ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕೇಂದ್ರದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನವೆಂಬರ್ ೨೧ರಂದು ಪ್ರಜಾಸೇವಾ ಅಭಿಯಾನ ಜನಸಭೆಯನ್ನು ನಡೆಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜನಸಭೆಯನ್ನು ಯಾವುದೇ ಲೋಪ-ದೋಷ, ಗೊಂದಲಗಳು ಉಂಟಾಗದAತೆ ವ್ಯವಸ್ಥಿತವಾಗಿ ಏರ್ಪಡಿಸಬೇಕು. ಕಳೆದ ಬಾರಿ ಜಿಲ್ಲೆಯ ಗುಬ್ಬಿ ಹಾಗೂ ಕುಣಿಗಲ್ ತಾಲ್ಲೂಕಿನಲ್ಲಿ ಏರ್ಪಡಿಸಿದ ಮಾದರಿಯಲ್ಲಿಯೇ ಈ ಬಾರಿಯೂ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ನಿರ್ದೇಶನ ನೀಡಿದರು.
ಕಾರ್ಯಕ್ರಮದ ವೇದಿಕೆ, ಧ್ವನಿ-ಬೆಳಕಿನ ವ್ಯವಸ್ಥೆ, ಕಂಪ್ಯೂಟರ್ ಅಳವಡಿಕೆ, ಅಂತರ್ಜಾಲ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಕಲ್ಪಿಸುವ ಕುರಿತು ವಿವಿಧ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿದರು. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಅಡಿಗಲ್ಲುಗಳನ್ನು ಸಿದ್ಧಪಡಿಸಬೇಕು. ಕಾರ್ಯಕ್ರಮದಲ್ಲಿ ವಿತರಿಸಬೇಕೆಂದಿರುವ ಸಲಕರಣೆಗಳನ್ನು ಹಿಂದಿನ ದಿನವೇ ಸಿದ್ದವಾಗಿಟ್ಟುಕೊಳ್ಳಬೇಕು. ನೇಮಕಾತಿ ಆದೇಶ, ಭೌತಿಕ ಸವಲತ್ತು ಪಡೆಯುವ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚನೆ ನೀಡಿದರು.
ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಇಂಜಿನಿಯರಿAಗ್, ತಾಲ್ಲೂಕು ಪಂಚಾಯತಿ, ಕೃಷಿ, ರೇಷ್ಮೆ, ತೋಟಗಾರಿಕೆ, ಕಾರ್ಮಿಕ, ಪ್ರವಾಸೋದ್ಯಮ, ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಷ್ಠಾನವಾಗುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ, ಸಲಕರಣೆ-ಸವಲತ್ತುಗಳ ವಿತರಣೆಗೆ ಸಿದ್ಧವಿರುವ ಬಗ್ಗೆ ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಪೂರ್ಣಕುಂಭ ಕಳಶ ಹಾಗೂ ವಿವಿಧ ಕಲಾತಂಡಗಳ ಪ್ರದರ್ಶನದೊಂದಿಗೆ ಗಣ್ಯರನ್ನು ಸ್ವಾಗತಿಸಬೇಕು. ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನ ಪ್ರಾಶನ ಮಾಡಲು ವ್ಯವಸ್ಥೆ ಮಾಡಬೇಕು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಸಂಬAಧಿಸಿದವರಿಗೆ ವಿತರಿಸಬೇಕು. ವಿವಿಧ ಇಲಾಖೆಗಳು ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಯುವಂತೆ ಮಳಿಗೆ ತೆರೆದು ಮಾಹಿತಿ ನೀಡಬೇಕು. ಕಾರ್ಯಕ್ರಮಕ್ಕೆ ಫಲಾನುಭವಿಗಳು ಸೇರಿದಂತೆ ೨,೦೦೦ ಜನ ಸೇರುವ ನಿರೀಕ್ಷೆಯಿದ್ದು, ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಈಶ್ವರಪ್ಪ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
(Visited 1 times, 1 visits today)





