BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
  • ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ
  • ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ
  • ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ
  • ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
  • ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ
news

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಜ್ಞಾನೇಶಕುಮಾರ್ ರಾಜೀನಾಮೆಗೆ ಆಗ್ರಹ
By News Desk BenkiyabaleUpdated:September 28, 2026 5:06 pm

ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಜ್ಞಾನೇಶಕುಮಾರ್ ಅವರ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೂ ಆಗಿರುವ ಎಸ್.ಐ.ಆರ್. ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಎಸ್.ಐ.ಆರ್.ನಂತಹ ಸಂವಿಧಾನ ಬಾಹಿರ ಯೋಜನೆಯನ್ನು ಜಾರಿಗೆ ತಂದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ರಾಜೀನಾಮೆ ಪಡೆದು, ಅಕ್ರಮಗಳ ತನಿಖೆ ನಡೆಸಬೇಕು ಹಾಗೂ ಇದುವರೆಗೂ ಆಗಿರುವ ಎಸ್.ಐ.ಆರ್ ಪ್ರಕ್ರಿಯೆಯ ಜೊತೆಗೆ, ಎಸ್.ಐ.ಆರ್.ನಂತರ ನಡೆದಿರುವ ಚುನಾವಣೆಗಳನ್ನು ರದ್ದು ಮಾಡಬೇಕೆಂಬುದು ನಮ್ಮ ಆಗ್ರಹವಾಗಿದೆ.ಮುಖ್ಯ ಚುನಾವಣೆ ಆಯುಕ್ತರು ಎಸ್.ಐ.ಆರ್. ಹೆಸರಿನಲ್ಲಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ,ಇದನ್ನು ಪ್ರಶ್ನಿಸಿದ ಲೋಕಸಭೆಯ ವಿರೋಧಪಕ್ಷದ ನಾಯಕರಿಗೆ ಉಢಾಪೆ ಉತ್ತರ ನೀಡುವ ಮೂಲಕ ಪ್ರಶ್ನಾತೀತ ಎಂಬAತೆ ನಡೆದುಕೊಂಡಿದ್ದಾರೆ. ಇದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ವಿರೋಧ ಪಕ್ಷದ ನಾಯಕರಾದ ರಾಹುಲ್‌ಗಾಂಧಿ ಅವರು ಓಟ್ ಚೋರಿಯ ಬಗ್ಗೆ ಮಾತನಾಡಿದರೆ, ಬಿಜೆಪಿ ಅಧಿಕಾರದಲ್ಲಿರುವ ೧೨ ರಾಜ್ಯಗಳ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ,ಒಟ್ ಚೋರಿ ಬೆಂಬಲಿಸಿರುವುದು ನಾಚಿಕೆಗೇಡಿನ ಸಂಗತಿ. ಒಂದು ಸ್ವಯತ್ತ ಸಂಸ್ಥೆಯನ್ನು ಒಂದು ಪಕ್ಷದ ಹಿತಾಸಕ್ತಿಗೆ ಅನುಗುಣವಾಗಿ ನಡೆಸುತ್ತಿರುವ ಜ್ಞಾನೇಶಕುಮಾರ್ ಅವರು ರಾಜೀನಾಮೆ ನೀಡಬೇಕು.ಹಾಗೆಯೇ ಪಶ್ಚಿಮ ಬಂಗಾಳ,ಬಿಹಾರ ಚುನಾವಣೆಗಳನ್ನು ರದ್ದು ಮಾಡಬೇಕೆಂದು ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಆಗ್ರಹಿಸಿದರು.
ಮಾಜಿ ಶಾಸಕ ಡಾ.ಎಸ್.ಷಪಿ ಅಹಮದ್ ಮಾತನಾಡಿ,ಕಳೆದ ಒಂದು ವರ್ಷದ ಹಿಂದೆಯೇ ನಮ್ಮ ನಾಯಕರಾದ ರಾಹುಲ್‌ಗಾಂಧಿ ಅವರು ಓಟ್ ಚೋರಿ ಬಗ್ಗೆ ಮಾತನಾಡಿದಾಗ ಮಾಧ್ಯಮಗಳ ಮೂಲಕ ಅವರ ಬಾಯಿ ಕಟ್ಟಿ ಹಾಕುವ ಕೆಲಸವನ್ನು ಬಿಜೆಪಿ ಮಾಡಿತ್ತು.ಆದರೆ ಚುನಾವಣಾ ಆಯೋಗದ ಇತರೆ ಆಯುಕ್ತರೇ ಇಂದು ತಮ್ಮ ನಡುವೆ ಹಲವು ವಿಚಾರಗಳಲ್ಲಿ ಭಿನ್ನಮತವಿದೆ ಎಂಬುದನ್ನು, ತಮ್ಮ ಆಕ್ಷೆಪಣೆಗಳಿಗೆ ಬೆಲೆ ಇಲ್ಲ ಎಂದು ಸರಕಾರಕ್ಕೆ ಪತ್ರ ಬರೆದಿರುವುದು ಚುನಾವಣಾ ಆಯೋಗ ದಾರಿ ತಪ್ಪಿರುವುದಕ್ಕೆ ಸಾಕ್ಷಿಯಾಗಿದೆ.ಹಾಗಾಗಿ ಜ್ಞಾನೇಶಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್ ಮಾತನಾಡಿ,ಎಸ್.ಐ.ಆರ್ ಎಂಬುದು ನ್ಯಾಯ ಸಮ್ಮತವಾಗಿಲ್ಲ ಎಂಬುದು ಇತ್ತೀಚಿನ ಚುನಾವಣಾ ಆಯೋಗದ ನಡವಳಿಕೆಗಳಿಂದ ಸಾಭೀತಾಗಿದೆ.ಕಾಂಗ್ರೆಸ್ ಯುವಜನರಿಗೆ ಮತದಾನದ ಹಕ್ಕು ನೀಡಿದರೆ, ಬಿಜೆಪಿ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಸಂವಿಧಾನ ಬದ್ದ ಮತದಾನದ ಹಕ್ಕನ್ನು ಕಸಿಯುವ ಮೂಲಕ ಜನಮತಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ.ಇದಕ್ಕೆ ಎಂದಿಗೂ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ.ಪ್ರತಿ ಪ್ರಜೆಯ ಮತದಾನದ ಹಕ್ಕು ರಕ್ಷಿಸಲು ಕಾಂಗ್ರೆಸ್ ಬದ್ದವಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಮಾತನಾಡಿ,ಜ್ಞಾನೇಶಕುಮಾರ್ ಎಂಬ ವ್ಯಕ್ತಿಯ ಮೂಲಕ ಬಿಜೆಪಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯುತ್ತಿದೆ.ಇದು ನಿಜವಾದ ಜನಾಭಿಪ್ರಾಯವಲ್ಲ.ಪ್ರಜಾಪ್ರಭುತ್ವದ ಹಬ್ಬ ಎನ್ನುವ ಚುನಾವಣೆಯ ಘನತೆ, ಗೌರವ ಕಾಪಾಡುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ.ಇದರ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಒಗ್ಗೂಡಿ, ಜ್ಞಾನೇಶಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಿದ್ದೇವೆ. ಚುನಾವಣಾ ಆಯೋಗಕ್ಕೆ ಅಂಟಿರುವ ಕಳಂಕ ತೊಳೆಯಲು ಪ್ರಯತ್ನಿಸುವುದಾಗಿ ತಿಳಿಸಿದರು.
ಮಾಜಿ ಶಾಸಕ ಡಾ.ರಫೀಕ್ ಅಹಮದ್ ಮಾತನಾಡಿ, ಪಶ್ಚಿಮ ಬಂಗಾಳ, ಬಿಹಾರದಂತಹ ರಾಜ್ಯಗಳಲ್ಲಿ ಎಸ್.ಐ.ಆರ್. ಮೂಲಕ ಅರ್ಹ ಮತದಾರರನ್ನು ಕೈಬಿಟ್ಟು ಫಲಿತಾಂಶದಲ್ಲಿ ಏರುಪೇರಾಗುವಂತೆ ಬಿಜೆಪಿ ಮತ್ತು ಚುನಾವಣಾ ಆಯೋಗ ಮಾಡಿದೆ. ಎಸ್.ಐ.ಆರ್‌ನ ನೇರ ಟಾರ್ಗೆಟ್ ಅಹಿಂದ ಮತದಾರರೇ ಆಗಿದ್ದಾರೆ.ಅಲ್ಲಲ್ಲಿ ಉದ್ದೇಶ ಪೂರ್ವಕವಾಗಿ ದಲಿತ, ಅನಕ್ಷರಸ್ಥ ಮತದಾರರ ಓಟ್‌ಗಳನ್ನು ತೆಗೆಯಲು ಫಾರಂ ನಂ ೦೭ ಸಲ್ಲಿಸುವ ಮೂಲಕ ಅವರ ಹಕ್ಕು ಕಸಿಯಲಾಗುತ್ತಿದೆ.ಕೇಂದ್ರ ಸರಕಾರ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಪಡೆಯದಿದ್ದಲ್ಲಿ ಮತ್ತಷ್ಟು ಉಗ್ರ ಹೋರಾಟ ನಡಸಲಾಗುವುದು ಎಂದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ,ಜ್ಞಾನೇಶಕುಮಾರ್ ಎಂಬ ಕೇರಳ ಕೇಡರ್‌ನ ಅಧಿಕಾರಿ ಮಾಡಿರುವ ಕಿತಾಪತಿ ಹಲವು,೩೭೦ನೇ ವಿಧಿ ರದ್ದು, ಶ್ರೀರಾಮ ಮಂದಿರ ಟ್ರಸ್ಟೆ÷್ಗ ಕಳ್ಳರನ್ನು ನುಗ್ಗಿಸಿ ಹುಂಡಿ ಕಳ್ಳತನ ಮಾಡಿಸಿದ್ದು ಸೇರಿದಂತೆ ಹಲವು ಆರೋಪಗಳು ಇವರ ಮೇಲಿದೆ. ಕಳೆದ ೧೦ ತಿಂಗಳಲ್ಲಿ ೧೪ ಬಾರಿ ಮುಖ್ಯ ಚುನಾವಣಾ ಆಯುಕ್ತರ ನಡೆ ಪ್ರತಿಭಟಿಸಿ ಕೇಂದ್ರಕ್ಕೆ ಇತರೆ ಆಯುಕ್ತರು ಪತ್ರ ಬರೆದಿದ್ದರೂ ಯಾವುದೇ ಕ್ರಮ ಆಗಿಲ್ಲ. ಎಕಪಕ್ಷೀಯವಾಗಿ ಬಿಜೆಪಿಯ ಕಾರ್ಯಕರ್ತನಂತೆ ಮುಖ್ಯ ಚುನಾವಣಾ ಆಯುಕ್ತರು ವರ್ತಿಸಿದ್ದು, ಪ್ರಜಾಪ್ರಭುತ್ವವನ್ನು ಉಳಿಸಲು ಜೆನ್-ಜಿಗಳು ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ.ಅದೇ ರೀತಿ ಕಾಂಗ್ರೆಸ್ ಕಾರ್ಯಕರ್ತರು ಸಹ ನಮ್ಮ ಹೋರಾಟವನ್ನು ಮತ್ತಷ್ಟು ತೀಷ್ನಗೊಳಿಸುವ ಅಗತ್ಯವಿದೆ ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ಕೆಂಚಮಾರಯ್ಯ,ಆರ್.ರಾಮಕೃಷ್ಣ, ನರಸೀಯಪ್ಪ, ಹೆಚ್.ಸಿ.ಹನುಮಂತಯ್ಯ, ಕುಮಾರಸ್ವಾಮಿ, ಸಂಜೀವಕುಮಾರ್, ಶ್ರೀನಿವಾಸಕುಮಾರ್, ಲಕ್ಷö್ಮಣ, ರಂಗಸ್ವಾಮಯ್ಯ ಸಿದ್ದಾಪುರ, ಇರ್ಫಾನ್ ಅಹಮದ್, ಜಾಕಿರ್ ಪಾಷ, ಸುಜಾತ, ಮೆಹಬೂಬ್ ಪಾಷ, ನಿಂಗರಾಜು, ಆಟೋ ರಾಜು, ಪಂಚಾಕ್ಷರಯ್ಯ, ಆದಿಲ್, ಸೈಯದ್ ದಾದಾಫೀರ್, ನಟರಾಜಶೆಟ್ಟಿ, ಕೆಂಪರಾಜು, ಸುರೇಶರಾಜ್, ಭಾಗ್ಯ ಶೇಖರ್, ಸುಮತಿ, ನಾಗಲಕ್ಷಿ, ವಿಜಯಲಕ್ಷಿö್ಮ, ಭಾಗ್ಯಮ್ಮ, ಸಿದ್ದಲಿಂಗೇಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

(Visited 1 times, 1 visits today)
Congress dcm dr.g.parameshwar kannada news local news Protest tumakur tumkur tumkur news ತುಮಕೂರು:
Previous Articleನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ
Next Article ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ
News Desk Benkiyabale

Related Posts

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm news

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm ಇತರೆ ಸುದ್ಧಿಗಳು

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm news
ತಾಜಾ ಸುದ್ಧಿಗಳು
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
ಇತರೆ ಸುದ್ಧಿಗಳು

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm
news

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm
news

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
news

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm
Our Youtube Channel
Our Picks

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

By News Desk BenkiyabaleSeptember 28, 2026 5:12 pm

ತುಮಕೂರು: ಮನುಷ್ಯನ ಪ್ರೀತಿಯ ಪ್ರಾಣಿಯಾಗಿರುವ ನಾಯಿ ಮತ್ತು ಬೆಕ್ಕುಗಳಿಂದ ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವರೇಬಿಸ್ ದಿನಾಚರಣೆಯ ಗುರಿಯಾಗಿದ್ದು, ಪ್ರತಿಯೊಬ್ಬರೂ…

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.