BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿ ರಾಮ್ ಜಿ ಅಪಪ್ರಚಾರ: ಕಾಂಗ್ರೆಸ್ ವಿರುದ್ಧ ಕಿಡಿ
ಇತರೆ ಸುದ್ಧಿಗಳು

ಜಿ ರಾಮ್ ಜಿ ಅಪಪ್ರಚಾರ: ಕಾಂಗ್ರೆಸ್ ವಿರುದ್ಧ ಕಿಡಿ

ಗ್ರಾಮೀಣ ಸೌಕರ್ಯಗಳ ಮಹತ್ವದ ಯೋಜನೆ: ಬಿಜೆಪಿ ನಾಯಕ ಡಾ.ಅಶ್ವತ್ಥನಾರಾಯಣ್
By News Desk BenkiyabaleUpdated:January 09, 2026 4:04 pm

ತುಮಕೂರು: ಉದ್ಯೋಗ ಸೃಷ್ಟಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ದೀರ್ಘ ಕಾಲದ ಸೌಕರ್ಯಗಳನ್ನು ಒದಗಿಸುವ ಗುರಿ ಹೊಂದಿರುವ ವಿಕಸಿತ ಭಾರತ-ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ -ಜಿ ರಾಮ್ ಜಿ) ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಅಪಪ್ರಚಾರ ಮಾಡುತ್ತಾ ಜನರನ್ನು ದಿಕ್ಕತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಡಾ.ಸಿ. ಅಶ್ವತ್ಥನಾರಾಯಣ ಆರೋಪಿಸಿದರು.
ಗುರುವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೦೬ರಲ್ಲಿ ಪ್ರಾರಂಭವಾದ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯನ್ನು ೨೦ ವರ್ಷದ ನಂತರ ಅದರ ಲೋಪದೋಷಗಳನ್ನು ಸರಿಪಡಿಸಿ, ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಸ್ವರೂಪದಲ್ಲಿ ಜನಪರವಾದ ಗ್ರಾಮೀಣ ಮೂಲಭೂತ ಸೌಕರ್ಯ, ಆಸ್ತಿ ನಿರ್ಮಾಣ, ಮೌಲ್ಯವರ್ಧನೆಗಾಗಿ ಜಾರಿಗೆ ತರಲಾಗುತ್ತಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖಂಡರು ಈ ಯೋಜನೆ ಬಗ್ಗೆ ಜನರಲ್ಲಿ ತಪ್ಪು ಭಾವನೆ ಬಿತ್ತುತ್ತಿದ್ದಾರೆ ಎಂದು ಟೀಕಿಸಿದರು.
ನ್ಯೂನ್ಯತೆ ಸರಿಪಡಿಸಿ ಯೋಜನೆಯನ್ನು ಉತ್ತಮಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಮುಖ್ಯವಾಗಿ ನೀರಿನ ಕೊರತೆ ನೀಗಿಸುವ ಕೆಲಸಗಳು, ಮೂಲಸೌಕರ್ಯಗಳು, ದೈನಂದಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಹಾಗೂ ಪ್ರಕೃತಿ ವಿಕೋಪಗಳನ್ನು ತಗ್ಗಿಸುವ ಕ್ರಮಗಳ ಜಾರಿಗೆ ಜಿ ರಾಮ್ ಜಿ ಯೋಜನೆಯಲ್ಲಿ ಒತ್ತು ನೀಡಲಾಗಿದೆ. ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಳ್ಳುವ ಈ ಯೋಜನೆಯಲ್ಲಿ ೬೦:೪೦ರ ಅನುಪಾತದಲ್ಲಿ ಕೇಂದ್ರ ಸರ್ಕಾರದ ಶೇಕಡ ೬೦ ಹಾಗು ರಾಜ್ಯ ಸರ್ಕಾರದ ಶೇಕಡ ೪೦ರಷ್ಟು ಅನುದಾನ ಭರಿಸಬೇಕಾಗಿದೆ ಎಂದರು.
ಕೇAದ್ರ ಸರ್ಕಾರ ಮಂಡಿಸಿರುವ ಈ ಮಸೂದೆಯಲ್ಲಿ ವರ್ಷದಲ್ಲಿ ೧೦೦ ದಿನಗಳ ಕೆಲಸದ ಅವಧಿಯನ್ನು ೧೨೫ ದಿನಕ್ಕೆ ಹೆಚ್ಚಿಸಲಾಗಿದೆ. ಮನರೇಗಾದಲ್ಲಿ ಕೇಂದ್ರ ಸರ್ಕಾರ ಶೇಕಡ ೧೦೦ರಷ್ಟು ಜತೆಗೆ ಶೇಕಡ ೭೫ರಷ್ಟು ಸಾಮಗ್ರಿಗಳ ವೆಚ್ಚವನ್ನು ಭರಿಸುತ್ತಿತ್ತು. ರಾಜ್ಯ ಸರ್ಕಾರ ಕೇವಲ ನಿರುದ್ಯೋಗ ಭತ್ಯೆ ಮತ್ತು ಶೇಕಡ ಕಚ್ಚಾ ವಸಸ್ತುಗಳ ವೆಚ್ಚವನ್ನು ಭರಿಸುತ್ತಿತ್ತು. ಜಿ ರಾಮ್ ಜೀ ಯೋಜನೆಯಲ್ಲಿ ವೇತನ ಮತ್ತು ಸಾಮಗ್ರಿಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ೬೦:೪೦ ಅನುಪಾತದಲ್ಲಿ ವೆಚ್ಚ ಭರಿಸಬೇಕು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ, ಆಸ್ತಿ ನಿರ್ಮಾಣ, ಮೌಲ್ಯವರ್ಧನೆಗೆ ಆದ್ಯತೆ ನೀಡುವ ಈ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿದ ಅವರು, ಈ ಯೋಜನೆಯ ಮಹತ್ವ ಹಾಗೂ ಉಪಯೋಗದ ಬಗ್ಗೆ ಬಿಜೆಪಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್‌ಗೌಡ, ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ನಗರ ಅಧ್ಯಕ್ಷ ಟಿ.ಕೆ.ಧನುಷ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಮುಖಂಡರಾದ ಗಣೇಶ್‌ಪ್ರಸಾದ್, ರಾಜಶೇಖರ್, ಜೆ.ಜಗದೀಶ್, ಹನುಮಂತರಾಜು ಮೊದಲಾದವರು ಹಾಜರಿದ್ದರು.

(Visited 1 times, 1 visits today)
Previous Articleದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ: ಪಟ್ಟಣದಲ್ಲಿ ಸಂಭ್ರಮಾಚರಣೆ
Next Article ಅರ್ಹ ಫಲಾನುಭವಿಗಳಿಗೆ ನಿವೇಶನ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.