ತುಮಕೂರು: ಗ್ರಾಮೀಣ ಪ್ರದೇಶಗಳ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿAದು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಿವೇಶನ ಹಂಚಿಕೆಗೆ ಸಂಬAಧಿಸಿದAತೆ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸುತ್ತಾ, ಅರ್ಹತೆ ಹೊಂದಿರದ ಪ್ರಕರಣಗಳನ್ನು ಕಡ್ಡಾಯವಾಗಿ ಜಂಟಿ ಸ್ಥಳ ಪರಿಶೀಲನೆ ನಡೆಸಿ ಜಿಪಿಎಸ್ ಸಹಿತ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಸಲ್ಲಿಸಬೇಕೆಂದು ಅವರು ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ರಹಿತ ಕುಟುಂಬಗಳನ್ನು ಸಮಗ್ರವಾಗಿ ಗುರುತಿಸಿ, ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ಹೊಸ ಭೂಮಿಯ ಮಂಜುರಾತಿ ಕೋರಿದ ಪ್ರಸ್ತಾವನೆಗಳನ್ನು ತ್ವರಿತವಾಗಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ನಿರ್ದೇಶಿಸಿದರು.
ಜಿಲ್ಲೆಯಾದ್ಯಂತ ಸುಮಾರು ೫೦,೦೦೦ ನಿವೇಶನಗಳನ್ನು ವಿತರಿಸುವ ಗುರಿ ಹೊಂದಲಾಗಿದ್ದು, ನಿವೇಶನ ಹಂಚಿಕೆ ಕಾರ್ಯಕ್ರಮವು ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಎಲ್ಲಾ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಅಗತ್ಯ ಪ್ರಸ್ತಾವನೆಯನ್ನು ಸೆಪ್ಟೆಂಬರ್ ೨೫ರೊಳಗಾಗಿ ಇ-ಆಫೀಸ್ ಮೂಲಕ ಸಲ್ಲಿಸಬೇಕೆಂದು ಸೂಚಿಸಿದರು.
ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಲು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ನಿವೇಶನ ಹಂಚಿಕೆಗೆ ಅಗತ್ಯವಿರುವ ಸೂಕ್ತವಾದ ಸರ್ಕಾರಿ ಜಮೀನು ಲಭ್ಯವಿಲ್ಲದ ಸಂದರ್ಭಗಳಲ್ಲಿ ಪರ್ಯಾಯವಾಗಿ ಸರ್ಕಾರಿ ಜಮೀನನ್ನು ಗುರುತಿಸಿ ಒದಗಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಡಿಡಿಎಲ್ಆರ್ ಭಾವನ, ವಿವಿಧ ತಾಲ್ಲೂಕಿನ ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಎಡಿಎಲ್ಆರ್ ಸೇರಿದಂತೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)





