ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಸಮಾಜಕಲ್ಯಾಣ ಇಲಾಖೆ, ತುಮಕೂರು ಹಾಗೂ ಮೊರಾರ್ಜಿ ದೇಸಾಯಿ ವಸತಿಶಾಲೆ, ಚಿಕ್ಕನಹಳ್ಳಿ, ಶಿರಾ ತಾಲ್ಲೂಕು ವತಿಯಿಂದ ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮವನ್ನು ಚಿಕ್ಕನಹಳ್ಳಿ, ಶಿರಾ ತಾಲ್ಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿತ್ತು.
ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಸೋನಿಯಾ ವರ್ಣೇಕರ.ಯು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ, ಮಕ್ಕಳು ಇಂದಿನ ಆಧುನಿಕ ಜಗತ್ತಿನಲ್ಲಿನ ಸ್ಪರ್ಧೆಗಳನ್ನು ಎದುರಿಸಲು ಕಲೆಯ ಬಗ್ಗೆ ಹೆಚ್ಚಿನ ಆಸಕ್ತಿ ಬೆಳಿಸಿಕೊಂಡಲ್ಲಿ ಹೆಚ್ಚಿನ ಆತ್ಮವಿಶ್ವಾಸವನ್ನು ಪಡೆಯಬಹುದು. ಇದರಿಂದಾಗಿ ಸಮಾಜವನ್ನು ಪರಿಣಾಮಾತ್ಮಕವಾಗಿ ಎದುರಿಸಿ ಸಮಾಜಮುಖಿಗಳಾಗಿ ಬೆಳೆಯಬಹುದು ಎಂದು ತಿಳಿಸಿದರು.
ತುಮಕೂರು ಜಿಲ್ಲಾ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ.ಕೆ.ಮಿರ್ಜಿ ಅವರು ಮಾತನಾಡುತ್ತಾ, ಇಲಾಖೆ ೮ ರಿಂದ ೧೪ ವರ್ಷ ವಯಸ್ಸಿನ ಮಕ್ಕಳಲ್ಲಿನ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ವೇದಿಕೆ ಒದಗಿಸಲು ಅವಕಾಶ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಈ ವೇದಿಕೆಯ ಲಾಭವನ್ನು ಪಡೆಯುವಂತಾಗಲಿ ಅಲ್ಲದೇ, ಇಂತಹುಗಳು ಆರೋಗ್ಯಕರ ಹವ್ಯಾಸಗಳಾಗಿದ್ದು ಮುಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಳ್ಳೆಯ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಮಲ್ಲಿಕಾರ್ಜುನ ಕೆಂಕೆರೆಯವರು ಮಾತನಾಡುತ್ತಾ, ಈ ಕಾರ್ಯಕ್ರಮದಲ್ಲಿ ಸಾಂಸ್ಕöÈತಿಕ ವೈವಿದ್ಯಕ್ಕೆ ಇಲಾಖೆ ಹೆಚ್ಚು ಒತ್ತು ನೀಡಿದೆ. ಇಂದಿನ ಕಾರ್ಯಕ್ರಮದಲ್ಲಿ ಶಾಸ್ತಿçÃಯ ಸಂಗೀತ, ಸುಗಮ ಸಂಗೀತ, ಭರತ ನಾಟ್ಯ, ಜಾನಪದ ರೂಪಕ, ನಾಟಕ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಮಕ್ಕಳು ಬರೀ ಪ್ರೇಕ್ಷಕರಾಗದೇ ಮುಂದಿನ ದಿನಗಳಲ್ಲಿ ವೇದಿಕೆಯ ಮೇಲೆ ಪ್ರದರ್ಶನ ನೀಡುವ ಮುಖೇನ ಕಲೆಯ ಬಗ್ಗೆ ಆಸಕ್ತಿಯನ್ನು ಬೆಳೆಸಿಕೊಳ್ಳಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಚಿಕ್ಕನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಜಗದೀಶ ಕಣಕಾಲರವರು ಮಾತನಾಡಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಈ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಮಾಡುತ್ತಿರುವುದು ನಮ್ಮ ಮಕ್ಕಳಿಗೆ ಒಂದು ವರವಾಗಿದೆ. ನಮ್ಮ ಶಾಲೆಯ ಮಕ್ಕಳು ಈಗಾಗಲೇ ಪ್ರತಿಭಾಕಾರಂಜಿಯAತಹ ಸ್ಪರ್ಧೆಗಳಲಿ ್ಲಭಾಗವಹಿಸಿ ಶಾಲೆಗೆ ಉತ್ತಮ ಹೆಸರು ತಂದಿರುತ್ತಾರೆ. ಈ ದಿನದ ಕಾರ್ಯಕ್ರಮಗಳು ವೈವಿದ್ಯದಿಂದ ಕೂಡಿದ್ದು, ಮಕ್ಕಳು ಇದರ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು.ಇವು ಮುಂದಿನ ಆರೋಗ್ಯಕರ ಜೀವನಕ್ಕೆ ಮತ್ತು ಸಮಾಜಕ್ಕೆ ಹೆಚ್ಚು ಹತ್ತಿರವಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕöÈತರು ಹಾಗೂ ಹಿರಿಯ ವೀರಗಾಸೆ ಕಲಾವಿದರಾದ ಶ್ರೀಸಿ.ವಿ.ವೀರಣ್ಣ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಚಿಕ್ಕನಹಳ್ಳಿ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ದೇವರಾಜ ಅರಸು ವಸತಿ ಶಾಲೆ, ಚಿಕ್ಕನಹಳ್ಳಿ ಪ್ರಾಂಶುಪಾಲರಾದ ಮಂಜುನಾಥ್ ಮೊದಲಾದವರು ಭಾಗವಹಿಸಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ಶಾಸ್ತಿçÃಯ ಸಂಗೀತ, ಸುಗಮ ಸಂಗೀತ, ನೃತ್ಯ ರೂಪಕ, ವೀರಗಾಸೆ, ಶಾಸ್ತಿçÃಯ ನೃತ್ಯ, ಸಮೂಹ ನೃತ್ಯ, ನಾಟಕ ಮೊದಲಾದ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು.
(Visited 1 times, 1 visits today)





