BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ
  • ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ
  • ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
  • ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ
  • ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ
  • ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ
news

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

By News Desk BenkiyabaleUpdated:July 27, 2026 5:07 pm

ತುಮಕೂರು: ನಗರದ ಹಾಸ್ಟೆಲ್, ಮೈದಾನ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ನೀಟ್ ಹಗರಹಣ ವಿರುದ್ಧ ಸುದೀರ್ಘಕಾಲ ನಡೆದ, ವಿದ್ಯಾರ್ಥಿ ಹೋರಾಟದ ಐತಿಹಾಸಿಕ ವಿಜಯವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸಿದ ಬೃಹತ್ ಹೋರಾಟದ ಫಲವಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನೀಟ್ (ಓಇಇಖಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ಆಗ್ರಹಿಸಿದ್ದರು! ಈ ಐತಿಹಾಸಿಕ ವಿಜಯವನ್ನು ದೇಶದಾದ್ಯಂತ ವಿದ್ಯಾರ್ಥಿಗಳು ಸಂಭ್ರಮಿಸುತ್ತಿದ್ದಾರೆ. ಆದರೆ, ಸಚಿವರ ರಾಜೀನಾಮೆಯ ಮಾರನೇ ದಿನವೇ ಕೇಂದ್ರ ಸರ್ಕಾರವು ಸುಧಾರಣೆಯ ಹೆಸರಿನಲ್ಲಿ ಮತ್ತೊಂದು ಹೊಸ ತಂತ್ರವನ್ನು ಹೆಣೆದಿದೆ. ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತರಲು ಕೇಂದ್ರ ಸರ್ಕಾರವು ಟಾಸ್ಕ್ ಫೋರ್ಸ್ ಒಂದನ್ನು ರಚಿಸಿದ್ದು, ದಕ್ಷಿಣ ಭಾರತದ ಕಾರ್ಪೊರೇಟ್ ದೈತ್ಯ ನಂದನ್ ನೀಲಖೇಣಿ ಅವರನ್ನು ಇದರ ಅಧ್ಯಕ್ಷರನ್ನಾಗಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ವಿದ್ಯಾರ್ಥಿ ಸಮುದಾಯಕ್ಕೆ ಮತ್ತೆ ದ್ರೋಹ ಬಗೆದಿದೆ.! ಸರ್ಕಾರದ ಈ ನಡೆಯನ್ನು ಎಐಡಿಎಸ್‌ಓ ಅತ್ಯುಗ್ರ ಶಬ್ದಗಳಲ್ಲಿ ಖಂಡಿಸುತ್ತದೆ.
ಯಾವುದೋ ಒಂದು ಸುಧಾರಣಾ ಸಮಿತಿಯನ್ನು ನೇಮಿಸುವುದು ಅಥವಾ ಸಣ್ಣಪುಟ್ಟ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡುವುದು ಪರಿಹಾರವಲ್ಲ ಎಂದು ಎಐಡಿಎಸ್‌ಒ ಸ್ಪಷ್ಟವಾಗಿ ತಿಳಿಸುತ್ತದೆ. ಎನ್‌ಟಿಎ ಸಂಸ್ಥೆಯು ವಿದ್ಯಾರ್ಥಿಗಳ ಹಿತಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇಂತಹ ಸಮಿತಿಯ ಶಿಫಾರಸ್ಸುಗಳ ಮೂಲಕ ಯಾವುದೇ ಸುಧಾರಣೆ ಸಾಧ್ಯವಿಲ್ಲ. ಈಗಾಗಲೇ ಹಿಂದೆ ರಚಿಸಲ್ಪಟ್ಟ ಸಮಿತಿಗಳಿಂದ ಯಾವುದೇ ಬದಲಾವಣೆಯಾಗಿಲ್ಲ. ಸರ್ಕಾರ ಈ ಕಣ್ಣೊರೆಸುವ ತಂತ್ರವನ್ನು ಬಿಟ್ಟು ಈ ಎನ್ ಟಿ ಎ ಸಂಸ್ಥೆಯನ್ನೇ ಸಂಪೂರ್ಣವಾಗಿ ರದ್ದುಗೊಳಿಸಬೇಕೆಂದು ನಾವು ಆಗ್ರಹಿಸುತ್ತೇವೆ. ಪರೀಕ್ಷಾ ಸುಧಾರಣೆಯ ಹೆಸರಲ್ಲಿ ದೇಶದ ವಿದ್ಯಾರ್ಥಿ ಸಮುದಾಯಕ್ಕೆ ಕೇಂದ್ರ ಸರ್ಕಾರ ದ್ರೋಹವೆಸಗುತ್ತಿದೆ!
ಪ್ರಧಾನಮಂತ್ರಿಯವರು ತಿಳಿಸಿರುವಂತೆ, ಇನ್ನು ಮುಂದೆ ನೀಟ್ ಪರೀಕ್ಷೆಯನ್ನು ‘ಪೆನ್ ಮತ್ತು ಪೇಪರ್’ ಮಾದರಿಯಿಂದ ‘ಆನ್‌ಲೈನ್’ ಮಾದರಿಗೆ ಬದಲಾಯಿಸಲಾಗುತ್ತದೆ. ಅರೆ-ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಅಥವಾ ಡಿಜಿಟಲ್ ಕಾವಲು ಮಾದರಿಗಳನ್ನು ಜಾರಿಗೆ ತರುವುದು ಡಿಜಿಟಲ್ ತಾರತಮ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಸ್ಥಿರವಾದ ಇಂಟರ್ನೆಟ್ ಸಂಪರ್ಕ, ನಿರಂತರ ವಿದ್ಯುತ್ ಸರಬರಾಜು ಅಥವಾ ಡಿಜಿಟಲ್ ಸಾಕ್ಷರತೆ ಇಲ್ಲದ ಅಭ್ಯರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ರಚನಾತ್ಮಕವಾಗಿ ವಂಚಿತರಾಗುತ್ತಾರೆ.
ಈ ನಡೆಯು ವೈದ್ಯಕೀಯ ಶಿಕ್ಷಣವನ್ನು ಕೆಲವು ಶ್ರೀಮಂತರು ಮತ್ತು ಪ್ರಭಾವಿಗಳಿಗೆ ಮಾತ್ರ ಸೀಮಿತಗೊಳಿಸಿ, ಮಧ್ಯಮ ವರ್ಗದ ಮತ್ತು ಬಡವರ ಬಹುಸಂಖ್ಯಾತ ಜನಸಂಖ್ಯೆಯನ್ನು ವೈದ್ಯಕೀಯ ಶಿಕ್ಷಣದಿಂದ ದೂರ ತಳ್ಳುವ ನೇರ ಪ್ರಯತ್ನವಾಗಿದೆ. ಎಐಡಿಎಸ್‌ಒ ಇದನ್ನು ಬಲವಾಗಿ ವಿರೋಧಿಸುತ್ತದೆ. ಸರ್ಕಾರವು ತಕ್ಷಣವೇ ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆAದು ನಾವು ಒತ್ತಾಯಿಸುತ್ತೇವೆ. ಹಾಗೂ ವಿದ್ಯಾರ್ಥಿ ಸಮುದಾಯವು ಸರ್ಕಾರದ ಈ ಕುತಂತ್ರದ ವಿರುದ್ಧ ಹೋರಾಟವನ್ನು ಮುಂದುವರಿಸಬೇಕು ಮತ್ತು ಎನ್‌ಟಿಎ ವಿರುದ್ಧ ಧ್ವನಿ ಎತ್ತಬೇಕೆಂದು ಕರೆ ನೀಡಿದರು.

(Visited 1 times, 1 visits today)
aidso kannada news karnataka tumakur tumkur ತುಮಕೂರು:
Previous Articleರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ
Next Article ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ
News Desk Benkiyabale

Related Posts

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm news
ತಾಜಾ ಸುದ್ಧಿಗಳು
news

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
news

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm
news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm
news

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm
news

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm
Our Youtube Channel
Our Picks

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

By News Desk BenkiyabaleJuly 27, 2026 5:09 pm

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಮಾಜಿ ಸಚಿವ, ಹಿರಿಯ ರಾಜಕಾರಣಿ ಸಿ. ವೀರಣ್ಣ ಅವರು ಶುಕ್ರವಾರ ರಾತ್ರಿ ತಾಲೂಕಿನ ಬುಕ್ಕಾಪಟ್ಟಣ ಗ್ರಾಮದ…

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.