BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಫೆ.16, 17ರಂದು ತುಮಕೂರಿನಲ್ಲಿ ಉದ್ಯೋಗ ಮೇಳ
Trending

ಫೆ.16, 17ರಂದು ತುಮಕೂರಿನಲ್ಲಿ ಉದ್ಯೋಗ ಮೇಳ

By News Desk BenkiyabaleUpdated:February 04, 2019 4:38 pm

 ತುಮಕೂರು:

      ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಫೆಬ್ರವರಿ 16, 17ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿರುವ ಉದ್ಯೋಗಮೇಳದ ಬಗ್ಗೆ ಎರಡೂ ಜಿಲ್ಲೆಗಳ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಟಾಂ-ಟಾಂ ಮೂಲಕ ಜನರಿಗೆ ಮಾಹಿತಿ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮೇಳದಲ್ಲಿ 18 ರಿಂದ 35 ವರ್ಷದೊಳಗಿನ 7ನೇ ತರಗತಿ ಉತ್ತೀರ್ಣ, 10ನೇ ತರಗತಿ ಉತ್ತೀರ್ಣ/ಅನುತ್ತೀರ್ಣ, ಪಿ.ಯು.ಸಿ., ಯಾವುದೇ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿದ ಪುರುಷ/ ಮಹಿಳಾ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಹೊಂದಬಹುದಾಗಿದೆ ಎಂದು ತಿಳಿಸಿದ ಅವರು ಉದ್ಯೋಗ ಮೇಳದ ಬಗ್ಗೆ ಸ್ಥಳೀಯ ಸಂಸ್ಥೆಗಳು ಜನರಲ್ಲಿ ಅರಿವು ಮೂಡಿಸುವ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು.

      ಮೇಳದಲ್ಲಿ ಐಟಿಬಿಟಿ, ಆಟೋಮೊಬೈಲ್, ಮೆಕ್ಯಾನಿಕಲ್, ಕನ್ಸ್ಟ್ರಕ್ಷನ್ ಮಾರ್ಕೆಟಿಂಗ್ ಸೇಲ್ಸ್ ಅಂಡ್ ರೀಟೇಲ್, ಟೆಲಿಕಾಂ, ಬಿಪಿಓ, ಟೆಕ್ಸ್‍ಟೈಲ್ಸ್, ಬ್ಯಾಂಕಿಂಗ್, ಫೈನಾನ್ಸ್, ಇನ್ಶೂರೆನ್ಸ್, ಹಾಸ್ಪಿಟಲ್, ಫಾರ್ಮಸಿಟಿಕಲ್, ಹೆಲ್ತ್‍ಕೇರ್, ಮ್ಯಾನುಫ್ಯಾಕ್ಚರಿಂಗ್, ಟ್ರಾನ್ಸ್‍ಪೋರ್ಟ್, ಸರ್ವೀಸಸ್, ಆಹಾರ ಸಂಸ್ಕರಣೆ, ಹೋಟೆಲ್ ನಿರ್ವಹಣೆ, ಗಾರ್ಮೆಂಟ್ಸ್, ಸೆಕ್ಯೂರಿಟಿ ಸೇರಿದಂತೆ ವಿವಿಧ ವಿಭಾಗಗಳ 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತರು ಎಲ್ಲಾ ಮೂಲ ದಾಖಲಾತಿಗಳು, 10 ಸೆಟ್ ಸ್ವ ವಿವರ ಹಾಗೂ ಭಾವಚಿತ್ರಗಳನ್ನು ತಮ್ಮೊಂದಿಗೆ ತರಬೇಕು ಎಂದು ಹೇಳಿದರು.

      ಉದ್ಯೋಗಾರ್ಥಿಗಳಿಗಾಗಿ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಿಗಧಿತ ದಿನಾಂಕಗಳಂದು ಈಗಾಗಲೇ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ತಮ್ಮ ಹೆಸರನ್ನು ಜಾಲತಾಣ  http://tumkurandchitradurgajobfair ದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

      ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಂದ ಆಗಮಿಸುವ ಆಕಾಂಕ್ಷಿಗಳಿಗೆ ಊಟ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕಲ್ಲದೆ, ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಗುಣಮಟ್ಟದ ಬಗ್ಗೆ ತಪ್ಪದೇ ಪರಿಶೀಲಿಸಬೇಕು. ಬಸ್‍ನಿಲ್ದಾಣ, ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಮೇಳದ ಬಗ್ಗೆ ಹೋರ್ಡಿಂಗ್ಸ್‍ಗಳನ್ನು ಅಳವಡಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ಈ ಸಂದರ್ಭದಲ್ಲಿ ತುಮಕೂರು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಚಿತ್ರದುರ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

(Visited 405 times, 1 visits today)
Previous Articleಲಿಂ.ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡಲು ಸಂಸದರ ಆಗ್ರಹ
Next Article ಇಂದಿನಿಂದ ಮತದಾರರ ಸಹಾಯವಾಣಿ-1950 ಕಾರ್ಯಾರಂಭ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.