BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

By News Desk BenkiyabaleUpdated:August 14, 2026 5:39 pm

ತುಮಕೂರು: ತಿರಂಗಾ ಯಾತ್ರಾ ಸಮಿತಿ, ತುಮಕೂರು ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಬೃಹತ್ ತಿರಂಗಾ ಯಾತ್ರೆಯನ್ನು ಅತ್ಯಂತ ಶ್ರದ್ಧೆ, ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ತುಮಕೂರು ನಗರ ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್ ಅವರ ವಿಶೇಷ ಕಾಳಜಿ ಹಾಗೂ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದ್ದ ಈ ಬೃಹತ್ ತಿರಂಗಾ ಯಾತ್ರೆಯಲ್ಲಿ ಸಹಸ್ರಾರು ಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ ಹಾಗೂ ಸ್ಕೌಟ್ ವಿದ್ಯಾರ್ಥಿಗಳು ಸೇರಿದಂತೆ ನೂರಾರು ದೇಶಭಕ್ತ ನಾಗರಿಕರು ಉತ್ಸಾಹದಿಂದ ಭಾಗವಹಿಸಿದರು.
ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಹಾಗೂ ನಾಗರಿಕರು ಜಮಾವಣೆಗೊಂಡು, ಸುಮಾರು ೧೦೦ ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ ಹಾಗೂ ಸಹಸ್ರಾರು ತ್ರಿವರ್ಣ ಧ್ವಜಗಳನ್ನು ಹಿಡಿದು ಯಾತ್ರೆಗೆ ಸಜ್ಜಾದರು. ಭಾರತ ಮಾತೆಯ ಅಲಂಕೃತ ಭಾವಚಿತ್ರವು ಯಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು.
ಯಾತ್ರೆ ಆರಂಭಕ್ಕೂ ಮುನ್ನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ಹಾಗೂ ಶ್ರೀ ಕಾರದ ವೀರ ಬಸವ ಮಹಾಸ್ವಾಮೀಜಿಯವರು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಬೃಹತ್ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.
ಮಹಾನಗರ ಪಾಲಿಕೆ ಆವರಣದಿಂದ ಆರಂಭಗೊAಡ ಯಾತ್ರೆಯು ಎಂ.ಜಿ. ರಸ್ತೆ, ರಾಮಪ್ಪ ವೃತ್ತ, ಸ್ವಾತಂತ್ರ‍್ಯ ಚೌಕ ಹಾಗೂ ಅಶೋಕ ರಸ್ತೆ ಮೂಲಕ ಸಾಗಿತು. ಮಾರ್ಗದುದ್ದಕ್ಕೂ ಸಾರ್ವಜನಿಕರು ಯಾತ್ರೆಯನ್ನು ವೀಕ್ಷಿಸಿ ದೇಶಭಕ್ತಿಯ ಸಂಭ್ರಮದಲ್ಲಿ ಪಾಲ್ಗೊಂಡರು. ಬಳಿಕ ಯಾತ್ರೆಯು ಮತ್ತೆ ಮಹಾನಗರ ಪಾಲಿಕೆ ಆವರಣಕ್ಕೆ ಆಗಮಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗದಲ್ಲಿ ಸಮಾರೋಪಗೊಂಡಿತು.
ಅಲ್ಲಿ ಎಲ್ಲರೂ ಶಿಸ್ತಿನಿಂದ ಜಮಾವಣೆಗೊಂಡು ರಾಷ್ಟ್ರಗೀತೆಯನ್ನು ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಈ ಸಂದರ್ಭದಲ್ಲಿ ಉದ್ಯಮಿಗಳಾದ ಶ್ರೀ ಹೆಬ್ಬಾಕ ರವಿಶಂಕರ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ವ್ಯಾಪಾರಸ್ಥರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಎನ್‌ಸಿಸಿ ಹಾಗೂ ಸ್ಕೌಟ್ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ನೂರಾರು ನಾಗರಿಕರು ಉಪಸ್ಥಿತರಿದ್ದರು.
ಸ್ವಾತಂತ್ರ‍್ಯೋತ್ಸವದ ಮುನ್ನಾ ದಿನ ನಡೆದ ಈ ಬೃಹತ್ ತಿರಂಗಾ ಯಾತ್ರೆ ಕೇವಲ ಒಂದು ಕಾರ್ಯಕ್ರಮವಾಗಿ ಉಳಿಯದೆ, ಯುವಜನತೆಯಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರೀಯ ಏಕತೆಯ ಭಾವನೆಯನ್ನು ಮೂಡಿಸುವ ಶಕ್ತಿಯುತ ಸಂದೇಶವನ್ನು ಸಾರಿತು.
ಸಹಸ್ರಾರು ವಿದ್ಯಾರ್ಥಿಗಳು ಒಂದೇ ಧ್ವನಿಯಲ್ಲಿ ಭಾರತ ಮಾತೆಯ ಜಯಘೋಷ ಮೊಳಗಿಸಿ, ರಾಷ್ಟ್ರಧ್ವಜವನ್ನು ಹಿಡಿದು ಸಾಗಿದ ದೃಶ್ಯವು ತುಮಕೂರು ನಗರದ ಜನರಲ್ಲಿ ಹೆಮ್ಮೆ ಹಾಗೂ ದೇಶಭಕ್ತಿಯ ಭಾವನೆಯನ್ನು ಮೂಡಿಸಿತು.
“ರಾಷ್ಟ್ರಧ್ವಜ ನಮ್ಮ ಹೆಮ್ಮೆ, ಭಾರತ ಮಾತೆ ನಮ್ಮ ಶಕ್ತಿ ದೇಶಭಕ್ತಿಯೇ ನಮ್ಮ ಸಂಕಲ್ಪ” ಎಂಬ ಸಂದೇಶದೊAದಿಗೆ ನಡೆದ ಈ ಬೃಹತ್ ತಿರಂಗಾ ಯಾತ್ರೆ ತುಮಕೂರು ನಗರದ ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿತು.

(Visited 1 times, 1 visits today)
kannada news karnataka local news Mla jyothiganesh tumakur tumkur ಜಿಲ್ಲಾಡಳಿತ ತುಮಕೂರು:
Previous Articleಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
Next Article ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
News Desk Benkiyabale

Related Posts

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm news
ತಾಜಾ ಸುದ್ಧಿಗಳು
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
Our Youtube Channel
Our Picks

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

By News Desk BenkiyabaleAugust 14, 2026 5:42 pm

ಕೊರಟಗೆರೆ: ಧಾರ್ಮಿಕ ಆಚರಣೆ ಮತ್ತು ಸಂಪ್ರದಾಯಗಳು ಧರ್ಮದ ಜೀವಂತಿಕೆಗೆ ಸಾಯಾಗಿದ್ದು, ಇವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ…

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.