ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ (Pಒ-ಗಿಃಖಙ)ಯ ಯಶಸ್ವಿ ಅನುಷಾನವನ್ನು ಗುರುತಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಜೂನ್ ೧೯ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ರಾಷ್ಟಿçÃಯ Pಒ ಗಿಇಖಙ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ಈ ಕಾರ್ಯಕ್ರಮದ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳು ನೇರ ಲಾಭ ವರ್ಗಾವಣೆ (ಆಃಖಿ) ಮೂಲಕ ಫಲಾನುಭವಿಗಳಿಗೆ ಸುಮಾರು ೨,೪೦೦ ಕೋಟಿ ಮೊತ್ತದ ಪ್ರೋತ್ಸಾಹ ಧನವನ್ನು ವಿತರಿಸಲಿದ್ದಾರೆ.
Pಒ-ಗಿಃಖಙ ಅಡಿಯಲ್ಲಿ ಈ ಪ್ರೋತ್ಸಾಹ ಧನ ವಿತರಣೆಯು ೧೫ಲಕ್ಷಕ್ಕೂ ಹೆಚ್ಚು ಜನರಿಗೆ ಹೆಚ್ಚುವರಿ ಉದ್ಯೋಗವನ್ನು ಬೆಂಬಲಿಸುವ ನಿರೀಕ್ಷೆಯಿದೆ. ಉದ್ಯೋಗದಾತ ಮತ್ತು ಉದೋಗಿ ಫಲಾನುಭವಿಗಳು ಮತ್ತು ಇತರ ಗಣ್ಯ ಅತಿಥಿಗಳು ಸೇರಿದಂತೆ ಸುಮಾರು ೧,೨೦೦ ಆಹ್ವಾನಿತರು ನವದೆಹಲಿಯಲ್ಲಿ ನಡೆಯುವ ಮುಖ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದೇಶದ ವಿವಿಧ ಪ್ರದೇಶಗಳನ್ನು ಪ್ರತಿನಿಧಿಸುವ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿಗಳು ಸಂವಹನ ನಡೆಸಲಿದ್ದಾರೆ. ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುವುದು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವ ಡಾ: ಮನ್ಸುಖ್ ಮಾಂಡವಿಯಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯಸಚಿವ ಸುಶ್ರೀ ಶೋಭಾ ಕರಂದ್ಲಾಜೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ತುಮಕೂರಿನಲ್ಲಿ ಈ ಕಾರ್ಯಕ್ರಮವು ಬಿರ್ಲಾ ಆಡಿಟೋರಿಯಂ, ಎಸ್.ಐ.ಟಿ. ಕಾಲೇಜು ಕಾಂಪಸ್‌ನಲ್ಲಿ ಜೂನ್ ೧೯ರ ಸಂಜೆ ೪.೩೦ ರಿಂದ ನಡೆಯಲಿದ್ದು, ತುಮಕೂರು ನಗರ ಶಾಸಕ ಜಿ. ಬಿ. ಜ್ಯೋತಿಗಣೇಶ್ ಮತ್ತು ತುಮಕೂರು ಗ್ರಾಮೀಣ ಶಾಸಕ ಬಿ. ಸುರೇಶ್‌ಗೌಡ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸರ್ಕಾರಿ ಅಧಿಕಾರಿಗಳು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಹಾಜರಾಗಲು ಮತ್ತು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತುಮಕೂರು ಇ.ಪಿ.ಎಫ್.ಒ. ಪಾದೇಶಿಕ ಪಿಎಫ್ ಆಯುಕ್ತ ವಂಶಿ ಕೃಷ್ಣದಿಂಡಿ ಮನವಿ ಮಾಡಿದ್ದಾರೆ.

