ತುಮಕೂರು: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆ ಜಾರಿ ಮಾಡಬೇಕು. ಇಮ್ಮಡಿ ರಾಜಧನ ಸಂಗ್ರಹ ರದ್ದು ಮಾಡಬೇಕು ಎಂಬುದೂ ಸೇರಿದಂತೆವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರು ಇದೇ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ ಎಂದು ಜಿಲ್ಲಾ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ಅಧ್ಯಕ್ಷ ಎಸ್.ಡಿ. ದಿಲೀಪ್ ಕುಮಾರ್ ಹೇಳಿದರು.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆಗಳನ್ನು ಈಡೆರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಸರ್ಕಾರ ಸ್ಪಂದಿಸಿಲ್ಲ, ಹೀಗಾಗಿ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಮುಷ್ಕರದ ಸಂದರ್ಭದಲ್ಲಿ ಉತ್ಪಾದನೆ ಮತ್ತು ಪೂರೈಕೆ ಸ್ಥಗಿತಗೊಳಿಸಲು ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್, ತುಮಕೂರು ಜಿಲ್ಲಾ ಸ್ಟೋನ್ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘ ತೀರ್ಮಾನಿಸಿವೆ. ಜಿಲ್ಲೆಯ ಎಲ್ಲಾ ೭೮ ಕ್ವಾರಿ, ಕ್ರಷರ್‌ಗಳು ಉತ್ಪಾದನೆ ಹಾಗೂ ಪೂರೈಕೆಯನ್ನು ಸ್ಥಗಿತಗೊಳಿಸಿವೆ ಎಂದು ತಿಳಿಸಿದರು.
ನಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ವಾರಿ ಮತ್ತು ಕ್ರಷರ್ ಮಾಲೀಕರು ಎಲ್ಲಾ ಕ್ವಾರಿ ಮತ್ತು ಕ್ರಷರ್ ಘಟಕಗಳ ಕಾರ್ಯಾಚರಣೆ ಹಾಗೂ ಉತ್ಪಾದನೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು. ಯಾವುದೇ ರೀತಿಯಲ್ಲಿ, ಎಂ-ಸ್ಯಾAಡ್ ಹಾಗೂ ಕಲ್ಲು ಉತ್ಪನ್ನಗಳ ಲೋಡಿಂಗ್ ಮತ್ತು ಸಾಗಾಣಿಕೆಯನ್ನು ತಕ್ಷಣದಿಂದಲೇ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು.ಮುಂದಿನ ಆದೇಶ ಅಥವಾ ಸರ್ಕಾರದೊಂದಿಗೆ ಮಾತುಕತೆಯ ಫಲಿತಾಂಶ ಬರುವವರೆಗೂ ಈ ಮುಷ್ಕರ ಮುಂದುವರಿಯಲಿದ್ದು, ಎಲ್ಲರೂ ಸಂಘಟನೆಯೊAದಿಗೆ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.
ಸಂಘದ ಉಪಾಧ್ಯಕ್ಷರಾದ ಬಿ.ಎಸ್. ನಾಗೇಶ್, ಶ್ರೀನಿವಾಸ ಮಿತ್ರ, ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ರಂಗನಾಥ್ ಲಾಡ್, ಎನ್.ಎಸ್. ಬಾಲಾಜಿ, ಹನೀಫ್ ಹಾಜರಿದ್ದರು.
(Visited 1 times, 1 visits today)





