BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
  • ೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ
  • ದುರಸ್ತಿ ವೇಳೆ ಬಯಲಾದ ಮಹಾ ನಿರ್ಲಕ್ಷ
  • ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶಬರಿಮಲೆ ಯಾತ್ರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಡಿಯುವ ನೀರಿನ ಅಸಮರ್ಪಕ ಸರಬರಾಜು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

ಪ್ರಗತಿ ಪರಿಶೀಲನಾ ಸಭೆ(ದಿಶಾ)ಯಲ್ಲಿ ಸಂಸದ ಗೋವಿಂದ ಎಂ. ಕಾರಜೋಳ ಸೂಚನೆ
By News Desk BenkiyabaleUpdated:February 21, 2026 4:50 pm

ತುಮಕೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಸಮರ್ಪಕ ನೀರು ಸರಬರಾಜು ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತಿಯಲ್ಲಿ ಶುಕ್ರವಾರ ನಡೆದ ಶಿರಾ ಮತ್ತು ಪಾವಗಡ ತಾಲ್ಲೂಕುಗಳಿಗೆ ಸಂಬ0ಧಿಸಿದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ(ದಿಶಾ)ಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಸುಮಾರು ೨೨೦೦ ಕೋಟಿ ರೂ. ವೆಚ್ಚದಲ್ಲಿ ಪಾವಗಡ ತಾಲ್ಲೂಕಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ ಅನುಷ್ಠಾನಗೊಳಿಸಿದ್ದರೂ ತಾಲ್ಲೂಕಿನ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಕುಡಿಯುವ ನೀರಿನ ಯೋಜನೆ ಸರಬರಾಜು ಮಾಡಲು ಜವಾಬ್ದಾರಿ ವಹಿಸಿಕೊಂಡಿರುವ ಏಜೆನ್ಸಿ ಹಾಗೂ ಸಂಬAಧಿಸಿದ ಇಲಾಖೆಗಳ ಅಸಮರ್ಪಕ ನಡೆಯಿಂದ ಕುಡಿಯುವ ನೀರು ಸರಬರಾಜಿನಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬAಧ ಮಧುಗಿರಿ ಉಪವಿಭಾಗಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.
ತಮ್ಮ ಕ್ಷೇತ್ರ ವ್ಯಾಪ್ತಿಯ ಶಿರಾ ಮತ್ತು ಪಾವಗಡ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಿಂದ ಕೂಡಿದ್ದು, ಕುಡಿಯುವ ನೀರಿನ ಅಭಾವ ಎದುರಿಸುತ್ತಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಭಾಗದ ಜನರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸಿದ್ದರೂ ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದು ಸರಿಯಲ್ಲ ಎಂದ ಅವರು, ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಆಗುವ ಸಂಭವವಿರುವುದರಿAದ ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಲಸ ನಿರ್ವಹಿಸಬೇಕು ಹಾಗೂ ಸಮಸ್ಯೆಯಿರುವ ಘಟಕಗಳನ್ನು ತಕ್ಷಣ ಸರಿಪಡಿಸಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಿಗೆ ನಿರಂತರ ಕುಡಿಯುವ ನೀರು ಸರಬರಾಜು ಮಾಡಲು ಸ್ಥಳೀಯ ಆಡಳಿತ ಕ್ರಮವಹಿಸಬೇಕು ಎಂದು ಸೂಚಿಸಿದರು.
ಕೇಂದ್ರದ ಶಿಕ್ಷಣ ನೀತಿ ಅನ್ವಯ ತ್ರಿಭಾಷಾ ಶಿಕ್ಷಣ ಪದ್ಧತಿ ಅತ್ಯಂತ ಅವಶ್ಯವಾಗಿದೆ ಎಂದ ಅವರು, ತ್ರಿಭಾಷಾ ನೀತಿ ಪದ್ಧತಿಯ ಶಿಕ್ಷಣ ವ್ಯವಸ್ಥೆ ಬಡವರಿಗೆ ಅನುಕೂಲಕರವಾಗಿದೆ. ಆದರೆ ರಾಜ್ಯ ಸರ್ಕಾರ ದ್ವಿಭಾಷಾ ನೀತಿ ತರುವುದರಿಂದ ಬಡವರಿಗೆ ಅನ್ಯಾಯವಾಗಲಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳಿಗಷ್ಟೇ ಅನುಕೂಲವಾಗಲಿದೆ. ಈ ತಾರತಮ್ಯ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಸಂಸದರು ತಿಳಿಸಿದರು.
ಸರ್ಕಾರಿ ಶಾಲಾ ಶಿಕ್ಷಕರು ಕೇವಲ ತಮ್ಮ ವೇತನ ಮತ್ತು ತಮ್ಮ ಕುಟುಂಬದ ಶ್ರೇಯಸ್ಸಿಗಷ್ಟೇ ದುಡಿಯದೆ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಬೇಕು. ಈ ಸಂಬAಧ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರಿಗೆ ಸರಿಯಾದ ಮಾರ್ಗದರ್ಶನ ನೀಡಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಮವಹಿಸುವಂತೆ ಅವರು ತಿಳಿಸಿದರು.
ಮೀನುಗಾರಿಕೆ ಇಲಾಖೆಯಿಂದ ಸಾಂಪ್ರದಾಯಿಕ ಮೀನುಗಾರರಿಗಾಗಿ ಸೌಲಭ್ಯಗಳನ್ನು ವಿತರಿಸಲು ಕೇಂದ್ರ ಸರ್ಕಾರದಿಂದ ಯೋಜನೆಗಳನ್ನು ರೂಪಿಸಿದ್ದು, ಇವುಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದ ಅವರು, ಕೆರೆಯ ನಿರ್ವಹಣಾ ಸಂಘಗಳು ಹಾಗೂ ಮೀನುಗಾರರ ಸಂಘಗಳನ್ನು ಇಲಾಖೆಯು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುವುದರಿಂದ ಪಾರದರ್ಶಕವಾಗಿ ಯೋಜನೆಗಳು ಫಲಾನುಭವಿಗಳನ್ನು ತಲುಪಲಿವೆ ಎಂದರು.
ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು ಎಂದ ಅವರು, ಬಡವರು ಹಾಗೂ ಪರಿಶಿಷ್ಟ ಸಮುದಾಯಗಳಿಗೆ ಯೋಜನೆಗಳು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಸಂಬ0ಧಿಸಿದ ಇಲಾಖೆ ಮುಖ್ಯಸ್ಥರು ಗಮನಹರಿಸುವಂತೆ ಸೂಚಿಸಿದರು.
ಪ್ರಸ್ತುತ ಆರ್ಥಿಕ ವರ್ಷ ಅಂತ್ಯದಲ್ಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಬಡವರು, ಶೋಷಿತ ಸಮುದಾಯಗಳ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದ0ತೆ ಕೆಲಸ ನಿರ್ವಹಿಸಲು ಇದೇ ಸಂದರ್ಭದಲ್ಲಿ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ಹಾಗೂ ದಿಶಾ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
Next Article ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm news

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm news

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm

೨೬ ವರ್ಷಗಳ ನಂತರ ಪ್ರೌಢಶಾಲೆ ಸ್ನೇಹಿತರ ಸಮ್ಮಿಲನ

June 16, 2026 5:29 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm

ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ

June 17, 2026 5:21 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

By News Desk BenkiyabaleJune 17, 2026 5:31 pm

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ…

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm

ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ

June 17, 2026 5:23 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.