ತುಮಕೂರು: ತಾಲ್ಲೂಕಿನ ಊರ್ಡಿಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿಂದು ಜರುಗಿದ ವಿಶೇಷ ಗ್ರಾಮಸಭೆಯಲ್ಲಿ ಸರ್ಕಾರಿ ವಸತಿ ಆಶ್ರಯ ಯೋಜನೆಯಡಿ ನಿವೇಶನ ರಹಿತ ೯೩ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಸರ್ಕಾರದ ವಸತಿ ಸೌಲಭ್ಯ ತಲುಪಿಸುವ ಉದ್ದೇಶದಿಂದ ಅರ್ಜಿಗಳ ಪರಿಶೀಲನೆ ಮತ್ತು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಈ ವಿಶೇಷ ಸಭೆಯನ್ನು ಏರ್ಪಡಿಸಲಾಗಿತ್ತು.
ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾAಶದ ಮೂಲಕ ೨೯೬ ಹಾಗೂ ಭೌತಿಕವಾಗಿ ೬೩ ಅರ್ಜಿಗಳು ಸ್ವೀಕೃತಗೊಂಡಿದ್ದು, ಒಟ್ಟು ೩೫೯ ಅರ್ಜಿಗಳನ್ನು ಗ್ರಾಮಸಭೆಯಲ್ಲಿ ಓದಿ ತಿಳಿಸಲಾಯಿತು. ಈ ಪೈಕಿ ೯೩ ಅರ್ಜಿಗಳನ್ನು ಅರ್ಹವೆಂದು ಗುರುತಿಸಲಾಯಿತು. ಇನ್ನು ೩೨ ಅರ್ಜಿಗಳ ಅರ್ಹತೆಯನ್ನು ಮತ್ತಷ್ಟು ಪರಿಶೀಲಿಸಲು ನಿರ್ಧರಿಸಲಾಯಿತು. ಉಳಿದ ಅರ್ಜಿಗಳನ್ನು ಅನರ್ಹವೆಂದು ಪರಿಗಣಿಸುವ ಕುರಿತು ವಿಶೇಷ ಗ್ರಾಮಸಭೆಯಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು.
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಪರಮೇಶ್ವರ ಎಚ್.ಕೆ. ಅಧ್ಯಕ್ಷತೆ ಹಾಗೂ ಗ್ರಾಮಸಭೆಯ ನೋಡಲ್ ಅಧಿಕಾರಿ ಹಾಗೂ ಶಿಕ್ಷಣಾಧಿಕಾರಿ ಎ.ಟಿ. ರಂಗದಾಸಪ್ಪ ಮಾರ್ಗದರ್ಶನದಲ್ಲಿ ಈ ಸಭೆ ಜರುಗಿತು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ(ವಸತಿ) ನಾರಾಯಣಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆಶ್ರಯ ನಿವೇಶನ ಯೋಜನೆಯ ತಾಲ್ಲೂಕು ನೋಡಲ್ ಅಧಿಕಾರಿ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷಿö್ಮÃನಾರಾಯಣ ಸ್ವಾಮಿ ಅವರ ಉಪಸ್ಥಿತಿಯಲ್ಲಿ ನಿವೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪರಿಶೀಲಿಸಲಾಯಿತು.
ಸಭೆಯಲ್ಲಿ ಅರ್ಜಿದಾರರ ಅರ್ಹತೆ, ಕುಟುಂಬದ ವಸತಿ ಪರಿಸ್ಥಿತಿ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ಫಲಾನುಭವಿಗಳ ಆಯ್ಕೆ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಪ್ರಭಾ, ಆರಕ್ಷಕ ಉಪ ನಿರೀಕ್ಷಕರಾದ ಭಾಗ್ಯಲಕ್ಷ್ಮಿ ಟಿಎಲ್, ಟಿ.ಎನ್.ಓ. ನರೇಂದ್ರ, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
(Visited 1 times, 1 visits today)





