
ಕೊರಟಗೆರೆ: ಗಡಿ ಭಾಗಗಳ ಕನಸಿನ ಕೂಸಾದ ರೈಲು ಸಂಚಾರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಬಂದAತೆ ಕಾಣಿಸುತ್ತದೆ.
ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನ ೨೦೧೨ರಲ್ಲಿ ಆರಂಭಿಸಲಾಯಿತ್ತು. ಒಟ್ಟು ೨೦೬ ಕಿ.ಮೀ. ಉದ್ದದ ಲೈನ್ ಆಗಬೇಕಿದೆ. ಸುಮಾರು ೧೮೫೦ ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ಘೋಷಿಸಿದ್ದರೂ, ಆ ನಂತರ ೨೫೦೦ ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ೧೨೫ ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ.
ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ ೮೧ ಕಿ.ಮೀ ವರೆಗೂ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನ ತೆರವು ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ನನಗುದ್ದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭವಾಗಿರುವುದು ಈ ಭಾಗದ ಕೂಲಿ ಕಾರ್ಮಿಕರಿಗೆ, ತುಮಕೂರು ಬೆಂಗಳೂರಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಸಂತಸ ತಂದಿದೆ.
ಕೇAದ್ರ ರೈಲ್ಚೆ ಸಚಿವ ವಿ.ಸೋಮಣ್ಣ ಭರವಸೆ:
ತುಮಕೂರು ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಜಯಗಳಿಸಿದ ಮೊದಲ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ರೈಲ್ಚೆ ಸಚಿವರಾಗಿ ಸೋಮಣ್ಣ ಅವರನ್ನ ಆಯ್ಕೆ ಮಾಡಿದ್ದು ತುಮಕೂರು ಜನರಿಗೆ ಅದೃಷ್ಟ ಬಂದAತೆ ಆಯಿತು.ತುಮಕೂರು ಜಿಲ್ಲೆಯಲ್ಲಿ ಹಲವಾರು ರೈಲ್ವೆ ಕಾಮಗಾರಿಗಳು ನೆನಗುದ್ದಿಗೆ ಬಿದ್ದಿದ್ದ, ಕಾಮಗಾರಿಗಳು ಇಂದು ಚಾಲನೆಗೊಂಡಿವೆ ಹಾಗೆ ಕಾಮಗಾರಿಗಳು ಮುಗಿದಿವೆ. ಇದರ ಜೊತೆಗೆ ಹಲವಾರು ವರ್ಷಗಳಿಂದ ಕಾಮಗಾರಿನೇ ಪ್ರಾರಂಭವಾಗದ ತುಮಕೂರು ರಾಯದುರ್ಗ ಕಾಮಗಾರಿಗೆಚಾಲನೆ ನೀಡಲಾಗಿದೆ. ಈಗಾಗಲೇ ಅನೇಕ ಬಾರಿ ಕೇಂದ್ರ ರೈಲ್ಚೆ ಸಚಿವ ವಿ.ಸೋಮಣ್ಣ ಅವರು ೨೦೨೭ರ ಒಳಗೆ ಕಾಮಗಾರಿ ಮುಗಿಯುವ ಭರವಸೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರೈಲ್ವೆ ಕಾಮಗಾರಿ ವೀಕ್ಷಣೆ: ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿ ಹಲವು ವರ್ಷಗಳಿಂದ ನೆನಗುದ್ದಿಗೆ ಬಿದ್ದಿದ್ದು, ಉಪ ಮುಖ್ಯಮಂತ್ರಿ ಸ್ಥಾನ ಪಡೆಯುತ್ತಿದಂತೆ ಡಾ.ಜಿ.ಪರಮೇಶ್ವರ್ ಅವರು ಪಾವಗಡ ರೈಲು ನಿಲ್ದಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಒಂದು ವರ್ಷದೊಳಗೆ ಪಾವಗಡದಿಂದ ತುಮಕೂರಿನವರೆಗೆ ಕಾಮಗಾರಿಯನ್ನ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

