BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ
  • ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್
  • ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ
  • ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ
  • ಕನ್ನಡ ನಾಡಿನ ಗತವೈಭವ ದರ್ಶನ
  • ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ
  • ನಗರದ ಮೆರುಗು ಹೆಚ್ಚಿಸಿದ ತುಮಕೂರು ದಸರಾ ಜಂಬು ಸವಾರಿ
  • ತುಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ಫೂರ್ತಿ
ಇತರೆ ಸುದ್ಧಿಗಳು

ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ಫೂರ್ತಿ

“ಸೇತುಬಂದ-೨೦೨೫” ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ ಅಶೋಕ್ ಮೆಹ್ತ ಅಭಿಪ್ರಾಯ
By News Desk BenkiyabaleUpdated:December 15, 2025 12:22 pm

ತುಮಕೂರು: ಇಂದಿನ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ಪರಿಚಯದಿಂದ ಸಾಕಷ್ಟು ಅನುಭವಗಳು, ಉತ್ತಮ ಸಂಪರ್ಕ ಹಾಗೂ ಉದ್ಯೋಗಾವಕಾಶಗಳ ಲಭ್ಯತೆ ಹೆಚ್ಚಾಗಿರುತ್ತದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ ಅಶೋಕ್ ಮೆಹ್ತ ಅಭಿಪ್ರಾಯ ಪಟ್ಟರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದ ಚಾಣುಕ್ಯ ಬ್ಲಾಕ್ ಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಮಾಗಮ ಕೂಟ “ಸೇತುಬಂದ-೨೦೨೫” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಹಳೆ ವಿದ್ಯಾರ್ಥಿಗಳು ಪರಿಚಯವನ್ನು ಇಂದಿನ ವಿದ್ಯಾರ್ಥಿಗಳು ಮಾಡಿಕೊಳ್ಳಿ, ಅವರ ಸಂಪರ್ಕವನ್ನು ನಿರಂತರವಾಗಿ ಇಟ್ಟುಕೊಳ್ಳಿ ಇವರೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಿ ಈ ಮೂಲಕ ಕಾಲೇಜಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮವಾದ ಅವಕಾಶಗಳು ದೊರೆಯುತ್ತದೆ. ಹಳೇ ವಿದ್ಯಾರ್ಥಿಗಳು ಕಾಲೇಜಿನೊಂದಿಗೆ ಯಾವಾಗಲೂ ನಿಕಟ ಸಂಪರ್ಕವನ್ನು ಹೊಂದುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಸಹಕರಿಸುತ್ತಿರಬೇಕು ಎಂದು ತಿಳಿಸಿದರು.
ಎಸ್ ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಎಸ್ ರವಿಪ್ರಾಕಾಶ್ ಮಾತನಾಡಿ ಹಳೇ ವಿದ್ಯಾರ್ಥಿಗಳು ಕಾಲೇಜಿನ ರಾಯಭಾರಿಗಳಿದ್ದ ಹಾಗೆ ಹಳೇ ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಎತ್ತರಕ್ಕೆ ಏರುತ್ತಿದ್ದರೆ ಕಾಲೇಜಿಗೆ ಹೆಮ್ಮೆ. ಹಳೇ ವಿದ್ಯಾರ್ಥಿಗಳಿಗೂ ಇಂದಿನ ವಿದ್ಯಾರ್ಥಿಗಳಿಗೆ ಉತ್ತಮ ಸ್ನೇಹ ಸಂಬ0ಧ ಈ ಸೇತು ಬಂಧ ಕಾರ್ಯಕ್ರಮದ ಮೂಲಕ ಉಂಟಾಗುತ್ತದೆ. ಹಳೇ ವಿದ್ಯಾರ್ಥಿಗಳ ಸಂಪರ್ಕದಿAದ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಜೀವನಕ್ಕೆ ಅವಕಾಶಗಳ ಬಾಗಿಲು ತೆರೆದಂತಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಹಳೆ ವಿದ್ಯಾರ್ಥಿಗಳ ಅನುಭವಗಳನ್ನು ಅವರ ಸಂಪರ್ಕವನ್ನು ಪಡೆದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಹಳೇ ವಿದ್ಯಾರ್ಥಿ ಹಾಗೂ ಕೆಪಿಎಂಜಿ ಕಂಪನಿಯ ಪಾರ್ಟ್ನರ್ ಕನ್‌ಸಲ್‌ಟಿಂಗ್ ಆದ ಸದಾಶಿವ ಹೆಗ್ಗಡೆ ಮಾತನಾಡಿ ಸಾಧನೆ ಶ್ರಮದಿಂದ ಮಾತ್ರ ಸಾಧ್ಯವಾಗುತ್ತದೆ. ಸಮಯ ಬೇಗ ಸರಿದುಹೋಗುತ್ತದೆ ಈ ಸಮಯವನ್ನು ವ್ಯರ್ಥಮಾಡದೆ ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ವೃತ್ತಿಭೂಮಿಗೆ ಕಾಲಿಡುವ ಮುನ್ನ ಅಗತ್ಯವಿರುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು, ನಿಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ, ನೀವು ಏನು ಮಾಡುತ್ತೀರ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತೀರ ಎಂಬುದರ ಮೇಲೆ ನಿಮ್ಮ ಭವಿಷ್ಯ ನಿರ್ಧಾರವಾಗಿರುತ್ತದೆ, ವಿದ್ಯಾರ್ಥಿಗಳು ಪ್ರಪಂಚದೊAದಿಗೆ ತೆರೆದುಕೊಳ್ಳಬೇಕು, ನಿಮ್ಮ ಸಂಪರ್ಕಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಹಳೇ ವಿದ್ಯಾರ್ಥಿ ಹಾಗೂ ನೋಕಿಯಾ ಕಂಪನಿಯ ಟಿಇಸಿ ಮ್ಯಾನೇಜರ್ ಆದ ಸಹನಾ ಮಾತನಾಡಿ ಕಾರ್ಪೊರೇಟ್ ಕಂಪನಿಗಳಲ್ಲಿ ಹೊಸ ಹೊಸ ಅವಕಾಶಗಳಿವೆ, ಈ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉದ್ದಿಮೆಗಳನ್ನು ಆರಂಭಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಯಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ಎಸ್ ಐಟಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ವೈ.ಎಂ ರೆಡ್ಡಿ, ಡಾ.ವೀರಯ್ಯ, ಅಕಾಡೆಮಿಕ್ ಡೀನ್ ಡಾ.ಎಸ್. ರೇಣುಕಾಲತಾ, ಸಿಎಸ್‌ಸಿ ವಿಭಾಗದ ಮುಖ್ಯಸ್ಥರಾದ ಡಾ.ರವಿರಾಮ್, ಸಹಾಯಕ ಪ್ರಾಧ್ಯಾಪಕರಾದ ಡಾ. ಜೀವಿತ್ ಸೇರಿದಂತೆ ಇಂಜಿನಿಯರಿ0ಗ್ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಪ್ರಾಧ್ಯಾಪಕರು, ಕಾಲೇಜಿನ ಹಳೇ ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವ
Next Article ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಶಾಶ್ವತ
News Desk Benkiyabale

Related Posts

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm news

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm news

ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ

October 23, 2026 6:06 pm news
ತಾಜಾ ಸುದ್ಧಿಗಳು
news

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm
news

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm
news

ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ

October 23, 2026 6:06 pm
news

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm
news

ಕನ್ನಡ ನಾಡಿನ ಗತವೈಭವ ದರ್ಶನ

October 22, 2026 5:21 pm
news

ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಸಂಭ್ರಮ

October 22, 2026 5:19 pm
Our Youtube Channel
Our Picks

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

October 23, 2026 6:10 pm

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm

ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ

October 23, 2026 6:06 pm

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm

ಕನ್ನಡ ನಾಡಿನ ಗತವೈಭವ ದರ್ಶನ

October 22, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ವೈಭವದಿಂದ ಹತ್ತನೇ ಉತ್ಸವ ಆಚರಿಸಲು ತೀರ್ಮಾನ

By News Desk BenkiyabaleOctober 23, 2026 6:10 pm

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆಯ ಈ ವರ್ಷದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮಹೋತ್ಸವ ವೈಭವದಿಂದ…

ವ್ಯರ್ಥವಾಗಬೇಕಾದ ಕುಂಬಳಕಾಯಿಯನ್ನು ಪ್ರಸಾದವನ್ನಾಗಿಸಿದ ಪ್ರಸಾದ್

October 23, 2026 6:08 pm

ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ

October 23, 2026 6:06 pm

ಬಟ್ಟೆ ಸುತ್ತಿಕೊಂಡ0ತೆ ಸುಕ್ಕುಗಟ್ಟಿದ ರಸ್ತೆ

October 22, 2026 5:22 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.