By News Desk BenkiyabaleUpdated:November 17, 2025 4:49 pm

 

ತುಮಕೂರು: ಮಕ್ಕಳಲ್ಲಿ ಪುಸ್ತಕ ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು. ಓದುವುದರಿಂದ ಜ್ಞಾನ ಬೆಳೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಸಾಧನೆ ಮಾಡಿದವರೆಲ್ಲಾ ಪುಸ್ತಕ ಓದಿ ಉನ್ನತ ವ್ಯಕ್ತಿತ್ವ ರೂಪಿಸಿಕೊಂಡಿದ್ದಾರೆ. ಅಲ್ಲದೆ, ಓದುವ ಸಂಸ್ಕೃತಿಯನ್ನು ಪ್ರತಿಪಾದಿಸಿದ್ದಾರೆ ಎಂದು ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ.ಶಿವಶಂಕರ ಕಾಡದೇವರಮಠ ಹೇಳಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ-ಜಿಲ್ಲಾ ಕೇಂದ್ರ ಗ್ರಂಥಾಲಯ, ಇನ್ನರ್ ವ್ಹೀಲ್ ಸಂಸ್ಥೆ, ಗ್ರಂಥಾಲಯ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ: ಉತ್ತಮ ಓದುಗರಿಗೆ ಗೌರವಾರ್ಪಣೆ ಗ್ರಂಥಾಲಯ ಸಪ್ತಾಹದ ಅಂಗವಾಗಿ ಸೋಮವಾರ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸಮಾರಂಭ ಉದ್ಘಾಟಿಸಿದ ಅವರು, ಈಗ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗಿದೆ ಎನ್ನುವ ಮಾತು ಸುಳ್ಳು, ಓದುಗರ ಸಂಖ್ಯೆ, ಓದುವ ಹವ್ಯಾಸ ಬೆಳೆಯುತ್ತಲೇ ಇದೆ. ಪುಸ್ತಕ ಓದುವ ಹವ್ಯಾಸದಿಂದ ಜ್ಞಾನ, ಏಕಾಗ್ರತೆ, ಆಲೋಚನಾ ಶಕ್ತಿ ವೃದ್ಧಿಯಾಗುತ್ತದೆ. ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕು ಎಂದು ಸಲಹೆ ಮಾಡಿದರು.
ತಮ್ಮ ರೀಡ್ ಬುಕ್ ಫೌಂಡೇಶನ್‌ನಿ0ದ ೪೨ ಸಾವಿರ ಪುಸ್ತಕಗಳನ್ನು ಓದುಗರಿಗೆ ಕೊಡಲಾಗಿದೆ. ರಾಜ್ಯದ ೪೫೦ಕ್ಕೂ ಹೆಚ್ಚು ಶಾಲೆಗಳಲ್ಲಿ ಪುಸ್ತಕ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲಾ ಮಕ್ಕಳಲ್ಲಿ ಓದುವ ಸಂಸ್ಕೃತಿಯನ್ನು ಬೆಳೆಸಲಾಗುತ್ತಿದೆ. ಡಾ.ಎ.ಪಿ.ಜೆ.ಅಬ್ದುಲ್ ಕಲಾಂ, ಡಾ.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಡಾ.ಶಿವಕುಮಾರ ಸ್ವಾಮೀಜಿಯಂತಹ ಮಹನೀಯರು ಓದುವ ಹವ್ಯಾಸ ಬೆಳೆಸಿಕೊಂಡು ಜ್ಞಾನ ಸಂಪಾದಿಸಿ ಉನ್ನತ ಸ್ಥಾನ ಗಳಿಸಿದ್ದಾರೆ. ಪುಸ್ತಕ ಓದುವ ಸಂಸ್ಕೃತಿಯನ್ನು ಪ್ರತಿಪಾದಿಸಿದ್ದಾರೆ ಎಂದರು.
ಪುಸ್ತಕ ಓದುವ ಆಂದೋಲನವಾಗಿ ‘ಓದು ಕರ್ನಾಟಕ’ ಎಂಬ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಡಿಸೆಂಬರ್ ೧೮ರಂದು ತುಮಕೂರಿನಲ್ಲಿ ಉದ್ಘಾಟನೆಯಾಗಲಿದೆ. ನಗರದ ಎಲ್ಲಾ ೩೫ ವಾರ್ಡ್ಗಳಲ್ಲಿ ೩೫ ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಶಾಲೆ ಮಕ್ಕಳಲ್ಲಿ ಪುಸ್ತಕ ಓದುವ ಸಂಸ್ಕೃತಿ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಶಿವಶಂಕರ ಕಾಡದೇವರಮಠ ಹೇಳಿದರು.
ತುಮಕೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ರೂಪೇಶ್‌ಕುಮಾರ್ ಮಾತನಾಡಿ, ಸಾರ್ವಜನಿಕ ಗ್ರಂಥಾಲಯ ಎಂಬುದು ಸಾರ್ವಜನಿಕ ವಿಶ್ವವಿದ್ಯಾಲಯ. ಸಾರ್ವಜನಿಕ ಗ್ರಂಥಾಲಯ ಜೀವನಪರ್ಯಾಂತ ಎಲ್ಲರಿಗೂ ಜ್ಞಾನವನ್ನು ಧಾರೆ ಎರೆಯುವ, ವ್ಯಕ್ತಿತ್ವ ರೂಪಿಸುವ ಸಂಸ್ಥೆ. ಗ್ರಂಥಾಲಯ ಸಮಾಜದ ಮೇಲೆ ತನ್ನದೇ ಆದ ವಿಶೇಷ ಪರಿಣಾಮವನ್ನು ಬೀರುತ್ತದೆ. ಓದುಗ ಪ್ರವೃತ್ತಿ ಬೆಳೆಸಿಕೊಂಡ ಸಮಾಜ ಯಾವತ್ತೂ ನಾಗರೀಕ ಸಮಾಜ ಎಂದರು.
ಭಾರತದ ಅನೇಕ ಸಮಸ್ಯೆಗಳಿಗೆ ಅನಕ್ಷರತೆ ಕಾರಣ. ದೇಶದಲ್ಲಿ ಸಾಕ್ಷರತಾ ಪ್ರಮಾಣ ಬೆಳೆಸಲು ಸಾರ್ವಜನಿಕ ಗ್ರಂಥಾಲಯ ಸಹಕಾರಿ. ಓದುವುದರಿಂದ ಬೌದ್ಧಿಕ ಗುಣಮಟ್ಟ, ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗುತ್ತದೆ. ಜೀವನದಲ್ಲಿ ಉತ್ತಮ ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಬೆಳೆಯುತ್ತದೆ. ಇಂತಹ ಗ್ರಂಥಾಲಯ ಹಲವು ಪೀಳಿಗೆಗೆ ಜ್ಞಾನ ನೀಡುವ ಪರಂಪರಾಗತ ಸಂಸ್ಥೆ ಎಂದು ಹೇಳಿದರು.
ನಗರ-ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ದಿವಾಕರ್ ಮಾತನಾಡಿ, ಪುಸ್ತಕ ಓದುವ ಮೂಲಕ ಅಧ್ಯಯನಶೀಲತೆ, ಸಂಸ್ಕಾರ, ಪರಿಶ್ರಮದ ಪ್ರಯತ್ನದಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು. ಓದುವುದು ಎಂಬುದು ಜ್ಞಾನದ ಹಸಿವು. ಈ ಹಸಿವು ಇಂಗಿಸಿಕೊಳ್ಳಲು ಪುಸ್ತಕಗಳೇ ಆಹಾರ ಎಂದರು.
ಜ್ಞಾನ ಎಂಬುದು ಸಮುದ್ರ ಇದ್ದಂತೆ ಎಷ್ಟೇ ತಿಳಿದರೂ ಅಲ್ಪವೇ. ಪೋಷಕರು ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು ಎಂದು ಹೇಳಿದ ಅವರು, ನಗರದ ಗ್ರಂಥಾಲಯದಲ್ಲಿ ನಿತ್ಯ ಸುಮಾರು ೮೦೦ ವಿದ್ಯಾರ್ಥಿಗಳು ನಿಯಮಿತ ಓದುಗರಾಗಿದ್ದಾರೆ. ಇಲ್ಲಿ ನಿರಂತರ ಓದಿ ಜ್ಞಾನ ಬೆಳೆಸಿಕೊಂಡ ಹಲವರು ಸರ್ಕಾರಿ ಉದ್ಯೋಗ, ವಿವಿಧ ಉನ್ನತ ಸ್ಥಾನಮಾನ ಪಡೆದಿದ್ದಾರೆ ಎಂದರು.
ಸಿ.ವಿ.ರಾಮನ್ ಸಂಶೋಧನಾ ಕೇಂದ್ರದ ಗ್ರಂಥಾಲಯ ಮುಖ್ಯಸ್ಥ ನಾಗರಾಜು, ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್, ಕಾರ್ಯದರ್ಶಿ ಸುಮಿತ್ರಾ ನಾಗರಾಜು, ಗ್ರಂಥಪಾಲಕ ಬಸವರಾಜು, ಬಿ.ಎಸ್.ವಿಜಯಕುಮಾರ್ ಮೊದಲಾದವರು ಭಾಗವಹಿಸಿದ್ದರು.
ರಾಷ್ಟಿçÃಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕ ಓದುಗರಿಗೆ ಹಮ್ಮಿಕೊಂಡಿದ್ದ ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ, ರಂಗೋಲಿ ಸ್ಪರ್ಧೆ ವಿಜೇತರಿಗೆ, ಗ್ರಂಥಾಲಯದ ಉತ್ತಮ ಓದುಗರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಗ್ರಂಥಾಲಯದಲ್ಲಿ ಅಧ್ಯಯನ ಮಾಡಿ ಸರ್ಕಾರಿ ಉದ್ಯೋಗ ಪಡೆದವರನ್ನು ಗೌರವಿಸಲಾಯಿತು.

(Visited 1 times, 1 visits today)
Previous Articleಬೆಳೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ
Next Article ಪ್ರತಿಯೋಬ್ಬರು ಕನ್ನಡ ಭಾಷಾ ಪ್ರೇಮ ಬೆಳೆಸಿಕೊಳ್ಳಿ
News Desk Benkiyabale

Related Posts

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

By News Desk BenkiyabaleApril 03, 2026 4:46 pm

ಬೆಂಗಳೂರು: ಕರ್ನಾಟಕ ರಾಜ್ಯ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಂಘದ ವತಿಯಿಂದ ಆಯೋ ಜಿಸಲಾದ ವೈದ್ಯಕೀಯ ಲ್ಯಾಬ್ ತಂತ್ರಜ್ಞರ ಸಮ್ಮೇಳನ ಹಾಗೂ…

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.