BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
  • ಶಂಕಿತ ನಕ್ಸಲ್ ವೆಂಕಟೇಶ್ ಬಂಧನ
  • ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ
  • ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ
  • ಕಲ್ಪತರುನಾಡಿನಲ್ಲಿ ಸಮಸ್ಯೆಗಳ ನಡುವೆಯೂ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಹಬ್ಬ ಆಚರಣೆ
  • ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ರೈತ ಸಂಘ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

By News Desk BenkiyabaleUpdated:September 16, 2026 5:15 pm

ತುಮಕೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯ್ತಿಗಳ ವಿವಿಧ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಕರ್ನಾಟಕ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದು, ಈ ಹೋರಾಟಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಹಕಾರ ನೀಡವಂತೆ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ ರವರ ಮನವಿ ಸಲ್ಲಿಸಲಾಯಿತು.
ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಸುಬ್ಬರಾಜ ಅರಸ್ ವಿ.ಆರ್., ಖಜಾಂಚಿ ಮಂಜುನಾಥ ಎಸ್.ಎಸ್., ರಾಜ್ಯ ಪರಿಷತ್ ಸದಸ್ಯ ವೆಂಕಟೇಶ್ ಡಿ.ವಿ. ಹಾಗೂ ಉಪಾಧ್ಯಕ್ಷರಾದ ತೇಜಸ್ವಿ ರವರನ್ನೊಳಗೊಂಡ ನಿಯೋಗ ನಗರದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಸಿಇಓ ರವರನ್ನು ಭೇಟಿ ಮಾಡಿ ಹೋರಾಟದ ಕುರಿತು ಮನವಿ ಸಲ್ಲಿಸಿದರು.
ಪಿಡಿಓಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳುವುದರೊಂದಿಗೆ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಶಾಂತಿಯುತ ಹೋರಾಟಕ್ಕೆ ಅಗತ್ಯ ಸಹಕಾರ ನೀಡುವಂತೆ ಸಿಇಓರವರಿಗೆ ಕೋರಿದರು.
ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಏಕಕಾಲದಲ್ಲಿ ಗ್ರೂಪ್?ಬಿ ಹುದ್ದೆಗಳಾಗಿ ಉನ್ನತೀಕರಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ಅರ್ಹ ಅಧಿಕಾರಿಗಳಿಗೆ ವಿಳಂಬವಿಲ್ಲದೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ಬಾಕಿಯಿರುವ ೧೫ನೇ ಹಣಕಾಸು ಆಯೋಗದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಗ್ರಾಮ ಪಂಚಾಯಿತಿಗಳ ಸುಗಮ ಆಡಳಿತ ಮತ್ತು ಮೂಲ ಸೌಕರ್ಯ ನಿರ್ವಹಣೆಗೆ ಅಗತ್ಯ ಆರ್ಥಿಕ ನೆರವು ಒದಗಿಸಬೇಕು. ಗ್ರಾಮ ಪಂಚಾಯಿತಿಗಳ ಕುಡಿಯುವ ನೀರು ಮತ್ತು ನೈರ್ಮಲ್ಯ ಸೇವೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು. ಜನಸಂಖ್ಯೆ ಮತ್ತು ವ್ಯಾಪ್ತಿಯ ಆಧಾರದ ಮೇಲೆ ಪ್ರತಿ ಗ್ರಾಮ ಪಂಚಾಯಿತಿಗೆ ನೈರ್ಮಲ್ಯ ಕಾರ್ಯಗಳಿಗಾಗಿ ವಾರ್ಷಿಕ ೧೦ ಲಕ್ಷದಿಂದ ೧೫ ಲಕ್ಷದವರೆಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮತ್ತು ನಿರ್ವಹಣೆಗಾಗಿ ೨೫ ಲಕ್ಷದಿಂದ ೩೫ ಲಕ್ಷದವರೆಗೆ ಪ್ರತ್ಯೇಕ ಅನುದಾನ ಒದಗಿಸಬೇಕು. ಈ ಕುರಿತು ವಿಸ್ತöÈತ ವರದಿ ಸಿದ್ಧಪಡಿಸಿ, ಪೂರಕ ಬಜೆಟ್ ಮೂಲಕ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯ್ತಿಗಳಲ್ಲಿ ಪದೋನ್ನತಿ, ನಿವೃತ್ತಿ, ಮರಣ ಹಾಗೂ ಇತರ ಕಾರಣಗಳಿಂದ ಖಾಲಿಯಾಗಿರುವ ಎಲ್ಲ ಸಿಬ್ಬಂದಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು. ಪ್ರಸ್ತುತ ಇರುವ ಕ್ಲಿಷ್ಟಕರ ನೇಮಕಾತಿ ವಿಧಾನವನ್ನು ಸರಳೀಕರಿಸಿ, ನೇಮಕಾತಿಯ ಪ್ರತಿಯೊಂದು ಹಂತಕ್ಕೂ ಸ್ಪಷ್ಟ ಕಾಲಮಿತಿ ನಿಗದಿಪಡಿಸಬೇಕು. ಹುದ್ದೆ ಖಾಲಿಯಾದ ತಕ್ಷಣ ನಿಯಮಾನುಸಾರ ನೇಮಕಾತಿ ನಡೆಸುವಂತಹ ಶಾಶ್ವತ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸರ್ಕಾರವನ್ನು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ವಿ.ಬಿ.ಜಿ.ರಾಮ್‌ಜಿ ಯೋಜನೆಯನ್ನು ನಿಯಮ ಬಾಹಿರವಾಗಿ ಹಾಗೂ ಒತ್ತಾಯ ಪೂರ್ವಕವಾಗಿ ಅನುಷ್ಠಾನಗೊಳಿಸುವುದನ್ನು ನಿಲ್ಲಿಸಬೇಕು. ಯೋಜನೆಯ ಅನುಷ್ಠಾನಕ್ಕೆ ಸ್ಪಷ್ಟ ಮಾರ್ಗಸೂಚಿ, ಕಾರ್ಯವಿಧಾನ, ಮಾದರಿ ಅಂದಾಜುಪಟ್ಟಿ ಮತ್ತು ಅಧಿಕಾರಿಗಳ ಜವಾಬ್ದಾರಿಗಳನ್ನು ನಿಗದಿಪಡಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲೆ ಅನ್ಯ ಇಲಾಖೆಗಳ ಕೆಲಸಗಳು ಹಾಗೂ ಹೆಚ್ಚುವರಿ ಜವಾಬ್ದಾರಿಗಳನ್ನು ನಿರಂತರವಾಗಿ ಹೇರುವುದನ್ನು ನಿಲ್ಲಿಸಿ, ಅನಗತ್ಯ ಕೆಲಸದ ಒತ್ತಡದಿಂದ ಮುಕ್ತಗೊಳಿಸಬೇಕು. ಇಸ್ವತ್ತು ತಂತ್ರಾAಶದಲ್ಲಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಿ, ತಂತ್ರಾAಶವನ್ನು ಸರಳೀಕರಿಸುವ ಮೂಲಕ ಸಾರ್ವಜನಿಕರಿಗೆ ನಿಗದಿತ ಕಾಲಮಿತಿಯೊಳಗೆ ಸೇವೆ ಒದಗಿಸಲು ಅನುಕೂಲ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸೆ. ೨೧ ರಿಂದ ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿಯನ್ನು ಪ್ರಾರಂಭಿಸಲಿದ್ದು, ಹೋರಾಟದ ಮೊದಲ ಮೂರು ದಿನಗಳಾದ ಸೋಮವಾರ, ಮಂಗಳವಾರ ಮತ್ತು ಬುಧವಾರ ಆಯಾ ಜಿಲ್ಲಾ ಪಂಚಾಯಿತಿ ಕಚೇರಿಗಳ ಮುಂಭಾಗದಲ್ಲಿ ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಲಾಗುವುದು. ನಂತರ ರಾಜ್ಯ ಸಂಘದ ನಿರ್ದೇಶನದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯಮಟ್ಟದ ಅನಿರ್ಧಿಷ್ಟಾವಧಿ ಹೋರಾಟವನ್ನು ಮುಂದುವರೆಸಲಾಗುವುದು ಎಂದಿದ್ದಾರೆ.
ಹೋರಾಟದ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳ ಅತ್ಯಗತ್ಯ ಸೇವೆಗಳಾದ ಕುಡಿಯುವ ನೀರು ಪೂರೈಕೆ, ಬೀದಿದೀಪ ನಿರ್ವಹಣೆ ಮತ್ತು ನೈರ್ಮಲ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಯೋಜನೆಗಳು, ತಂತ್ರಾAಶಗಳು, ಆಡಳಿತಾತ್ಮಕ ಕಾರ್ಯಗಳು ಹಾಗೂ ಹೆಚ್ಚುವರಿ ಜವಾಬ್ದಾರಿಗಳ ನಿರ್ವಹಣೆಯನ್ನು ಸ್ಥಗಿತಗೊಳಿಸಿ ಅಸಹಕಾರ ವ್ಯಕ್ತಪಡಿಸಲಾಗುವುದು. ಆದ್ದರಿಂದ, ರಾಜ್ಯದ ಎಲ್ಲ ಜಿಲ್ಲಾ ಘಟಕಗಳ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟದ ಕುರಿತು ಸಂಘದ ಜಿಲ್ಲಾಧ್ಯಕ್ಷ ಸುಬ್ಬರಾಜ ಅರಸ್ ವಿ.ಆರ್. ರವರು ಸಿಇಓರವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ತೀರ್ಥ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಎಸ್.ಎಲ್., ಸಂಘಟನಾ ಕಾರ್ಯದರ್ಶಿ (ಮಹಿಳೆ) ಎ. ಕೋಕಿಲ, ಕ್ರೀಡಾ ಕಾರ್ಯದರ್ಶಿ ಸುನೀಲ್‌ಕುಮಾರ್ ಎನ್., ಸಾಂಸ್ಕöÈತಿಕ ಕಾರ್ಯದರ್ಶಿ ವಿಜಯಲಕ್ಷಿ÷್ಮ ಆರ್. ಪಾಟೀಲ್, ಪ್ರಧಾನ ಕಾರ್ಯದರ್ಶಿ ತೇಜೇಶ್ ಜಿ., ಕಾರ್ಯಾಧ್ಯಕ್ಷ ಲೋಕೇಶ್ ಜಿ. ಮತ್ತಿತರರು ಪಾಲ್ಗೊಂಡಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleಶಂಕಿತ ನಕ್ಸಲ್ ವೆಂಕಟೇಶ್ ಬಂಧನ
Next Article ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
News Desk Benkiyabale

Related Posts

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm news
ತಾಜಾ ಸುದ್ಧಿಗಳು
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
news

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm
news

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm
news

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
news

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
news

ತುಮಕೂರು ಕ್ರಿಕೆಟ್ ಮೈದಾನದ ಅಂತಿಮ ವಿನ್ಯಾಸದ ವಿವರಣೆ

September 16, 2026 5:10 pm
Our Youtube Channel
Our Picks

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm

ವಿಬಿ-ಜಿ ರಾಮ್ ಜಿ ಯೋಜನೆ ಗ್ರಾಮೀಣ ಜನರಿಗೆ ವರದಾನ: ಪಿಡಿಒ ಹರ್ಷ

September 16, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

By News Desk BenkiyabaleSeptember 16, 2026 5:18 pm

ತುಮಕೂರು: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಮಂಗಳವಾರ ತುಮಕೂರು ದಸರಾ-೨೦೨೬ರ ಲಾಂಛನವನ್ನು…

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm

ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ

September 16, 2026 5:15 pm

ಶಂಕಿತ ನಕ್ಸಲ್ ವೆಂಕಟೇಶ್ ಬಂಧನ

September 16, 2026 5:13 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.