
ಬೆಳಗಾವಿ/ತುಮಕೂರು: ಬೆಳಗಾವಿಯಲ್ಲಿ ತುಮ ಕೂರು ಗ್ರಾಮಾಂತರದ ಅಭಿವೃದ್ಧಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದ ತುಮ ಕೂರು ಗ್ರಾಮಾಮತರ ಶಾಸಕ ಸುರೇಶ್ ಗೌಡ.
ಮುಖ್ಯಮಂತ್ರಿಗಳ ವಿಶೇಷ ಅನುದಾನವಾಗಿ ನಿರೀಕ್ಷಿತವಾಗಿರುವ 25 ಕೋಟಿ ರೂಪಾಯಿ ನಿಧಿ ಸಂಬ0ಧಿಸಿದ0ತೆ ಬೆಳಗಾವಿಯ ವಸತಿಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಲಾಯಿತು.
ಮುಂದಿನ ಅಧಿವೇಶನವನ್ನು ಗಮನದಲ್ಲಿಟ್ಟು ಕೊಂಡು, ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಹಲವು ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದು ಅಗತ್ಯ ಅನುದಾನ ಬಿಡುಗಡೆಗೆ ಸಿದ್ಧತೆ ನಡೆಸಲಾಯಿತು. ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿ, ಜನೋಪಯೋಗಿ ಯೋಜನೆಗಳು ಹಾಗೂ ಸಾರ್ವಜನಿಕ ಅಗತ್ಯಗಳನ್ನು ಪೂರೈಸುವ ಕಾರ್ಯಕ್ರಮಗಳನ್ನು ಕ್ರಿಯಾ ಯೋಜನೆಯಲ್ಲಿ ಒಳಗೊಂಡಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪ್ರಭಾ ಕರ್ ಅವರು ಉಪಸ್ಥಿತರಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ವಿಶೇಷ ಅನುದಾನ ಮಹತ್ವದ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪ ಡಿಸಿದರು. ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆಯಾದ ಬಳಿಕ ಯೋಜನೆಗಳನ್ನು ತ್ವರಿತವಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು.





