ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ಗಳಿಗೆ ಪಾಲಿಕೆ ಆಯುಕ್ತೆ ಬಿ. ಶುಭಾ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕ್ಯಾಂಟೀನ್ನ ಸ್ವಚ್ಛತೆ, ಆಹಾರದ ಗುಣಮಟ್ಟ, ನಿಗದಿತ ಮೆನು ಪ್ರಕಾರ ಆಹಾರ ವಿತರಣೆ ಹಾಗೂ ಆಹಾರ ತಯಾರಿಸುವ ಸ್ಥಳದ ಸ್ವಚ್ಛತೆಯನ್ನು ಖುದ್ದಾಗಿ ಪರಿಶೀಲಿಸಿದರು. ಅಲ್ಲದೆ, ಆಯುಕ್ತರು ಹಾಗೂ ಆರೋಗ್ಯ ಶಾಖೆಯ ಅಧಿಕಾರಿಗಳು ಕ್ಯಾಂಟೀನ್ನಲ್ಲಿ ಊಟ ಸವಿಯುವ ಮೂಲಕ ಆಹಾರದ ಗುಣಮಟ್ಟವನ್ನು ಪರೀಕ್ಷಿಸಿದರು.
ಬಳಿಕ ಮಾತನಾಡಿದ ಆಯುಕ್ತೆ ಬಿ. ಶುಭಾ, ಐದಾರು ತಿಂಗಳ ಹಿಂದೆ ಕ್ಯಾಂಟೀನ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಿಗದಿತ ಮೆನು ಪ್ರಕಾರ ಆಹಾರ ತಯಾರಿಸುತ್ತಿರಲಿಲ್ಲ ಹಾಗೂ ಮೆನು ಪಟ್ಟಿಯೂ ಇರಲಿಲ್ಲ. ಆದರೆ, ಇದೀಗ ಮೆನು ಪ್ರಕಾರ ಆಹಾರ ತಯಾರಿಸಲಾಗುತ್ತಿದೆ. ಈ ಹಿಂದೆ ಇದ್ದ ಗುತ್ತಿಗೆದಾರರನ್ನು ಬದಲಿಸಿ ಹೊಸ ಗುತ್ತಿಗೆದಾರರಿಗೆ ಜವಾಬ್ದಾರಿ ನೀಡಲಾಗಿದೆ. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆಹಾರ ಹಾಗೂ ಸಮರ್ಪಕ ಸೇವೆ ಒದಗಿಸುವಂತೆ ಸಂಬAಧಪಟ್ಟ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇತ್ತೀಚೆಗೆ ನಡೆದ ಕೆಪಿಎಸ್ಸಿ ಹಾಗೂ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗಲು ತುಮಕೂರಿಗೆ ಆಗಮಿಸಿದ್ದ ಸಾಕಷ್ಟು ಅಭ್ಯರ್ಥಿಗಳು ಇಂದಿರಾ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಊಟ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ಗಳಲ್ಲಿ ಕಾಫಿ ಮತ್ತು ಟೀ ವಿತರಣೆ ಮಾಡುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು…
ಈ ಸಂದರ್ಭದಲ್ಲಿ ಪರಿಸರ ಅಭಿಯಂತರರಾದ ನಿಖಿತಾ ಹಾಗೂ ಆರೋಗ್ಯ ನಿರೀಕ್ಷಕರಾದ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.
(Visited 1 times, 1 visits today)





