ಹುಳಿಯಾರು: ಸರ್ಕಾರದ ಆದೇಶದ ಮೇರೆಗೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸಂಜೀವಿನಿ ಒಕ್ಕೂಟಗಳು ಸಹಕಾರಿ ಬ್ಯಾಂಕುಗಳAತೆ ಕಾರ್ಯನಿರ್ವಹಿಸುತ್ತಿದ್ದು ಅಧ್ಯಕ್ಷರು, ಕಾರ್ಯದರ್ಶಿ, ಎಂಬಿಕೆ, ಕೃಷಿ ಹಾಗೂ ಪಶು, ಬಿಸಿ ಸಖಿ, ಮುಂತಾದ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿ ಮಹಿಳಾ ಸಬಲೀಕರಣದಲ್ಲಿ ಮುಖ್ಯಪಾತ್ರ ವಹಿಸಿರುತ್ತಾರೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಾವಯವ ಕೃಷಿ ಮೇನೇಜರ್ ಭರತ್ ತಿಳಿಸಿದರು.
ಹುಳಿಯಾರು ಹೋಬಳಿಯ ದೊಡ್ಡಬಿದರೆ ಗ್ರಾಮ ಪಂಚಾಯಿತಿ ಮಟ್ಟದ ಜ್ಞಾನಜ್ಯೋತಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ರೂಪಾಂತರ ಮಹಿಳಾ ಸಶಕ್ತಿಕರಣ ಸಂಸ್ಥೆಯ ಸಂಸ್ಥಾಪಕಿ ಹಾಗೂ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೂಪಶ್ರೀ ಅವರು ಮಾತನಾಡುತ್ತಾ ಮಹಿಳೆಯರಿಗಾಗಿ ನಮ್ಮ ಸಂಸ್ಥೆಯು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಮಹಿಳಾ ಬ್ಯಾಂಕ್ ಒಂದನ್ನು ಸ್ಥಾಪನೆ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.
ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರದ ಮುಖ್ಯ ಸಲಹೆಗಾರರಾದ ಆರ್.ಎಂ.ಕುಮಾರಸ್ವಾಮಿ ಮಾತನಾಡುತ್ತಾ ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಹಾಗೂ ಜೀವನ ಜ್ಯೋತಿ ವಿಮಾ ಯೋಜನೆಗಳನ್ನು ಬ್ಯಾಂಕುಗಳ ಮುಖಾಂತರ ನೋಂದಾಯಿಸಬೇಕೆAದು ಕರೆ ನೀಡಿದರು.
ಚಿಕ್ಕನಾಯಕನಹಳ್ಳಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರಂಜಿತ, ದೊಡ್ಡಬಿದರೆ ಗ್ರಾಮ ಪಂಚಾಯಿತಿ ಮಟ್ಟದ ಜ್ಞಾನಜ್ಯೋತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದ್ರಾಕ್ಷಾಯಿಣಿ, ಕಾರ್ಯದರ್ಶಿ ಅಪ್ಸನಾ ಖಾನಂ, ಖಜಾಂಚಿ ಲಲಿತಮ್ಮ, ಎಂಬಿಕೆ ಲಕ್ಷಿ÷್ಮ ರಮೇಶ್, ಎಲ್ಸಿಆರ್ಪಿಗಳಾದ ಇಂದಿರಮ್ಮ, ಸವಿತಾ, ಕೃಷಿ ಸಖಿ ಕರಿಯಮ್ಮ, ಪಶುಸಖಿ ಜ್ಯೋತಿ, ಬಿಡಿಎಸ್ಪಿ ಚಂದ್ರಕಲಾ, ಬಿಸಿಸಖಿ ಪವಿತ್ರ, ಕೃಷಿ ಉದ್ಯೋಗ ಸಖಿ ಭವ್ಯ, ಸಿಆರ್ಪಿಇಪಿ ಜಯಶೀಲ, ಹೊಸದಾಗಿ ಆಯ್ಕೆಯಾದ ಅಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿ ಜ್ಯೋತಿ ವಿ, ಖಜಾಂಚಿ ರಾಧಾ ಟಿ ಮುಂತಾದವರು ಉಪಸ್ಥಿತರಿದ್ದರು.
(Visited 1 times, 1 visits today)





