BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ
news

ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಣೆ

By News Desk BenkiyabaleUpdated:July 29, 2026 4:15 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಮುಖಂಡರಾದ ಸ್ವದೇಶಿ ವಿಶ್ವನಾಥ್, ಜಿಲ್ಲಾ ಸಮಿತಾ ಸಮಾಜದ ಅಧ್ಯಕ್ಷ ಮಂಜೇಶ್, ತಾಲ್ಲೂಕು ಅಧ್ಯಕ್ಷ ಕಟ್‌ವೆಲ್ ರಂಗನಾಥ್, ಜಿಲ್ಲಾ ವಾದ್ಯಗಾರರ ಸಂಘದ ಅಧ್ಯಕ್ಷ ಗಂಗಾಧರ್, ಸತ್ಯನಾರಾಯಣ್, ಬೆಸ್ಟೆಕ್ಸ್ ರಾಮರಾಜು, ಸೀತಾರಾಮಯ್ಯ ಸೇರಿದಂತೆ ಸಮುದಾಯದ ಮುಖಂಡರುಗಳ ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ೧೨ನೇ ಶತಮಾನದ ವಚನ ಚಳವಳಿಯ ನೇತೃತ್ವ ವಹಿಸಿದ್ದ ಹಲವು ಮಹನೀಯರು ಜಯಂತಿಗಳನ್ನು ಸರಕಾರ ಆಚರಿಸುತಿದ್ದು,ಅವರಲ್ಲಿ ಬಸವಣ್ಣ ನವರ ಬಲಗೈ ಬಂಟನAತಿದ್ದ ಶಿವಶರಣ ಹಡಪದ ಅಪ್ಪಣ್ಣ ನವರು ಒಬ್ಬರು.ಯಾರನ್ನು ಬೆಳಗ್ಗೆ ಎದ್ದು ನೋಡಬಾರದು ಎಂಬ ಮೌಢ್ಯ ಸಮಾಜದಲ್ಲಿ ತುಂಬಿತ್ತೋ, ಅದೇ ಸಮಾಜಕ್ಕೆ ಸೇರಿದ ಹಡಪದ ಅಪ್ಪಣ್ಣ ಅವರನ್ನು ತಮ್ಮ ಕಚೇರಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿಕೊಂಡಿದ್ದ ಬಸವಣ್ಣ, ತನ್ನನ್ನು ನೋಡುವ ಮೊದಲು ಹಡಪದ ಅಪ್ಪಣ್ಣ ಅವರ ಬಳಿ ಹೋಗಿ, ಒಪ್ಪಿಗೆ ಪಡೆದು ಬರುವಂತಹ ನೀತಿ ರೂಪಿಸಿದ್ದರು.ಇದು ತಳ ಸಮುದಾಯಗಳಿಗೆ ಸಮಾನತೆ ಕಲ್ಪಿಸಲು ಜಗಜ್ಯೋತಿ ಬಸವೇಶ್ವರು ಕಂಡುಕೊAಡ ಮಾರ್ಗ ಎಂದರು.
೧೨ನೇ ಶತಮಾನದ ವಚನ ಚಳವಳಿಯ ಕಾಲದಲ್ಲಿದ್ದ ಶೂನ್ಯ ಸಿಂಹಾಸನದಲ್ಲಿ ಅಲ್ಲಮಪ್ರಭು ಸೇರಿದಂತೆ ಎಲ್ಲಾ ಸಮುದಾಯದ ಜನರಿಗೆ ಅವಕಾಶವಿತ್ತು. ನಾನು ಎಂಬ ಅಹಂ ಬಿಟ್ಟು, ಸಮಾಜದ ಏಳಿಗೆಗಾಗಿ ದುಡಿದ ಎಲ್ಲರೂ ಮಹನೀಯರೇ ಎಂಬುದು ಶೂನ್ಯ ಸಿಂಹಾಸನದ ಪ್ರಮುಖ ಉದ್ದೇಶವಾಗಿತ್ತು.ಮೌಢ್ಯತೆಯ ವಿರುದ್ದ ಹೋರಾಡುತ್ತಲೇ, ಮೌಢ್ಯವನ್ನು ಜನರ ಮನಸ್ಸಿನಿಂದ ಕಿತ್ತು ಹಾಕಲು ೨೫೧ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದರು. ಅವರ ಪತ್ನಿ ನೀಲಮ್ಮ ಸಹ ವಚನಕಾರತಿಯಾಗಿದ್ದರು.ಸಮಾನತೆ, ಕಾಯಕ, ದಾಸೋಹದ ಮೇಲೆ ನಂಬಿಕೆ ಇಟ್ಟಿದ್ದ ಹಡಪದ ಅಪ್ಪಣ್ಣ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಡಾ.ಎನ್.ತಿಪ್ಪೇಸ್ವಾಮಿ ನುಡಿದರು.
ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ,ವಚನಚಳವಳಿಯಲ್ಲಿದ್ದ ಬಹುತೇಕರು ಕಾಯಕ ಮತ್ತು ದಾಸೋಹ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರು.ಹಡಪದ ಅಪ್ಪಣ್ಣ ಎರಡರಲ್ಲಿಯೂ ಪ್ರಸಿದ್ದಿ ಪಡೆದಿದ್ದರು.ಅವರ ವಚನಗಳಲ್ಲಿರುವ ಪ್ರಕರತೆ,ಅವರು ಬಸಣ್ಣನವರ ಸಂದೇಹ ವಾಹಕರಾಗಿ ಮಾಡಿದ ಕೆಲಸ ಅವಿಸ್ಮರಣೀಯ.ಭಕ್ತಿಯಿಲ್ಲದ ಪೂಜೆ, ದುಡಿಮೆ ಇಲ್ಲದ ನೈವೆಧ್ಯ ಭಗವಂತನಿಗೆ ಸಲ್ಲದು ಎಂದು ಜಗತ್ತಿಗೆ ಸಾರಿ, ಡಾಂಬಿಕ ಭಕ್ತಿಯನ್ನು ಅಲ್ಲಗಳೆದವರು ಹಡಪದ ಅಪ್ಪಣ್ಣ.ಹಾಗಾಗಿಯೇ ಶಿವಶರಣರು ಕಾಯಕವೇ ಕೈಲಾಸ ಎಂದು ನಂಬಿದ್ದರು ಎಂದರು.
ತುಮಕೂರು ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಕಟ್‌ವೆಲ್ ರಂಗನಾಥ್ ಮಾತನಾಡಿ,ಜಿಲ್ಲಾಡಳಿತ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಅದ್ದೂರಿಯಾಗಿ ಅಲ್ಲದಿದ್ದರೂ ಅತ್ಯಂತ ಸರಳ ಮತ್ತು ಅರ್ಥ ಪೂರ್ಣವಾಗಿ ಆಚರಿಸುತ್ತಿದೆ. ಸಮುದಾಯಗಳು ಒಗ್ಗೂಡಲು ಕಾರಣವಾಗಿದೆ.ಇದಕ್ಕಾಗಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.ಸವಿತಾ ಸಮಾಜ ಮತ್ತು ಹಡಪದ ಸಮಾಜದ ಕುಲಕಸುಬು ಒಂದೇ ಆಗಿದ್ದರೂ ಆಚಾರ, ವಿಚಾರ ಬೇರೆ ಬೇರೆ ಇದೆ.ರಾಜ ಮಹಾರಾಜರ ಕಾಲದಿಂದಲೂ ಹಡಪದ ಸಮುದಾಯದ ಜನರನ್ನು ತಮ್ಮ ಆಪ್ತ ಸಹಾಯಕರಾಗಿ ನೇಮಿಸಿಕೊಳ್ಳುವುದು ವಾಡಿಕೆ.ಅದು ಇಂದಿನ ಜನಪ್ರತಿನಿಧಿಗಳ ಕಾಲದಲ್ಲಿಯೂ ಮುಂದುವರೆದಿದೆ.ಇದಕ್ಕೆ ಪ್ರಮುಖ ಕಾರಣ, ಸೆಲ್ಯೂನ್‌ಗಳಿಗೆ ಎಲ್ಲಾ ವರ್ಗದ ಜನರು ಬರುವುದರಿಂದ ಎಲ್ಲಾ ರೀತಿಯ ಮಾಹಿತಿಯೂ ಇವರಿಗೆ ತಿಳಿದಿರುತ್ತದೆ ಎಂಬುದಾಗಿದೆ.ಒAದು ಊರಿನ ಸೆಲೂನ್ ಆ ಊರಿನ ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಅರ್ಥಿಕ ಸ್ಥಿತಿಗಳ ತಿಳಿಸುವ ಮಾಹಿತಿ ಕೇಂದ್ರವಾಗಿವೆ ಎಂದರು.
ಬೆಸ್ಟೇಕ್ಸ್ ರಾಮರಾಜು ಹಡಪದ ಅಪ್ಪಣ್ಣ ಅವರ ವಚನ ವಾಚಿಸಿದರು. ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸುರೇಶಕುಮಾರ್, ನಾಗೇಂದ್ರ, ಪಾರ್ಥಸಾರಥಿ, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news Mla jyothiganesh tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಜಾನಪದವು ಕೇವಲ ಮನರಂಜನೆಯ ಸಾಧನವಲ್ಲ
Next Article ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.