
ಮಧುಗಿರಿ: ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿಯಾಗಲಿದೆ ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದರು.
ಪಟ್ಟಣದ ಅದ್ವೈತ ಆಂಗ್ಲ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಾ ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಬೆಳೆಸಬೇಕಾಗಿದೆ ಅದರಲ್ಲೂ ಗ್ರಾಮಾಂತರ ಪ್ರದೇಶಗಳ ಶಾಲೆಗಳಲ್ಲಿ ಇಂತಹ ವಸ್ತು ಪ್ರದರ್ಶನಗಳನ್ನು ಏರ್ಪಡಿಸಿ ಆ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು..
ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎನ್ ಹನುಮಂತರಾಯಪ್ಪ ಮಾತನಾಡಿ ವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಲು ಸಹಾಯಕಾರಿಯಾಗಲಿದೆ ಜೊತೆಗೆ ವಿಜ್ಞಾನ ವಸ್ತು ಪ್ರದರ್ಶನ ಅನುಭವದ ಕಲಿಕೆ ಆಗಲಿದೆ ಇದರಿಂದ ಮಕ್ಕಳಲ್ಲಿನಾ ಪ್ರತಿಭೆ ಗುರುತಿಸಲು ಸಹಾಯಕಾರಿಯಾಗಲಿದೆ ಇದೇ ಅಲ್ಲದೆ ಮುಂದಿನ ಪೀಳಿಗೆಗೆ ವಿಜ್ಞಾನದ ಬಗ್ಗೆ ಆಸಕ್ತಿ ವಹಿಸಲು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಮತ್ತು ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕಾರಿಯಾಗಲಿದೆ ಎಂದರು.
ಸAಸ್ಥೆಯ ಕಾರ್ಯದರ್ಶಿ ಹಾಗೂ ಪುರಸಭಾ ಮಾಜಿ ಅಧ್ಯಕ್ಷ ಲಾಲಾ ಪೇಟೆ ಮಂಜುನಾಥ್ ಮಾತನಾಡಿ ವಿಜ್ಞಾನದ ವಸ್ತು ಪ್ರದರ್ಶನ ವಿದ್ಯಾರ್ಥಿಗಳು ಅಭಿರುಚಿಯನ್ನು ಬೆಳೆಸಿಕೊಳ್ಳಲು ಸಹಾಯಕಾರಿಯಾಗಲಿದೆ ಈ ಹಿನ್ನಲೆಯಲ್ಲಿ ನಮ್ಮ ಶಾಲೆಯಲ್ಲಿ ಪ್ರತಿ ವರ್ಷ ವಿಜ್ಞಾನ ವಸ್ತು ಪ್ರದರ್ಶನ ನಡೆಸಲಾಗುತ್ತಿದೆ ಇದರಿಂದ ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಲು ಕ್ರಿಯಾತ್ಮಕ ಮನೋಭಾವ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ವಸ್ತು ಪ್ರದರ್ಶನ ಸಹಾಯಕಾರಿಯಾಗಲಿದೆ ಎಂದು ತಿಳಿಸಿದರು. ಮುಖ್ಯೋಪಾಧ್ಯಾಯರಾದ ಮಂಜುಳಾ ನಾಗಭೂಷಣ್ ಮಾತನಾಡಿ ಇಂದಿನ ವಸ್ತು ಪ್ರದರ್ಶನದಲ್ಲಿ ಪುರಸಭೆ ಸಾರ್ವಜನಿಕ ಆಸ್ಪತ್ರೆ, ಪೊಲೀಸ್ ಠಾಣೆ, ಮಳೆ ನೀರು ಕೊಯ್ಲು ಸೋಲಾರ್ ಸಿಸ್ಟಮ್ ಹನಿ ನೀರಾವರಿ ಬಗ್ಗೆ ತಿಳಿಸುತ್ತಾ ವಿದ್ಯಾರ್ಥಿಗಳು ಉತ್ಸಾಹದಿಂದ ವಸ್ತು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಇಸಿಓ ರಾಘವೇಂದ್ರ ಪುರಸಭಾ ಸದಸ್ಯ ಮಂಜುನಾಥ ಆಚಾರ್ ಅದ್ವೈತ ಶಾಲೆಯ ಪ್ರಾಂಶುಪಾಲರಾದ ಶ್ರೀ ಮಂಜುಳಾ ನಾಗಭೂಷಣ್, ಕೃಪಾ ಮಂಜುನಾಥ್ ಮತ್ತಿತರರು ಹಾಜರಿದ್ದರು




