BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
  • ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

By News Desk BenkiyabaleUpdated:August 12, 2026 5:37 pm

ತುಮಕೂರು: ವಾಲ್ಮೀಕಿ ಸಮಾಜದ ನಾಯಕರು, ಸಮುದಾಯದ ಧ್ವನಿಯಾಗಿ ಗುರುತಿಸಿಕೊಂಡಿರುವ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ನಾಯಕರು ನಡೆಸಿರುವ ತಂತ್ರಗಳಿಗೆ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಮಣಿಯಬಾರದು, ಬಿ.ನಾಗೇಂದ್ರ ಅವರನ್ನು ಮಂತ್ರಿಯಾಗಿ ಮುಂದುವರೆಸಬೇಕು ಎಂದು ರಾಷ್ಟಿçÃಯ ಬುಡಕಟ್ಟು ಬೇಡರ ಪಡೆಯ ಅಧ್ಯಕ್ಷ ಮಾರಣ್ಣ ಪಾಳೇಗಾರ್ ಒತ್ತಾಯಿಸಿದರು.
ಬುಧವಾರ ನಗರದಲ್ಲಿ ಪತ್ರಿಕಾ ಗೋಷ್ಠೀಯಲ್ಲಿ ಮಾತನಾಡಿದ ಅವರು, ಬಿ. ನಾಗೇಂದ್ರ ಅವರೊಂದಿಗೆ ವಾಲ್ಮೀಕಿ ಸಮಾಜ ಸದಾ ಬೆಂಬಲವಾಗಿ ನಿಲ್ಲಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬAಧಿಸಿದ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಬಿ.ನಾಗೇಂದ್ರ ಅವರಿಗೆ ಪ್ರಕರಣದಲ್ಲಿ ಯಾವುದೇ ಸಂಬAಧವಿಲ್ಲ ಎಂಬ ಅಂಶ ತನಿಖಾ ಪ್ರಕ್ರಿಯೆಯಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ, ಯಾವುದೇ ಅಂತಿಮ ಅಧಿಕೃತ ನಿರ್ಣಯ ಅಥವಾ ನ್ಯಾಯಾಂಗ ತೀರ್ಪು ಹೊರಬರುವ ಮುನ್ನ ವ್ಯಕ್ತಿಯ ಘನತೆ ಹಾಗೂ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಆರೋಪಗಳು ಅಥವಾ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ಹೇಳಿದರು.
ಈ ಬೆಳವಣಿಗೆಯ ನಡುವೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜನಾರ್ದನರೆಡ್ಡಿ ಅವರು ರಾಜಕೀಯವಾಗಿ ಎತ್ತಿಕಟ್ಟಿ, ಒಂದೇ ಸಮುದಾಯದ ನಾಯಕರ ನಡುವೆ ಹಾಗೂ ಸಮಾಜದೊಳಗೆ ಭಿನ್ನಾಭಿಪ್ರಾಯ ಮೂಡಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಒಂದೇ ಸಮಾಜದ ನಾಯಕರನ್ನು ಪರಸ್ಪರ ಎದುರು ನಿಲ್ಲಿಸುವ ಯಾವುದೇ ರಾಜಕೀಯ ಪ್ರಯತ್ನ ಸಮಾಜದ ಒಗ್ಗಟ್ಟಿಗೆ ಧಕ್ಕೆ ತರಬಾರದು ಎಂದರು.
ವಾಲ್ಮೀಕಿ ಸಮಾಜದ ನಾಯಕರು ಹಾಗೂ ಮುಖಂಡರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸುವ ಬದಲು, ಸಮುದಾಯದ ಹಿತಾಸಕ್ತಿ, ಯುವಜನರ ಭವಿಷ್ಯ ಮತ್ತು ಸಾಮಾಜಿಕ ನ್ಯಾಯದ ವಿಚಾರಗಳಿಗೆ ಆದ್ಯತೆ ನೀಡಬೇಕು. ವೈಯಕ್ತಿಕ ಅಥವಾ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ, ಸಮುದಾಯದ ಹಿತಕ್ಕಾಗಿ ಎಲ್ಲ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಬಿ. ನಾಗೇಂದ್ರ ಅವರು ವಾಲ್ಮೀಕಿ ಸಮಾಜದ ಯುವ ನಾಯಕನಾಗಿ ಸಮುದಾಯದ ಹಿತಾಸಕ್ತಿ, ಯುವಜನರ ಆಶಯಗಳು ಹಾಗೂ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂಬುದು ಸಮಾಜದ ಆಶಯವಾಗಿದೆ. ಶಿಕ್ಷಣ, ಉದ್ಯೋಗ, ಯುವಕರಿಗೆ ಉತ್ತಮ ಅವಕಾಶಗಳು, ಸಾಮಾಜಿಕ ನ್ಯಾಯ ಮತ್ತು ಸಮುದಾಯದ ಅಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ಇನ್ನಷ್ಟು ಬಲವಾಗಿ ಕೆಲಸ ಮಾಡಬೇಕು ಎಂಬ ನಿರೀಕ್ಷೆ ಸಮಾಜದಲ್ಲಿದೆ ಎಂದು ಮಾರಣ್ಣ ಪಾಳೇಗಾರ್ ಹೇಳಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಯುವಕರು ಹಾಗೂ ಸಮುದಾಯದ ಸದಸ್ಯರು ಯಾವುದೇ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಬಿ.ನಾಗೇಂದ್ರ ಅವರಿಗೆ ನೈತಿಕ ಬೆಂಬಲ ನೀಡುವುದರ ಜೊತೆಗೆ, ಸಮಾಜದ ಹಿತಕ್ಕಾಗಿ ಇನ್ನಷ್ಟು ಜವಾಬ್ದಾರಿಯುತ ಹಾಗೂ ಪರಿಣಾಮಕಾರಿ ನಾಯಕತ್ವವನ್ನು ಅವರಿಂದ ನಿರೀಕ್ಷಿಸಬೇಕು. ವ್ಯಕ್ತಿಗಿಂತ ಸಮಾಜದ ಹಿತ ದೊಡ್ಡದು ಎಂದು ತಿಳಿಸಿದರು.
ವಾಲ್ಮೀಕಿ ಸಮಾಜದ ಮುಖಂಡರಾದ ಮರಳೂರು ನಾಗರಾಜ್, ಭಾನುಪ್ರಕಾಶ್, ಎ.ಆರ್.ಶಿವಪ್ರಸಾದ್ ಹಾಜರಿದ್ದರು.

(Visited 1 times, 1 visits today)
Congress dcm dr.g.parameshwar kannada news karnataka local news tumakur tumkur tumkur news ತುಮಕೂರು:
Previous Articleಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
Next Article ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ
News Desk Benkiyabale

Related Posts

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm news
ತಾಜಾ ಸುದ್ಧಿಗಳು
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm
news

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
news

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
Our Youtube Channel
Our Picks

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

By News Desk BenkiyabaleAugust 13, 2026 5:40 pm

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರ ಶನಿವಾರ ಬೆಳಗ್ಗೆ ೯ ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಸ್ವಾತಂತ್ರö್ಯ ದಿನಾಚರಣೆ-೨೦೨೬’…

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.