BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
  • ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ
  • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ
  • ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ
  • ಬಾಹ್ಯ ಯಶಸ್ಸಿನ ಆತುರದಲ್ಲಿ ಅಂತರ್ಯದ ಯಶಸ್ಸು ಮರೆಯದಿರಿ
  • ಯುವಜನತೆ ಕೆಂಪೇಗೌಡರ ಆದರ್ಶಗಳನ್ನು ಅಳವಡಿಸಿಕೊಳ್ಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
news

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

ಶೌಚ ಗುಂಡಿ ಶುಚಿಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ
By News Desk BenkiyabaleUpdated:June 30, 2026 5:00 pm

ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬAಧಿಸಿದAತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರಾದೃಷ್ಟಕರ, ಘಟನೆಗೆ ಸಂಬAಧಿಸಿದAತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ಘಟನೆ ನಡೆದು ೩ ದಿನಗಳು ಆಗಿದ್ದರೂ, ತಪ್ಪಿತಸ್ಥರನ್ನು ಈವರೆಗೆ ಬಂಧಿಸಲಾಗಿಲ್ಲ ಹಾಗೂ ಅಧಿಕಾರಿಗಳು ಘಟನೆಗೆ ಸಂಬAಧಿಸಿದAತೆ ಸರಿಯಾದ ಕ್ರಮ ಜರುಗಿಸದ ಕಾರಣ ಆಯೋಗ ಮಧ್ಯ ಪ್ರವೇಶ ಮಾಡಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ, ಅಧಿಕಾರಿಗಳ ಹಂತದಲ್ಲಿ ಮಹಜರು ಇತ್ಯಾದಿ ಪ್ರಕ್ರಿಯೆಗಳು ನಡೆದಿವೆ. ಮುಂದಿನ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬAಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಮಲ ಹೊರುವ ಪದ್ಧತಿಗೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ನ ಆದೇಶ ಪ್ರಕಾರ ಸಂಬAಧಿಸಿದ ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಹಜರು ಮಾಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದರೂ ಉಪವಿಭಾಗಾಧಿಕಾರಿ ಅವರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ನಿಲ್ಲಲಿದ್ದು, ತಕ್ಷಣ ಕಾರ್ಯೋನ್ಮುಖರಾಗಿ ದೂರು ದಾಖಲಿಸುವಂತೆ ಉಪವಿಭಾಗಾಧಿಕಾರಿಗೆ ಅವರು ಸೂಚನೆ ನೀಡಿದರು.
ಅಲ್ಲದೆ, ಪ್ರಕರಣ ಗಂಭೀರ ಸ್ವರೂಪದ್ದಾಗಿರುವುದರಿಂದ ಘಟನೆಯ ಸಂಬAಧಿಸಿದAತೆ ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಆಯೋಗಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಅವರು ಸೂಚಿಸಿದರು.
ಕೆಇಬಿ ಸಮುದಾಯ ಭವನ ನಗರದ ಹೃದಯ ಭಾಗದಲ್ಲಿದ್ದು, ಯುಜಿಡಿ ವ್ಯವಸ್ಥೆಯ ಪಕ್ಕದಲ್ಲೇ ಪಿಟ್ ಗುಂಡಿಗಳನ್ನು ಯಾವ ಕಾರಣಕ್ಕೆ ಮಾಡಲಾಗಿದೆ? ಹಾಗೂ ಇಂತಹ ಸಮುದಾಯ ಭವನಗಳು, ಮಧುವೆ ಮಂಟಪಗಳು, ಹೋಟೆಲ್‌ಗಳು ಇತ್ಯಾದಿ ಕಟ್ಟಡಗಳ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಅನುಮತಿ ಕೊಡುವ ಮಹಾನಗರಪಾಲಿಕೆ ಇಂತಹ ವಿಷಯಗಳಲ್ಲಿ ಗಮನ ಹರಿಸುವುದಿಲ್ಲವೇ ಎಂಬ ಇತ್ಯಾದಿ ವಿಷಯಗಳ ಬಗ್ಗೆ ಅವರು ಗಂಭೀರವಾಗಿ ಪ್ರಶ್ನಿಸಿದರು.
ಪ್ರಕರಣದಲ್ಲಿ ಪರಿಶಿಷ್ಟ ಜಾತಿಯ ಕಾರ್ಮಿಕರನ್ನು ಬಳಸಿಕೊಂಡಿರುವುದು ಕಂಡು ಬಂದಿದ್ದು, ಉಪವಿಭಾಗಾಧಿಕಾರಿಗಳು ಈ ಕೂಡಲೇ ಯಾವ ಯಾವ ನಿಯಮಗಳಲ್ಲಿ ಪ್ರಾಥಮಿಕ ವರದಿಯಲ್ಲಿ ಕೇಸು ದಾಖಲಿಸಬಹುದೆಂಬ ಬಗ್ಗೆ ಗಮನಹರಿಸಿ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ಈ ಕೂಡಲೇ ಕೈಗೊಂಡ ಕ್ರಮದ ಬಗ್ಗೆ ಆಯೋಗ ಹಾಗೂ ಮಾಧ್ಯಮದವರಿಗೆ ಮಾಹಿತಿ ನೀಡುವಂತೆ ಅಧ್ಯಕ್ಷರು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಮಹಾನಗರಪಾಲಿಕೆ ಆಯುಕ್ತ ಬಿ.ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜûಂ ಜûಂ, ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಓಬಳೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
crime DC local news Mla jyothiganesh tumkur Tumkur mahanagara palike ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
Next Article ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
News Desk Benkiyabale

Related Posts

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm news

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm news

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm news
ತಾಜಾ ಸುದ್ಧಿಗಳು

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm

ಇದು ಸಂವಿಧಾನದತ್ತವಾಗಿ ಪಡೆವ ಹಕ್ಕನ್ನು ಕಸಿಯುವ ಬಿಜೆಪಿಯ ಕುತಂತ್ರ

June 29, 2026 5:30 pm
Our Youtube Channel
Our Picks

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm

ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯಕ್ಕೆ ಖಂಡನೆ

June 29, 2026 5:32 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

By News Desk BenkiyabaleJune 30, 2026 5:10 pm

ತುಮಕೂರು: ಪೌತಿ ಖಾತಾ ಆಂದೋಲನ-೨ರ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೋಮವಾರ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ವ್ಯಾಪ್ತಿಯ…

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು

June 30, 2026 5:00 pm

ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು

June 30, 2026 4:58 pm

ಜನರಿಗೆ ಜಮೀನುಗಳ ಬಗ್ಗೆ ಕಾನೂನು ಅರಿವು ಅತ್ಯವಶ್ಯಕ

June 29, 2026 5:35 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.