BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
  • ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
  • ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
  • ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
  • ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ನೀಡಲು ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ತುಮಕೂರು ಜಿಲ್ಲಾ ಸುದ್ಧಿಗಳು

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ನೀಡಲು ಆಗ್ರಹಿಸಿ ಸಿಐಟಿಯು ಪ್ರತಿಭಟನೆ

By News Desk BenkiyabaleUpdated:February 20, 2019 5:09 pm

ತುಮಕೂರು:

      ಅಸಂಘಟಿತ ಕಾರ್ಮಿಕರಾದ ಮನೆಗೆಲಸಗಾರರು, ಹಮಾಲಿಗಳು, ಮೆಕ್ಯಾನಿಕ್‍ಗಳು, ಕ್ಷೌರಿಕರು, ಚಿಂದಿ ಆಯುವವರು, ಬೀದಿಬದಿ ವ್ಯಾಪಾರಿಗಳು, ಟೈಲರ್‍ಗಳು, ಚಿನ್ನಬೆಳ್ಳಿ ಕೆಲಸಗಾರರು ಪುರಿಭಟ್ಟಿ ಕಾರ್ಮಿಕರಿಗೆ ಸ್ಮಾರ್ಟ್‍ಕಾರ್ಡ್ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಸಂಘಟಿತ ಕಾರ್ಮಿಕರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.

      ತುಮಕೂರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ವೃತ್ತದಲ್ಲಿ ಸಮಾವೇಶಗೊಂಡ ಅಸಂಘಟಿತ ವಲಯದ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಕಾರ್ಮಿಕ ಅಧಿಕಾರಿಗಳ ಮೂಲಕ ಸಚಿವ ವೆಂಕಟರಮಣಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿಯಡಿ ಅರ್ಜಿಗಳು ಸಲ್ಲಿಸಿ ಆರು ತಿಂಗಳುಗಳು ಕಳೆದಿದ್ದರೂ ಇದುವರೆಗೂ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಿಲ್ಲ. ಇದರಿಂದ ಕಾರ್ಮಿಕರಿಗೆ ಗೊಂದಲ ಉಂಟಾಗಿದೆ. ಕೂಡಲೇ ಸ್ಮಾರ್ಟ್‍ಕಾರ್ಡ್‍ಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

      ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಭಾಗವಾಗಿ ಉಚಿತ ಚಿಕಿತ್ಸಾ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ಸಹಾಯ, ಸ್ವಯಂ ಉದ್ಯೋಗಿಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯಗಳಿಗೆ ಯೋಜನೆಯನ್ನು ರೂಪಿಸಬೇಕು ಎಂದರು.
ಹಮಾಲಿ ಕಾರ್ಮಿಕ ಸಂಘಟನೆಯ ಮುಖಂಡ ಗಂಗಾಧರ್ ಮಾತನಾಡಿ, ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಸಂಬಂಧ ಸರ್ಕಾರ ಜಾಗವನ್ನು ಗುರುತಿಸಿದ್ದು ಸರಿಯಷ್ಟೇ. ಅವರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

      ಮನೆಗೆಲಸಗಾರರ ಸಂಘದ ಮುಖಂಡರಾದ ಮಂಜುಳ ಮಾತನಾಡಿ ಅಸಂಘಟಿತ ವಲಯದ ಎಲ್ಲಾ ಕಾರ್ಮಿಕರಿಗೆ ಸಾಮೂಹಿಕ ಉಚಿತ ವಸತಿ ಯೋಜನೆಯನ್ನು ರೂಪಿಸಬೇಕು. ಸೇವಾಭದ್ರತೆ ಮತ್ತು ಸಾಮಾಜಿಕ ಭದ್ರತೆಯನ್ನು ನೀಡಬೇಕು. ಒಂಟಿ ಮಹಿಳೆಯರು, ವಿಧವೆಯರು ಕುಟುಂಬ ಜವಾಬ್ದಾರಿ ಹೊತ್ತಿದ್ದು ಅವರು ಕುಟುಂಬ ನಿರ್ವಹಣೆಗೆ ಮನೆಗೆಲಸ ಮಾಡಿಕೊಂಡಿದ್ದಾರೆ. ಅವರ ರಕ್ಷಣೆ ಸರ್ಕಾರ ಮುಂದೆ ಬರಬೇಕು ಎಂದು ಮನವಿ ಮಾಡಿದರು.

      ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಮಾತನಾಡಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿಯನ್ನೊಳಗೊಂಡ ಭವಿಷ್ಯನಿಧಿ ಯೋಜನೆಯನ್ನು ರೂಪಿಸಬೇಕು. ಅಸಂಘಟಿತ ಕಾರ್ಮಿಕರ ತ್ರಿಪಕ್ಷೀಯ ಜಿಲ್ಲಾ ಮಟ್ಟದ ಸಮಿತಿಗಳಿಗೆ ಸಮಪ್ರಮಾಣದ ಕಾರ್ಮಿಕ ಪ್ರಾತಿನಿಧ್ಯವನ್ನು ನೀಡುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

      ಕಟ್ಟಡ ಕಾರ್ಮಿಕ ಸಂಘಟನೆಯ ಮುಖಂಡ ಬಿ.ಉಮೇಶ್ ಮಾತನಾಡಿ, ಕಚೇರಿಗಳಲ್ಲಿ ಹೆಚ್ಚಿನ ಸಿಬ್ಬಂದಿ ಇಲ್ಲ. ಹೀಗಾಗಿ ಸಿಬ್ಬಂದಿಯನ್ನು ನೇಮಕ ಮಾಡಿ ಅಸಂಘಟಿತ ಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕರಿಗೆ ಸೂಕ್ತ ಸೌಲಭ್ಯವನ್ನು ವಿತರಿಸಬೇಕಿದೆ ಎಂದು ಹೇಳಿದರು. ಸರ್ಕಾರ ಒಂದು ಕಡೆ ಸಕಾಲ ಯೋಜನೆಯಡಿ ಒಂದು ತಿಂಗಳೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ ಹೇಳುತ್ತಿದ್ದರೂ ಅದು ಆಗುತ್ತಿಲ್ಲ. ಈ ಸಂಬಂಧ ಜಿಲ್ಲಾಡಳಿತ ಮತ್ತು ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿದರು.

      ಕೊಳಗೇರಿ ಹಿತರಕ್ಷಣಾ ಸಮಿತಿ ಮುಖಂಡ ಶೆಟ್ಟಾಳಯ್ಯ ಮಾತನಾಡಿ, ಮನೆಗೆಲಸಗಾರರ ಸೇವಾ ನಿಯಮಾವಳಿಗಳನ್ನು ಒಳಗೊಂಡಂತಹ ಶಾಸನವನ್ನು ಕೇಂದ್ರ ಮಟ್ಟದಲ್ಲಿ ರೂಪಿಸಲು ಕರ್ನಾಟಕ ಸರ್ಕಾರ ಒತ್ತಾಯಿಸಬೇಕು. ಅಸಂಘಟಿತ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಲು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ತ್ರಿಪಕ್ಷೀಯ ಸಭೆಯನ್ನು ಕಡ್ಡಾಯವಾಗಿ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಬೇಕು ಎಂದರು.

      ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಗೋವಿಂದರಾಜು, ತಿಮ್ಮೇಗೌಡ, ಟೈಲರ್ ಸಂಘಟನೆಯ ಮುಖಂಡ ನಾಗರಾಜು ಮಾತನಾಡಿದರು. ಪ್ರತಿಭಟನಾ ನೇತೃತ್ವನ್ನು ಚಿನ್ನಬೆಳ್ಳಿ ಕೆಲಸಗಾರರ ಸಂಘದ ಸುರೇಶ್, ಕಾರ್ಮಿಕ ಸಂಘಟನೆಯ ಮುಖಂಡರಾದ ಪಲ್ಲವಿ, ಮನೆಗೆಲಸಗಾರರ ಸಂಘದ ಗಿರಿಜ, ಮಂಗಳಮ್ಮ ನೂರ್ ಜಾನ್, ಗೀತಾ, ವಸಂತ ಮೊದಲಾದವರು ವಹಿಸಿದ್ದರು.

 

(Visited 30 times, 1 visits today)
Previous Articleರಾಗಿ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ
Next Article ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ತತ್ವ ಅನುಸರಿಸಲು ಕರೆ
News Desk Benkiyabale

Related Posts

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm news
ತಾಜಾ ಸುದ್ಧಿಗಳು
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm
news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm
news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
Our Youtube Channel
Our Picks

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

By News Desk BenkiyabaleSeptember 03, 2026 5:43 pm

ತುಮಕೂರು: ತಾಲ್ಲೂಕಿನ ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿಬಿ ಜಿ ರಾಮ್ ಜಿ…

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.