
ತುಮಕೂರು: ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು ಬುಧವಾರ ೧೭೫ ನೇರಪಾವತಿ ಪೌರಕಾರ್ಮಿಕರಿಗೆ ನೇರಪಾವತಿ ಆದೇಶ ಪತ್ರವನ್ನು ವಿತರಿಸಿದರು.
ನಗರದ ಮಹಾನಗರಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ನೇರ ಪಾವತಿ ಪೌರಕಾರ್ಮಿಕರಿಗೆ ನೇರ ಪಾವತಿ ಆದೇಶ ಪತ್ರ ವಿತರಣೆ, ಪಿಪಿಪಿ ಎಲ್‌ಇಡಿ ಯೋಜನೆಯಡಿ ಹೆಚ್ಚುವರಿ ಬೀದಿ ದೀಪ ಅಳವಡಿಸುವ ಕಾಮಗಾರಿ, ಯುಜಿಡಿ-ನಮಸ್ತೆ ಕಿಟ್ಸ್ ಪರಿಕರಗಳ ಹಾಗೂ ಪರಿಹಾರ ವಿತರಣೆ, ಪೌರ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ಶಾಲಾ ಶುಲ್ಕ ಮರುಪಾವತಿ, ಕಾರ್ಯನಿರತ ಪತ್ರಕರ್ತರಿಗೆ ನಗದು ರಹಿತ ಆರೋಗ್ಯ ವಿಮೆ ಸೌಲಭ್ಯ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಆದೇಶ ಪತ್ರವನ್ನು ವಿತರಿಸಿ ಮಾತನಾಡುತ್ತಾ, ಪೌರಕಾರ್ಮಿಕರ ಕುಟುಂಬದ ಹಿತ ದೃಷ್ಟಿಯಿಂದ ಅವರ ನೇಮಕಾತಿಯನ್ನು ಖಾಯಂ ಮಾಡಲಾಗಿದೆ. ಪೌರ ಕಾರ್ಮಿಕರ ಯೋಗ ಕ್ಷೇಮಕ್ಕಾಗಿ ಪಾಲಿಕೆಯು ಜೊತೆಗಿರುವುದರೊಂದಿಗೆ ವಿವಿಧ ಸೌಲಭ್ಯಗಳನ್ನು ನೀಡಲಿದೆ ಎಂದು ತಿಳಿಸಿದರು.
ತುಮಕೂರು ನಗರವು ಉದ್ಯಾನನಗರಿ ಬೆಂಗಳೂರಿನAತೆಯೇ ವೇಗವಾಗಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರೂ ಸಹ ಸ್ವಚ್ಛ ನಗರವನ್ನಾಗಿ ನಿರ್ಮಿಸಲು ಪ್ರಯತ್ನಿಸಬೇಕು. ಇಡೀ ನಗರವನ್ನು ಸುಂದರ ಹಾಗೂ ಹಸಿರಾಗಿಸಲು ಗಿಡಗಳನ್ನು ನೆಡಬೇಕು ಎಂದರಲ್ಲದೆ, ಜಿಲ್ಲೆಯ ೧೪ ಪಂಚಾಯ್ತಿಗಳನ್ನು ಸೇರಿಸಿ ಗ್ರೇಟರ್ ತುಮಕೂರನ್ನಾಗಿ ಮಾಡುವ ಪ್ರಸ್ತಾವನೆಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪಾಲಿಕೆಗೆ ಒಉಙ ಯೋಜನೆಯಡಿ ೨೦೦ ಕೋಟಿ ರೂ.ಗಳು ಮಂಜೂರಾಗಿದ್ದು, ಇದರಲ್ಲಿ ಬೀದಿ ದೀಪ, ಉದ್ಯಾನ ಇತ್ಯಾದಿ ಕೆಲಸಗಳನ್ನು ಕೈಗೊಳ್ಳಲಾಗುವುದು. ನಗರದಲ್ಲಿ ಈಗಾಗಲೇ ಸಿಸಿಎಂಎಸ್ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಪ್ರಗತಿಯಲ್ಲಿರುವ ತುಮಕೂರು ನಗರದ ಕುಡಿಯುವ ನೀರಿನ ಯೋಜನೆಗಳಿಗೂ ಈ ಹಣವನ್ನು ವಿನಿಯೋಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ. ಶುಭ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ಮತ್ತಿತರರು ಉಪಸ್ಥಿತರಿದ್ದರು.

