BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

ಪಾವಗಡಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಭೆಟಿ: ಪರಿಶೀಲನೆ
By News Desk BenkiyabaleUpdated:February 21, 2026 5:02 pm
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 51;

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಸಮರ್ಪಕವೆಂದು ತೀವ್ರ ಟೀಕೆ ಮಾಡಿದ ಒಂದು ದಿನದೊಳಗೆ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಶನಿವಾರ ಪಾವಗಡಕ್ಕೆ ದೌಡಾಯಿಸಿ ಹಲವು ಇಲಾಖೆಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ರೊಪ್ಪ ಗ್ರಾಮದ ಬಳಿಯಿರುವ ಕುಡಿಯುವ ನೀರಿನ ಓವರ್‌ಹೆಡ್ ಟ್ಯಾಂಕ್ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಅಲ್ಲಿ ಕಂಡ ಅಸ್ವಚ್ಛತೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಗ್ರಾಮ ಪಂಚಾಯ್ತಿ ಪಿಡಿಒ ವಿಜಯ್ ಕುಮಾರ್ ಹಾಗೂ ಪುರಸಭೆಯ ಆರೋಗ್ಯ ನಿರೀಕ್ಷಕ ಶಂಸುದ್ದೀನ್ ಅವರನ್ನು ತರಾಟೆ ತೆಗೆದುಕೊಂಡರು.
ನAತರ ಪಟ್ಟಣದ ನಾಗರಕಟ್ಟೆ ಸಮೀಪದ ಹಳೆಯ ಪಂಪ್‌ಹೌಸ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿ ಬರುತ್ತಿದ್ದ ತುಂಗಭದ್ರ ಕುಡಿಯುವ ನೀರನ್ನು ಸ್ವತಃ ಕುಡಿದು ನೀರಿನ ಗುಣಮಟ್ಟವನ್ನು ಪರಿಶೀಲಿಸಿದರು.
ಆಶ್ರಯ ಬಡಾವಣೆಗೆ ತೆರಳಿ ಮನೆ ಮನೆಗೆ ನೀರು ಸರಬರಾಜು ಮಾಡುವ ಪೈಪ್ಲೈನ್ ವ್ಯವಸ್ಥೆ ಹಾಗೂ ನೀರಿನ ಗುಣಮಟ್ಟದ ಕುರಿತು ನಾಗರಿಕರಿಂದ ನೇರ ಮಾಹಿತಿ ಪಡೆದರು.
ಶಾರದ ವಿದ್ಯಾಪೀಠ ಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಪರಿಶೀಲಿಸಿದ ಅವರು, ಪರೀಕ್ಷೆಗೆ ಭಯಪಡದೆ ಗಮನಹರಿಸಿ ಅಧ್ಯಯನ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ಮುಂದೆ ಕೋಟೆಗುಡ್ಡದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದಾಗ, ಮುಖ್ಯ ಶಿಕ್ಷಕರು ಮತ್ತು ವಿಜ್ಞಾನ ಶಿಕ್ಷಕರು ಶಾಲೆಗೆ ಗೈರುಹಾಜರಾಗಿರುವುದು ಕಂಡು ಬಿಇಒ ಹಾಗೂ ಎಸಿಗಳಿಗೆ ಜಿಲ್ಲಾಧಿಕಾರಿಗಳು ತೀವ್ರ ಎಚ್ಚರಿಕೆ ನೀಡಿದರು. ಪರೀಕ್ಷಾ ಕಾಲದಲ್ಲಿ ಶಿಕ್ಷಕರು ರಜೆ ತೆಗೆದುಕೊಳ್ಳುವುದು ಗಂಭೀರ ವಿಷಯ ಎಂದು ಅವರು ಕಿಡಿಕಾರಿದ್ದು, ಮಧುಗಿರಿ ಡಿಡಿಪಿಐ ಅವರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ದೂರವಾಣಿ ಮೂಲಕ ಸೂಚಿಸಿದರು.
ಪಟ್ಟಣದ ಪಿಎಂ ಶ್ರೀ ಆದರ್ಶ ಶಾಲೆಯಲ್ಲಿ ಪಿಎಂ ಶ್ರೀ ಯೋಜನೆಯಡಿ ಖರೀದಿಸಿದ ಲಕ್ಷಾಂತರ ಮೌಲ್ಯದ ಪರಿಕರಗಳು ಸಮರ್ಪಕವಾಗಿ ಬಳಸಲಾಗದಿರುವುದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡರು. ಮುಖ್ಯಶಿಕ್ಷಕ ವೇಂಕಟೇಶ್ ಅವರಿಗೆ ಪರಿಕರಗಳನ್ನು ವಿದ್ಯಾರ್ಥಿಗಳ ಕಲಿಕೆಗೆ ಪರಿಣಾಮಕಾರಿ ರೀತಿಯಲ್ಲಿ ಬಳಸುವಂತೆ ಸೂಚಿಸಿದರು. ಸ್ಮಾರ್ಟ್ ಕ್ಲಾಸ್ ಸಾಧನಗಳು ಇದ್ದರೂ ತರಗತಿಯಲ್ಲಿ ಬಳಕೆಯಾಗದಿರುವುದು ಸರಿಯಾದ ಕ್ರಮವಲ್ಲ ಎಂದರು.
ಈ ವೇಳೆ ಮದುಗಿರಿಯ ಎಸಿ ಗೋಟುರು ಶಿವಪ್ಪ, ತಹಸಿಲ್ದಾರ್ ವೈ. ರವಿ, ಇಒ ಮಧುಸೂದನ್, ಬಿಇಒ ರೇಣುಕಮ್ಮ, ಬೆಸ್ಕಾಂ ಎಇಇ ಕೃಷ್ಣಮೂರ್ತಿ, ಗ್ರಾಮೀಣ ಕುಡಿಯುವ ನೀರು ವಿಭಾಗದ ಜೆಇ ಬಸವಲಿಂಗಪ್ಪ, ಜೆಇ ಅಂಜಿಬಾಬು, ಹೊಸಕೋಟೆ ಆರ್‌ಐ ಕಿರಣ್ ಕುಮಾರ್, ಸಿಎಓ ಭಾಗ್ಯಮ್ಮ, ಆರೋಗ್ಯ ನಿರೀಕ್ಷಕ ಶಂಸುದ್ದೀನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಆಅ ಜೊತೆಗಿದ್ದರು.

(Visited 1 times, 1 visits today)
Previous Articleಕುಡಿಯುವ ನೀರಿನ ಅಸಮರ್ಪಕ ಸರಬರಾಜು
Next Article ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.