BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

By News Desk BenkiyabaleUpdated:July 14, 2026 4:02 pm

ತುಮಕೂರು: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟç ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, “ಅಭಿವೃದ್ಧಿ ಹೊಂದಿದ ಭಾರತ-೨೦೪೭” ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್‌ನ ಬಿದರಕಟ್ಟೆಯಲ್ಲಿ ಸೋಮವಾರ ನಡೆದ ಹೊಸದಾಗಿ ನಿರ್ಮಿಸಲಾದ ಕೇಂದ್ರೀಕೃತ ಅಡುಗೆಮನೆ, ಗ್ರಂಥಾಲಯ ಕಟ್ಟಡ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಮತ್ತು ಶೈಕ್ಷಣಿಕ ಬ್ಲಾಕ್ ೨ರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವವಿದ್ಯಾನಿಲಯದಲ್ಲಿ ನಿರ್ಮಾಣ ಗೊಂಡಿರುವ ಹೊಸ ಮೂಲಸೌಕರ್ಯಗಳು ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಂಶೋಧಕರಿಗೆ ಅತ್ಯುತ್ತಮ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ವಿಶ್ವವಿದ್ಯಾನಿಲಯದ ಹೆಗ್ಗಳಿಕೆಯನ್ನು ಹೆಚ್ಚಿಸಲಿವೆ ಎಂದು ರಾಜ್ಯಪಾಲರು ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಭೇಟಿ ನೀಡಿರುವುದಾಗಿ ತಿಳಿಸಿದ ರಾಜ್ಯಪಾಲರು, ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಪ್ರಶಂಸನೀಯವಾಗಿದ್ದು, ಸರ್ಕಾರದ ಜೊತೆಗೆ ವಿವಿಧ ಲೋಕೋಪಕಾರಿ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಅSಖ) ಅಡಿಯಲ್ಲಿ ದೊರೆತಿರುವ ಸಹಕಾರವು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ. ಸಿಎಸ್‌ಆರ್ ನೆರವಿನಡಿ ಸುಮಾರು ೧ ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿರುವ ಇನ್ಕುö್ಯಬೇಷನ್ ಕೇಂದ್ರವು ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸಂಶೋಧನೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸಲಿದೆ. ಜ್ಞಾನಸಿರಿ ಕ್ಯಾಂಪಸ್‌ನಲ್ಲಿ ಜೀವವೈವಿಧ್ಯ ಸಂರಕ್ಷಣೆ ಹಾಗೂ ಹಸಿರು ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳೂ ಶ್ಲಾಘನೀಯವೆಂದು ಹೇಳಿದರು.
ಗ್ರಂಥಾಲಯವು ಯಾವುದೇ ವಿಶ್ವವಿದ್ಯಾನಿಲಯದ ಹೃದಯವಾಗಿದ್ದು, ಅದು ಕೇವಲ ಪುಸ್ತಕಗಳ ಸಂಗ್ರಹವಲ್ಲ; ಸಂಶೋಧನೆ, ನಾವೀನ್ಯತೆ ಹಾಗೂ ಬೌದ್ಧಿಕ ಸಂವಾದದ ಕೇಂದ್ರವಾಗಿದೆ. ಹೊಸ ಗ್ರಂಥಾಲಯವು ವಿದ್ಯಾರ್ಥಿಗಳಿಗೆ ಡಿಜಿಟಲ್ ಸಂಪನ್ಮೂಲಗಳು, ಇ-ಪುಸ್ತಕಗಳು ಹಾಗೂ ಆಧುನಿಕ ಅಧ್ಯಯನ ಸೌಲಭ್ಯಗಳ ಮೂಲಕ ವಿಶ್ವದರ್ಜೆಯ ಅಧ್ಯಯನ ಮತ್ತು ಸಂಶೋಧನೆಗೆ ವೇದಿಕೆಯಾಗಲಿದೆ. ಕೇಂದ್ರೀಕೃತ ಅಡುಗೆಮನೆಯು ವಿದ್ಯಾರ್ಥಿಗಳ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ವಿಶ್ವವಿದ್ಯಾನಿಲಯದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಆರೋಗ್ಯಕರ ವಿದ್ಯಾರ್ಥಿಗಳೇ ಬಲಿಷ್ಠ ರಾಷ್ಟç ನಿರ್ಮಾಣದ ಆಧಾರವಾಗಿದ್ದು, ಗುಣಮಟ್ಟದ ಆಹಾರವು ವಿದ್ಯಾರ್ಥಿಗಳ ಏಕಾಗ್ರತೆ ಹಾಗೂ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಒಳಾಂಗಣ ಕ್ರೀಡಾಂಗಣವು ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ವಿಶ್ವವಿದ್ಯಾನಿಲಯದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ ರಾಜ್ಯಪಾಲರು, ಕ್ರೀಡೆಗಳು ಶಿಸ್ತು, ನಾಯಕತ್ವ, ಆತ್ಮವಿಶ್ವಾಸ ಹಾಗೂ ತಂಡ ಮನೋಭಾವವನ್ನು ಬೆಳೆಸುತ್ತವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ “ಫಿಟ್ ಇಂಡಿಯಾ” ಹಾಗೂ “ಖೇಲೋ ಇಂಡಿಯಾ” ಅಭಿಯಾನಗಳು ದೇಶದಲ್ಲಿ ಕ್ರೀಡಾ ಸಂಸ್ಕೃತಿಗೆ ಹೊಸ ದಿಕ್ಕು ನೀಡಿದ್ದು, ಈ ಕ್ರೀಡಾಂಗಣದಿAದ ರಾಷ್ಟ್ರೀಯ ಹಾಗೂ ಅಂತರರಾಷ್ಟಿçÃಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಶೈಕ್ಷಣಿಕ ಬ್ಲಾಕ್೨ರ ನಿರ್ಮಾಣವು ಭವಿಷ್ಯದ ಪೀಳಿಗೆಯ ಕನಸುಗಳಿಗೆ ಭದ್ರ ಅಡಿಪಾಯವಾಗಿದ್ದು, ಆಧುನಿಕ ಪ್ರಯೋಗಾಲಯಗಳು, ಸ್ಮಾರ್ಟ್ ತರಗತಿ ಕೊಠಡಿಗಳು, ಸಂಶೋಧನಾ ಸೌಲಭ್ಯಗಳು ಹಾಗೂ ನಾವೀನ್ಯತೆ ಕೇಂದ್ರಗಳ ಮೂಲಕ ವಿಶ್ವವಿದ್ಯಾನಿಲಯವು ಶ್ರೇಷ್ಠತೆಯ ಹೊಸ ಎತ್ತರವನ್ನು ತಲುಪಲಿದೆ. ಇಂದು ಜಗತ್ತು ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ, ಜೈವಿಕ ತಂತ್ರಜ್ಞಾನ, ಹಸಿರು ಶಕ್ತಿ, ಸೈಬರ್ ಭದ್ರತೆ ಹಾಗೂ ಡಿಜಿಟಲ್ ನಾವೀನ್ಯತೆಗಳ ಯುಗವನ್ನು ಪ್ರವೇಶಿಸಿದ್ದು, ಈ ಪರಿವರ್ತನೆಗೆ ಭಾರತ ನಾಯಕತ್ವ ನೀಡುವ ಸಾಮರ್ಥ್ಯ ಹೊಂದಿದೆ. ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ರಾಷ್ಟçದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರಾಜ್ಯಪಾಲರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ, ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಸಂಸತ್ ಹಾಗೂ ವಿಧಾನಮಂಡಲದ ಸದಸ್ಯರು, ಸಿಂಡಿಕೇಟ್ ಮತ್ತು ಶೈಕ್ಷಣಿಕ ಮಂಡಳಿಯ ಸದಸ್ಯರು, ಸಾರ್ವಜನಿಕ ಪ್ರತಿನಿಧಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news tumkur ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಜಿಲ್ಲಾಡಳಿತ ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುಮಕೂರು:
Previous Articleಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
Next Article ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
News Desk Benkiyabale

Related Posts

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm news

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm news
ತಾಜಾ ಸುದ್ಧಿಗಳು

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm
Our Youtube Channel
Our Picks

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

By News Desk BenkiyabaleJuly 14, 2026 4:07 pm

ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಳಿಯಾರಿನಲ್ಲಿ ಹಮ್ಮಿಕೊಂಡಿರುವ ಈ ಮಧ್ಯವರ್ಜನ ಶಿಬಿರವು ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು ನೀಡುವ ಒಂದು…

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.