ತುಮಕೂರು: ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಹಾಗೂ ಕನ್ನಡ ಭಾಷೆಯ ಮಹತ್ವವನ್ನು ಪ್ರತಿಯೊಬ್ಬರಿಗೂ ತಿಳಿಸಬೇಕು ಎಂಬ ಉದ್ದೇಶದಿಂದ ರಾಜ್ಯಾದ್ಯಂತ ಬೈಕ್ನಲ್ಲಿ ಸಂಚರಿಸಿ ಜಾಗೃತಿ ಮೂಡಿಸುತ್ತಿರುವ ಜ್ಞಾನೇಶ್ ಅವರಿಗೆ ತುಮಕೂರಿನಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ರಾಣೆಬೆನ್ನೂರಿನಿಂದ ಬೈಕ್ನಲ್ಲಿ ಪ್ರಯಾಣ ಆರಂಭಿಸಿರುವ ಜ್ಞಾನೇಶ್ ಅವರು ಇಡೀ ಕರ್ನಾಟಕದಾದ್ಯಂತ ಸಂಚರಿಸುತ್ತಾ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡ ಭಾಷೆಗೆ ಆದ್ಯತೆ ನೀಡಬೇಕು, ಕನ್ನಡ ಶಾಲೆಗಳನ್ನು ಉಳಿಸಬೇಕು ಹಾಗೂ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸುವ ಮೂಲಕ ಮಾತೃಭಾಷೆಯ ಶಿಕ್ಷಣಕ್ಕೆ ಪೆÇ್ರೀತ್ಸಾಹ ನೀಡಬೇಕು ಎಂಬ ಸಂದೇಶವನ್ನು ತಮ್ಮ ಅಭಿಯಾನದ ಮೂಲಕ ಸಾರುತ್ತಿದ್ದಾರೆ.
ತುಮಕೂರಿನಲ್ಲಿ ಅಭಿನಂದನೆ: ಈ ಜಾಗೃತಿ ಅಭಿಯಾನದ ಭಾಗವಾಗಿ ತುಮಕೂರಿಗೆ ಆಗಮಿಸಿದ ಸಂದರ್ಭದಲ್ಲಿ ನಗರದ ಬಿಜಿಎಸ್ ಸರ್ಕಲ್ನಲ್ಲಿ ಸಮಾಜ ಸೇವಕ ನಟರಾಜ್ ಅವರು ಜ್ಞಾನೇಶ್ ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು.
ಕನ್ನಡ ಭಾಷೆಯ ಉಳಿವು ಮತ್ತು ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಜ್ಞಾನೇಶ್ ಅವರ ಪ್ರಯತ್ನವನ್ನು ನಟರಾಜ್ ಅವರು ಶ್ಲಾಘಿಸಿದರು.
ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವುದರ ಜೊತೆಗೆ ಮುಂದಿನ ಪೀಳಿಗೆಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಇಂತಹ ಜಾಗೃತಿ ಕಾರ್ಯಗಳು ಸಮಾಜದಲ್ಲಿ ಮತ್ತಷ್ಟು ವಿಸ್ತಾರಗೊಳ್ಳಬೇಕು ಎಂಬ ಆಶಯ ಈ ಸಂದರ್ಭದಲ್ಲಿ ವ್ಯಕ್ತವಾಯಿತು.
ಕನ್ನಡ ಭಾಷೆಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದ್ದು, ಕನ್ನಡ ಶಾಲೆಗಳನ್ನು ಉಳಿಸುವುದು ಮತ್ತು ಮಾತೃಭಾಷೆಯ ಬಳಕೆಗೆ ಪೆÇ್ರೀತ್ಸಾಹ ನೀಡುವುದು ಕಾಲದ ಅಗತ್ಯವಾಗಿದೆ ಎಂಬ ಸಂದೇಶದೊಂದಿಗೆ ಜ್ಞಾನೇಶ್ ಅವರ ಬೈಕ್ ಜಾಗೃತಿ ಅಭಿಯಾನ ಮುಂದುವರಿದಿದೆ.
(Visited 1 times, 1 visits today)





