BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
  • ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
  • ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ
  • ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ
  • ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ
  • ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ
  • ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ
  • ಜಿಲ್ಲಾಧಿಕಾರಿಗಳ ಸೂಚನೆಯಂತೆ ಹೊಸ ಕೊಳವೆಬಾವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
news

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
By News Desk BenkiyabaleUpdated:September 26, 2026 5:53 pm

ತುಮಕೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್)ಹೆಸರಿನಲ್ಲಿ ದಲಿತ, ಆದಿವಾಸಿ, ಮುಸ್ಲಿಂ, ಬಡವರು, ಅನಕ್ಷರಸ್ಥರ ಮತದಾನದ ಹಕ್ಕನ್ನು ಕಸಿಯುವ ಕೆಲಸ ಮಾಡುತ್ತಿರುವ ಬಿಜೆಪಿಯ ಈ ಕುತಂತ್ರ ಹಾಗೂ ಚುನಾವಣಾ ಆಯೋಗದ ನಿಷ್ಕಿçಯತೆಯನ್ನು ಖಂಡಿಸಿ ಸೆಪ್ಟಂಬರ್ ೨೮ ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿಯನ್ನು ಕೇಂದ್ರದಲ್ಲಿ ಹಾಗೂ ವಿವಿಧ ರಾಜ್ಯಗಳಲ್ಲಿ ಅಧಿಕಾರಕ್ಕೆ ತರುವ ಉದ್ದೇಶದಿಂದ ಚುನಾವಣಾ ಆಯೋಗ ಎಸ್.ಐ.ಆರ್ ಎಂಬ ಪ್ರಕ್ರಿಯೆಯ ಮೂಲಕ ಬಿಜೆಪಿಯೇತರ ಮತದಾರರನ್ನು ಪಟ್ಟಿಯಿಂದ ಅಳಿಸಿ ಹಾಕಿ,ಒಂದು ಪಕ್ಷದ ಪರವಾಗಿ ಕೆಲಸ ಮಾಡಿರುವುದು ಬಬಲೇಶ್ವರ, ಬೆಳಗಾಂ,ಧಾರವಾಡ ದಕ್ಷಿಣದಲ್ಲಿ ಹಲವು ದಾಖಲೆಗಳ ಮೂಲಕ ಬಹಿರಂಗ ಗೊಂಡಿದೆ.ಜನರ ನಂಬಿಕೆ ಕಳೆದು ಕೊಂಡಿರುವ ಚುನಾವಣಾ ಆಯೋಗದ ವಿರುದ್ದ ಹಾಗೂ ರಾಜ್ಯದಲ್ಲಿ ಎಸ್.ಐ.ಆರ್. ಪ್ರಕ್ರಿಯೆಯನ್ನು ಸಂವಿಧಾನ ಬದ್ದವಾಗಿ ನಡೆಸುವಂತೆ ಒತ್ತಾಯಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಮಾತನಾಡಿ,ನಮ್ಮ ನಾಯಕರಾದ ರಾಹುಲ್‌ಗಾಂಧಿ ಅವರು ಬಿಜೆಪಿಯ ವೋಟ್ ಚೋರಿ ಬಗ್ಗೆ ಆಗಾಗ್ಗೆ ಪ್ರಸ್ತಾಪಿಸುತ್ತಾ ಬಂದಿದ್ದರು.ಬೆಳಗಾA ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಫಾರಂ ನಂ ೦೭ ಸಲ್ಲಿಕೆ ಸ್ಪಷ್ಟ ಸಾಕ್ಷವಾಗಿದೆ.ಬಿಎಲ್‌ಓ ಅಥವಾ ಬಿಎಲ್‌ಎ೦೨ ಅಲ್ಲದವರು ತಮ್ಮ ಹೆಸರು ಮುದ್ರಿತ ಫಾರಂ ನಂಬರ್ ೦೭ರಲ್ಲಿ ೨೫೦೦ಕ್ಕೂ ಹೆಚ್ಚು ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲು ಅರ್ಜಿ ಸಲ್ಲಿಸಿರುವುದು, ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಜನರ ಮುಂದಿರುವ ದಾಖಲೆಯಾಗಿದೆ.ಕೂಡಲೇ ಶಾಸಕರಾದ ಅಭಯ್ ಪಾಟೀಲ್ ವಿರುದ್ದ ಚುನಾವಣಾ ಆಯೋಗ ಕೂಡಲೇ ಕಾನೂನು ಕ್ರಮ ಜರುಗಿಸಬೇಕು.ಬಡವರು, ದಲಿತರು,ಮುಸ್ಲಿಂರ ಮತಗಳನ್ನು ಇಲ್ಲದಂತೆ ಮಾಡಿ, ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿದೆ. ಇದರ ವಿರುದ್ದ ಉಗ್ರ ಹೋರಾಟ ಅನಿವಾರ್ಯ ಎಂದರು.
ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು ೭೪ ಸಾವಿರ ಮತದಾರರನ್ನು ತೆಗೆಯಲಾಗಿದೆ.ಅಲ್ಲದೆ ಮತದಾರರ ಪಟ್ಟಿಯಲ್ಲಿರುವ ೩೯ ಸಾವಿರ ಮತದಾರರಿಗೆ ನೊಟೀಷ್ ನೀಡಿದ್ದಾರೆ.ಬೆಳಗಾವಿಯ ಅಭಯಪಾಟೀಲ್ ಪ್ರಕರಣ ಗಮನಿಸಿದರೆ ನಮ್ಮ ಕ್ಷೇತ್ರದಲ್ಲಿಯೂ ಆಗಿರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ದಾಖಲೆಗಳ ಸಂಗ್ರಹ ನಡೆಯುತ್ತಿದೆ. ಎಸ್.ಐ.ಆರ್.ಪ್ರಕ್ರಿಯೆಯನ್ನು ಕೇಂದ್ರೀಕರಿಸಿ, ಒಂದು ಖಾಸಗಿ ಸಂಸ್ಥೆಗೆ ವಹಿಸಿರುವ ಸಾದ್ಯತೆ ಕಂಡು ಬರುತ್ತಿದೆ.ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಎಸ್.ಐ.ಟಿ ರಚಿಸಬೇಕು.ಎಸ್.ಐ.ಆರ್.ನಿಂದ ಬಡವರು-ಬಲ್ಲಿದರ ನಡುವೆ ಇರುವ ಅಂತರವನ್ನು ಮತ್ತಷ್ಟು ಹೆಚ್ಚಿಸಲಿದೆ. ಬಿಜೆಪಿ ಮತ್ತು ಚುನಾವಣಾ ಆಯೋಗದ ಈ ನಡೆಯ ವಿರುದ್ದ ಸೆಪ್ಟಂಬರ್ ೨೮ ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡಸಲಾಗುವುದು ಎಂದು ಡಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಅಹಮದ್ ತಿಳಿಸಿದರು.
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ವಾಸುದೇವಮೂರ್ತಿ ಮಾತನಾಡಿ,ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರು ದಾಖಲೆ ಸಮೇತ ಮಾಡಿದ ಆರೋಪದಿಂದ ಕಂಗೆಟ್ಟಿರುವ ಶಾಸಕ ಅಭಯಪಾಟೀಲ್, ಕೆಪಿಸಿಸಿ ಅಧ್ಯಕ್ಷರಿಗೆ ಕನ್ನಡ ಬರುವುದಿಲ್ಲ ಎನ್ನುವ ಆರೋಪ ಮಾಡಿದ್ದಾರೆ.ಆದರೆ ಬಿ.ಕೆ.ಹರಿಪ್ರಸಾದ್ ಅವರಿಗೆ ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳ ಮೇಲೆ ಪಾಂಡಿತ್ಯವಿದೆ.ಅವರು ರಾಜ್ಯಸಭೆಯಲ್ಲಿ , ವಿಧಾನಪರಿಷತ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ ಮಾಡಿರುವ ಭಾಷಣಗಳೇ ಸಾಕ್ಷಿ,ಬಿಜೆಪಿ ಎಂಪಿಗಳ ರೀತಿಯಲ್ಲಿ ನೆಗೆ ಪಾಟೀಲಿಗೀಡಾಗಿಲ್ಲ.ಅಲ್ಲದೆ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂಬAತೆ ಬಬಲೇಶ್ವರ್,ಬೆಳಗಾವಿ ದಕ್ಷಿಣ, ಧಾರವಾಡದಲ್ಲಿ ನಡೆದಿರುವ ಎಸ್.ಐ.ಆರ್. ಪ್ರಕ್ರಿಯೆಗಳೇ ಸಾಕ್ಷಿಯಾಗಿವೆ.ಮೊದಲು ತಮಗೆ ಮತ ನೀಡಿದ ಮತದಾರರ ಹಕ್ಕು ರಕ್ಷಣೆಗೆ ಬಿಜೆಪಿ ಮುಂದಾಗಲಿ ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣಪ್ಪ,ವಿವಿಧ ಮಂಚೂಣಿ ಘಟಕಗಳ ಮುಖಂಡರಾದ ಸೈಯದ್ ದಾದಾಪೀರ್, ಗುರುಪ್ರಸಾದ್, ಅನಿಲ್‌ಕುಮಾರ್, ಭೈಲಸ್ವಾಮಿ, ಸುರೇಶ್‌ರಾಜ್, ಇರ್ಫಾನ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
Congress dcm dr.g.parameshwar kannada news karnataka local news Protest tumakur tumkur ಕೊರಟಗೆರೆ: ತುಮಕೂರು:
Previous Articleಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ
Next Article ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
News Desk Benkiyabale

Related Posts

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm news

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm news

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm news
ತಾಜಾ ಸುದ್ಧಿಗಳು
news

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm
news

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm
news

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm
news

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm
news

ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ

September 25, 2026 6:04 pm
Our Youtube Channel
Our Picks

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

By News Desk BenkiyabaleSeptember 26, 2026 5:56 pm

ತುಮಕೂರು: ನಗರದ ಹಲವು ವಾರ್ಡ್ಗಳಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವ…

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.