BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ
news

ಸರ್ಕಾರಿ ಶಾಲೆ ಉಳಿವಿಗಾಗಿ ಒತ್ತಾಯಿಸಿ ಪ್ರತಿಭಟನೆ

ಸರ್ಕಾರಿ ಶಾಲೆಯ ಜಾಗವನ್ನು ಖಾಸಗಿ ಸಂಘ ಸಂಸ್ಥೆಯ ಹೆಸರಿಗೆ ಖಾತೆ ಮಾಡುವ ಪಿತೂರಿ
By News Desk BenkiyabaleUpdated:August 31, 2026 5:09 pm

ತುಮಕೂರು: ದಲಿತ ಸೇನೆ ರಾಮ್ ವಿಲಾಸ್ ಸಂಘಟನೆ, ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸಂಘಟನೆಗಳ ವತಿಯಿಂದ ಸರ್ಕಾರಿ ಶಾಲೆ ಉಳಿವಿಗಾಗಿ ಸರ್ಕಾರಿ ಶಾಲೆಯ ಜಾಗವನ್ನು ಸರ್ಕಾರಿ ಶಾಲೆಗಳಿಗೆ ಉಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಕುರಿತು ದಲಿತ ಸೇನೆ ರಾಮ್ ವಿಲಾಸ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಗೂಳುರು ಸಿದ್ಧರಾಜು ಮಾತನಾಡಿ, ಸರ್ಕಾರ ಸರ್ಕಾರಿ ಶಾಲೆಗಳನ್ನು ಉಳಿಸಲು ಮತ್ತು ಬಡಮಕ್ಕಳಿಗೆ ಮೌಲ್ಯಾಧಾರಿತ ಗುಣಾತ್ಮಕ ಶಿಕ್ಷಣ ನೀಡಲು ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದ ಇಂತಹ ಸಂದರ್ಭದಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು, ಸಂಘ ಸಂಸ್ಥೆಯವರು ತಮ್ಮ ಸ್ವಾರ್ಥ ಸಾಧನೆ ಈಡೇರಿಕೆಗಾಗಿ ಸರ್ಕಾರಿ ಶಾಲೆಯ ಜಾಗವನ್ನು ಕೆಲ ಖಾಸಗಿ ಸಂಘ ಸಂಸ್ಥೆಯ ಹೆಸರಿಗೆ ಖಾತೆ ಮಾಡಲು ಸರ್ವ ರೀತಿಯಲ್ಲೂ ಪಿತೂರಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ಮೂಲದ ಎನ್. ಜಿ. ಓ. ಸಂಸ್ಥೆಯ ಸಹಯೋಗಕ್ಕೆ ಕೊಡಲು ಒಪ್ಪಿದ್ದರು ಆ ಸಂದರ್ಭದಲ್ಲಿ ಕೆಲ ಮಾದ್ಯಮಗಳು ಮತ್ತು ಪತ್ರಿಕೆಗಳಲ್ಲಿ ಆಕ್ಷೇಪ ವ್ಯಕ್ತವಾದ ನಂತರ ಅದನ್ನು ಅಲ್ಲಿಗೆ ನಿಲ್ಲಿಸಿದ್ದರು. ಆದರೆ ಇದೀಗ ಮಾನಸ ಬುದ್ದಿಮಾಂದ್ಯ ಸಂಸ್ಥೆಗೆ ಈ ಶಾಲೆಯ ಜಾಗವನ್ನು ಖಾತೆ ಮಾಡಲು ಮುಂದಾಗಿದ್ದಾರೆ. ಸದರಿ ಶಾಲೆಯಲ್ಲಿ ವಿದ್ಯೆ ಕಲಿಯುತ್ತಿರುವವರು ಸಹ ಅಂಗವಿಕಲ ಮಕ್ಕಳು, ವಿಶೇಷ ಚೇತನ ಮಕ್ಕಳ ಮೇಲೆ ನಮಗೆ ಅಪಾರ ಪ್ರೀತಿ ಹಾಗೂ ಅನುಕಂಪವೂ ಇದೆ, ಆದರೆ ನೈಜವಾದ ಮಕ್ಕಳಿಗೆ ಪಾಠ ಪ್ರವಚನ ಮಾಡಲು ತೊಂದರೆಯಾಗುತ್ತಿದೆ, ಜೊತೆಗೆ ಈ ಶಾಲೆಯನ್ನು ಖಾಸಗಿ ಸಂಘ ಸಂಸ್ಥೆ ನಡೆಸುತ್ತಿರುವುದರಿಂದ ಸರ್ಕಾರಿ ಶಾಲೆಯನ್ನು ಬೇರೆ ಕಡೆ ಸ್ಥಳಾಂತರಿಸಲು ಅವಕಾಶವಾಗುತ್ತದೆ. ಈ ರೀತಿಯಾಗಿ ಮಾಡಿದರೆ ಸರ್ಕಾರಿ ಶಾಲೆಯನ್ನು ಮುಚ್ಚಿಸಿ ಜಾಗವನ್ನು ಕಬಳಿಸಬಹುದು ಎಂಬ ದುರುದ್ದೇಶ ಹೊಂದಿರುತ್ತಾರೆ ಎಂದು ತಿಳಿಸಿದರು.
ಇತ್ತೀಚೆಗೆ ಮಾನಸ ಬುದ್ದಿಮಾಂದ್ಯ ಸಂಸ್ಥೆಯವರು ಏಕಾಏಕಿ ಸರ್ಕಾರಿ ಶಾಲೆಯ ಹತ್ತಿರ ಹೋಗಿ ಶಾಲಾ ಸಿಬ್ಬಂದಿಗಳಿಗೆ ನಿಮ್ಮ ಮಕ್ಕಳನ್ನು ಆಚೆ ಕಳಿಸಿ, ನಿಮ್ಮ ದಾಖಲಾತಿಗಳನ್ನು ಬೇರೆ ಕಡೆ ಸ್ಥಳಾಂತರಿಸಿ ನಾವು ಬಿಲ್ಡಿಂಗ್ ಕೆಡವಬೇಕು, ಕಟ್ಟಡ ಕಟ್ಟಬೇಕು ನಮ್ಮ ಸಂಸ್ಥೆಗೆ ಈ ಜಾಗ ಆಗಿದೆ ಎಂದು ಧಮ್ಮಿ ಹಾಕುತ್ತಿದ್ದಾರೆ. ಈ ವಿಚಾರವಾಗಿ ಮುಖ್ಯಶಿಕ್ಷಕರು ಹಾಗೂ ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಹಾನಗರ ಪಾಲಿಕೆಯವರಿಗೆ ಸರ್ಕಾರಿ ಶಾಲೆಯ ಜಾಗವನ್ನು ಅದೇ ಶಾಲೆಯ ಹೆಸರಿಗೆ ಖಾತೆ ಮಾಡಲು ಸುಮಾರು ಬಾರಿ ಅರ್ಜಿ ಸಲ್ಲಿಸಿರುತ್ತಾರೆ. ಆದರೂ ಮಹಾನಗರ ಪಾಲಿಕೆಯವರು ಸರ್ಕಾರಿ ಶಾಲೆಯ ಹೆಸರಿಗೆ ಖಾತೆ ಮಾಡಿರುವುದಿಲ್ಲ. ಜೊತೆಗೆ ರಾಜ್ಯ ಸರ್ಕಾರದ ಆದೇಶದಂತೆ ೧೨ ವರ್ಷಗಳ ಕಾಲ ಯಾವುದೇ ಶಾಲಾ ಕಾಲೇಜು ಅನುಭವದಲ್ಲಿದ್ದರೆ ಸದರಿ ಜಾಗವನ್ನು ಅದೇ ಶಾಲಾ ಕಾಲೇಜಿಗೆ ಖಾತೆ ಮಾಡಬೇಕೆಂಬ ಆದೇಶವಿದ್ದರೂ ಸಹ ಅದನ್ನು ಗಾಳಿಗೆ ತೂರಿ, ಮಹಾನಗರ ಪಾಲಿಕೆಯವರು ಖಾಸಗಿ ಸಂಸ್ಥೆಯವರೊAದಿಗೆ ಶಾಮೀಲಾಗಿ ಸರ್ಕಾರಿ ಶಾಲೆಯ ಹೆಸರಿಗೆ ಖಾತೆ ಮಾಡುತ್ತಿಲ್ಲ ಎಂದು ಗಂಭೀರ ಆರೋಪವನ್ನು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್. ಕೆ. ನಿಧಕುಮಾರ್ ಮಾಡಿದ್ದಾರೆ.
ಮುಂದುವರೆದು ಮಾತನಾಡಿ ಪರಿಶಿಷ್ಠ ಜಾತಿ ಮತ್ತು ಪಂಗಡದ ಮಕ್ಕಳು, ಹಿಂದುಳಿದ, ಅಲ್ಪಸಂಖ್ಯಾತರ ಬಡಮಕ್ಕಳ ಹಿತದೃಷ್ಟಿಯಿಂದ ತುಮಕೂರು ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಗಾಂಧಿನಗರ, ಶಾಲೆಯನ್ನು ಇದೇ ಸರ್ಕಾರಿ ಶಾಲೆಯ ಹೆಸರಿಗೆ ಖಾತೆ ಮಾಡಿಕೊಟ್ಟು, ಸರ್ಕಾರಿ ಆಸ್ತಿ ಕಾಪಾಡಿ ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಮತ್ತು ಮೌಲ್ಯಾಧಾರಿತ ಹಾಗೂ ಗುಣಾತ್ಮಕ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಇಂದ್ರಕುಮಾರ್ ಡಿ.ಕೆ. ಮಾತನಾಡಿ ಈ ಸರ್ಕಾರಿ ಶಾಲಾ ಮಕ್ಕಳನ್ನು ಈ ಶಾಲೆಯಲ್ಲಿ ವ್ಯಾಸಂಗ ಮಾಡಲು ಅವಕಾಶ ಮಾಡದೇ ಹೊರ ದಬ್ಬಲು ಸಂಚು ರೂಪಿಸಿರುವ ಖಾಸಗಿ ಸಂಘ ಸಂಸ್ಥೆಯವರ ವಿರುದ್ಧ ಈ ಕೂಡಲೇ ಕ್ರಮವಹಿಸಿ ಇವರುಗಳಿಗೆ ಸಹಕರಿಸುತ್ತಿರುವ ಮಹಾನಗರ ಪಾಲಿಕೆ ಸಿಬ್ಬಂದಿಯವರ ವಿರುದ್ಧ ಕ್ರಮ ಕೈಗೊಂಡು ಮಾನಸ ಬುದ್ಧಿಮಾಂಧ್ಯ ಖಾಸಗಿ ಸಂಸ್ಥೆಯವರಿಗೆ ಯಾವುದೇ ಕಾರಣಕ್ಕೂ ಈ ಶಾಲೆಯನ್ನು ಬಿಟ್ಟುಕೊಡದೇ ಸರ್ಕಾರಿ ಶಾಲೆಯನ್ನು ಉಳಿಸಬೇಕಾದ ಕಾರ್ಯವನ್ನು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಪಾಲಿಕೆ ವತಿಯಿಂದ ಆಗಬೇಕಾಗಿದೆ, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆಂದು ಎಚ್ಚರಿಕೆಯ ಸಂದೇಶವನ್ನು ಸಹ ನೀಡಿದರು.
ಈ ಸಂದರ್ಭದಲ್ಲಿ ದಲಿತ ಸೇನೆ ರಾಮ್ ವಿಲಾಸ್ ಸಂಘಟನೆ ಜಿಲ್ಲಾಧ್ಯಕ್ಷರಾದ ಗುಳೂರು ಸಿದ್ದರಾಜ್, ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷರಾದ ಎನ್. ಕೆ ನಿಧಿ ಕುಮಾರ್, ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಇಂದ್ರಕುಮಾರ್ ಡಿ.ಕೆ, ಮುಖಂಡರು ಹಾಗೂ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ಗೋವಿಂದ್ ರಾಜ್ ಕೆ, ಗುಬ್ಬಿ ಶಿವರಾಜ್ ಸೇರಿದಂತೆ ಇನ್ನು ಮುಂತಾದವರು ಉಪಸ್ಥಿತರಿದ್ದರು.

(Visited 1 times, 1 visits today)
Chikkanayakanahalli crime DC dcm dr.g.parameshwar kannada news karnataka local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Article೧೦ ನಿಮಿಷದಲ್ಲಿ ೨೦ ಲಕ್ಷದ ಕಾಮಗಾರಿ ಮುಕ್ತಾಯ!
Next Article ಲೆಟರ್‌ಹೆಡ್ ಪದಾಧಿಕಾರಿಗಳಾಗುವುದರಿಂದ ಯಾವುದೇ ಪ್ರಯೋಜನವಿಲ್ಲ
News Desk Benkiyabale

Related Posts

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm news
ತಾಜಾ ಸುದ್ಧಿಗಳು
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
Our Youtube Channel
Our Picks

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

By News Desk BenkiyabaleOctober 16, 2026 5:16 pm

ತುಮಕೂರು: ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಅಸ್ಮಿತೆಗಳು ಅಳಿಸಿಹೋಗುವ ಆತಂಕ ಎದುರಾಗಿರುವ ಇಂದಿನ ಸಂದರ್ಭದಲ್ಲಿ ನಾಟಕಗಳು, ವಿವಿಧ ರಂಗರೂಪಗಳು ನಮ್ಮ ಮೂಲ…

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.