
ತುಮಕೂರು: ಕನ್ನಡ ಸಾಹಿತ್ಯ ಪಂಪ, ರನ್ನ, ಜನ್ನ ಹಾಗೂ ಕುವೆಂಪು ಇವರುಗಳ ಕೊಡುಗೆ ಅಪಾರವಾಗಿದೆ. ವಿದ್ಯಾರ್ಥಿಗಳು ನೆನಪಿಸಿಕೊಳ್ಳಬೇಕು.“ಕಲೆಯಿಂದ-ದರ್ಶನ, ದರ್ಶನದಿಂದ-ಕಲೆ” ಎಂಬ ಕವಿವಾಣಿಯನ್ನು ನೆನಪಿಸುತ್ತಾ, ವಿದ್ಯಾರ್ಥಿಗಳು ಸಾಹಿತ್ಯಗಳ ಬಗ್ಗೆ ಪ್ರೇಮವನ್ನು ಬೆಳೆಸಿಕೊಳ್ಳಬೇಕು. ಪ್ರಾಧ್ಯಾಪಕರುಗಳು ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂದು ತುಮಕೂರಿನ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಡಾ.ಬಾಲಗುರುಮೂರ್ತಿ ರವರು ಅಭಿಪ್ರಾಯಪಟ್ಟಿದ್ದಾರೆ.
ನಗರದ ಬಿ.ಹೆಚ್.ರಸ್ತೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ತುಮಕೂರು ಜಿಲ್ಲೆ, ತುಮಕೂರಿನ ಅನನ್ಯ ಪದವಿ ಪೂರ್ವ ಕಾಲೇಜು, ಬಟವಾಡಿಯ ಶ್ರೀಗುರುಕುಲ ಪದವಿ ಪೂರ್ವ ಕಾಲೇಜು, ಸತ್ಯಮಂಗಲ ಜೈನ್ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ೨೦೨೫-೨೬ ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವನ್ನು ಅನನ್ಯ ವಾಣಿಜ್ಯ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ನ.೧೭ ರಂದು ಸೋಮವಾರ ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಡಾ.ಬಾಲಗುರುಮೂರ್ತಿರವರು ಮಾತನಾಡುತ್ತಾ ವಿದ್ಯಾರ್ಥಿಗಳ ಮನೋವಿಕಾಸವಾಗುವಲ್ಲಿ ಸಾಹಿತ್ಯ, ಸಾಂಸ್ಕೃತಿಕ ಇದರ ಬಗ್ಗೆ ಆಸಕ್ತಿಯನ್ನು ಬೆಳೆಸಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರಂಪರೆ ಮತ್ತು ಪ್ರಜ್ಞೆ ವಿದ್ಯಾರ್ಥಿಗಳಿಗೆ ಅರಿವು ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳ ದೆಸೆಯಿಂದಲೇ ಸಾಹಿತ್ಯವನ್ನು ಪುಸ್ತಕ, ಕವನ ಸಂಕಲನ, ಓದುವ ಹವ್ಯಾಸ ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಪೋಷಕರು ಹಾಗೂ ಪ್ರಾಧ್ಯಾಪಕರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಅಂಕಗಳನ್ನು ತೆಗೆಯುವುದು ಪೋತ್ಸಾಹ ನೀಡುವಂತೆ ಸಾಹಿತ್ಯ, ಕಲೆ, ಸಂಸ್ಕೃತಿ ಇವುಗಳನ್ನು ವಿದ್ಯಾರ್ಥಿಗಳು ಸಾಹಿತ್ಯ ಪೂರ್ಣಗೊಳ್ಳಬೇಕು. ಶಿಕ್ಷಕರು ತಮ್ಮ ಕೆಲಸವನ್ನು ಪ್ರೀತಿಸಬೇಕು. ಸಮಯಕ್ಕೆ ತನ್ನದೇ ಆದ ಮೌಲ್ಯವನ್ನು ನೀಡಬೇಕು. ಸಮಗ್ರ ಶಿಕ್ಷಣದ ಎಡೆಗೆ ಗಮನಹರಿಸಬೇಕು, ಸಮಗ್ರ ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅನನ್ಯ ಇನ್ಟಿ÷್ಸಟ್ಯೂಟ್ ಅಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್‌ನ ವತಿಯಿಂದ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಡಾ.ಬಾಲಗುರುಮೂರ್ತಿರವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು. ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಅಂಗವಾಗಿ ಏಕಪಾತ್ರ ಅಭಿನಯ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಜಾನಪದ ಸ್ಪರ್ಧೆ, ಜಾನಪದ ಗೀತೆ, ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹೀಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಶ್ರೀಗುರುಕುಲ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ಮಧುಜೈನ್.ಟಿ.ಎಸ್, ಜೈನ್ ಗ್ರೂಫ್ ಆಫ್ ಇನ್ಸಿ÷್ಟಟ್ಯೂಷನ್ ಪ್ರಾಂಶುಪಾಲರಾದ ವರುಣ್ ಕುಮಾರ್, ಅನನ್ಯ ಸಂಸ್ಥೆಯ ಟ್ರಸ್ಟಿಯಾದ ಡಾ.ಹೆಚ್.ಹರೀಶ್, ಅನನ್ಯ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಎಂ.ವಿಶ್ವಾಸ್, ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.





