BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
  • ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

ಅ.೩ರಂದು ಹಿಂದೂ ಮಹಾ ಗಣಪತಿ ಅದ್ಧೂರಿ ವಿಸರ್ಜನಾ ಮಹೋತ್ಸವ
By News Desk BenkiyabaleUpdated:October 01, 2026 5:27 pm

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿಯ ೯ನೇ ವರ್ಷದ ಗಣಪತಿಯ ವಿಸರ್ಜನಾ ಮಹೋತ್ಸವವನ್ನು ಈ ತಿಂಗಳ ೩ರಂದು ಶನಿವಾರ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ. ಶೇಖರ್ ಹೇಳಿದರು.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವವನ್ನು ಅಂದು ಬೆಳಿಗ್ಗೆ ೧೧ ಗಂಟೆಗೆ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಅಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ೨೦ಕ್ಕೂ ಹೆಚ್ಚು ಮಠಗಳ ಮಠಾಧೀಶರುಗಳು ಭಾಗವಹಿಸುವರು. ಇದಕ್ಕೂ ಮೊದಲು ಪೂಜ್ಯರ ಹಿಂದೂ ಮಹಾಗಣಪತಿ ಹಾಗೂ ಮೆರವಣಿಗೆ ಗಣಪತಿಗೆ ಪೂಜೆ ಸಲ್ಲಿಸುವರು.ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವರಾದ ಕೆ.ಎನ್. ರಾಜಣ್ಣ, ಬಸವನಗೌಡ ಪಾಟೀಲ್ ಯತ್ನಾಳ್, ಕೆ.ಎಸ್. ಈಶ್ವರಪ್ಪ, ಸೊಗಡು ಶಿವಣ್ಣ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಅನೇಕ ಗಣ್ಯರು, ಧಾರ್ಮಿಕ ಮುಖಂಡರು ಭಾಗವಹಿಸುವರು ಎಂದು ತಿಳಿಸಿದರು.
ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆಯು ಬಿಜಿಎಸ್ ವೃತ್ತದಿಂದ ಆರಂಭಗೊAಡು ಲಕ್ಕಪ್ಪ ವೃತ್ತ, ಜೆ.ಸಿ.ರಸ್ತೆ. ಮಂಡಿಪೇಟೆ ವೃತ್ತ, ಸ್ವತಂತ್ರ ಚೌಕ್, ಅಶೋಕ ರಸ್ತೆ, ಬಿ.ಜಿ.ಎಸ್ ವೃತ್ತ, ಎಂ ಜಿ ರಸ್ತೆ, ಜೈನ ಟೆಂಪಲ್ ರಸ್ತೆ, ರಾಮಪ್ಪ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ಕೋಟೆ ಆಂಜನೇಯ ವೃತ್ತ, ಗಾರ್ಡನ್ ರಸ್ತೆ ಮುಖೇನ ಸಾಗಿ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯ ನೆರವೇರಲಿದೆ ಎಂದರು.
ಈ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳಾದ ನಂದಿ ಧ್ವಜ, ನಾಸಿಕ್ ಡೋಲ್, ವೀರಗಾಸೆ, ಡಂಕ ವಾದ್ಯ, ತಮಟೆ ವಾದ್ಯ ಪ್ರದರ್ಶನವಿದೆ. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ವೃತ್ತದಲ್ಲಿ ಹೆಣ್ಣು ಮಕ್ಕಳಿಂದ ‘ಮಾರುತಿಗೆ ಆರತಿ’ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಆಕರ್ಷಕ ಸಿಡಿಮದ್ದಿನ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಟಿ.ಬಿ. ಶೇಖರ್ ಹೇಳಿದರು.
ಈ ಬಾರಿಯ ಪ್ರಮುಖ ಆಕರ್ಷಣೆ ಎಂದರೆ ಮಂಗಳೂರು ಭಾಗದ ಹುಲಿ ಕುಣಿತ, ಮಕ್ಕಳ ಭಜನಾ ತಂಡ, ವಯಲಿನ್ ಚಂಡೆ, ತುಮಕೂರಿನ ಮುತ್ತು ಮಾರಿಯಮ್ಮ ನಗರದ ತಮಟೆ ವಾದ್ಯ, ಭೂಮಿ ಕಲಾ ತಂಡದ ನಾಸಿಕ್ ಡೋಲ್ ಹಾಗೂ ಇತರೆ ಜಾನಪದ ಕಲಾ ತಂಡಗಳೊAದಿಗೆ ನಡೆಸಲಾಗುವುದು ಎಂದು ತಿಳಿಸಿದರು.
ಸ್ವಾಗತ ಸಮಿತಿ ಉಪಾಧ್ಯಕ್ಷ ಮಂಜು ಭಾರ್ಗವ್, ಖಜಾಂಚಿ ಟಿ.ವೈ.ಯಶಸ್, ಮುಖಂಡರಾದ ಮೋಹನ್ ಕುಮಾರ್ ಪಟೇಲ್, ಸಿ.ಆರ್.ಮೋಹನ್ ಕುಮಾರ್, ಧನಿಯಾ ಕುಮಾರ್, ಗೋಕುಲ ಮಂಜುನಾಥ್, ಶೀತಕಲ್ ಕೃಷ್ಣಯ್ಯ, ಡಿ.ಭಾನುಪ್ರಕಾಶ್, ರವಿಕುಮಾರ್, ಪರಮೇಶ್, ಬಸವ ಕುಮಾರ್, ಮಂಜೇಶ್, ಮಹೇಂದ್ರ ಕುಮಾರ್, ವಸಂತ ಕುಮಾರ್, ದಿವಾಕರ್ ನಾಯ್ಡು, ಮಧು, ಸೌಮ್ಯ ಮೊದಲಾದವರು ಹಾಜರಿದ್ದರು.

(Visited 1 times, 1 visits today)
kannada news karnataka local news tumakur tumkur tumkur news ತುಮಕೂರು:
Previous Articleಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
Next Article ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
News Desk Benkiyabale

Related Posts

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm news
ತಾಜಾ ಸುದ್ಧಿಗಳು
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm
Our Youtube Channel
Our Picks

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

By News Desk BenkiyabaleOctober 01, 2026 5:32 pm

ತುಮಕೂರು: ಕನ್ನಡ ಸಾಹಿತ್ಯ ಪರಿಷತ್‌ನ್ನು ಸ್ಥಾಪಿಸಿದವರು ಕೂಡ ಓರ್ವ ಅಧಿಕಾರಿ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ.ಹಾಗಾಗಿ ಕಸಾಪಕ್ಕೆ ಅಧಿಕಾರಿಗಳು ಸ್ಪರ್ಧಿಸುವುದು ಬೇಡ…

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.