BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
  • ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ
  • ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ
  • ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ
  • ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ
  • ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
  • ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರ ಸುಭದ್ರವಾಗಿದೆ – ಡಿಸಿಎಂ ಸ್ಪಷ್ಟನೆ
Trending

ಸರ್ಕಾರ ಸುಭದ್ರವಾಗಿದೆ – ಡಿಸಿಎಂ ಸ್ಪಷ್ಟನೆ

By News Desk BenkiyabaleUpdated:July 02, 2019 7:04 pm

ತುಮಕೂರು:

      ಶಾಸಕದ್ವಯರಾದ ಆನಂದ್‍ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸತ್ಯವೇ ಆಗಿದ್ದರೆ, ಸದ್ಯದಲ್ಲಿರುವ ಸಂಖ್ಯಾಬಲದಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸರ್ಕಾರ ಸುಭದ್ರವಾಗಿದ್ದು, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಅವರು ಸ್ಪಷ್ಟಪಡಿಸಿದರು.

      ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬೆಳಿಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ ಅವರು ಆನಂದ್‍ಸಿಂಗ್ ಹಾಗೂ ಜಾರಕಿಹೊಳಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಸುದ್ದಿ ಇದೆ. ಆದರೆ ಇವರಿಬ್ಬರ ರಾಜೀನಾಮೆಯನ್ನು ಸ್ಪೀಕರ್ ಅವರು ಇನ್ನೂ ಸ್ಪಷ್ಟಪಡಿಸಿಲ್ಲ. ಒಂದು ವೇಳೆ ಅವರು ರಾಜೀನಾಮೆ ನೀಡಿರುವುದು ಸತ್ಯವಾಗಿದ್ದರೆ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆಂಬ ಬಗ್ಗೆ ತಮಗೆ ಮಾಹಿತಿಯಿಲ್ಲ. ಇದೇ ಜುಲೈ 12 ರಿಂದ ಅಧಿವೇಶನ ನಡೆಸಲು ಈಗಾಗಲೇ ತೀರ್ಮಾನಿಸಿ ಘೋಷಿಸಲಾಗಿದ್ದು, ರಾಜ್ಯಪಾಲರೂ ಸಹ ಈ ನಿರ್ಣಯಕ್ಕೆ ಅಂಕಿತ ಹಾಕಿರುವುದರಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.

      ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡುವ ವಿಷಯಕ್ಕೆ ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿದ್ದಾರಾ? ಎಂದು ಪತ್ರಕರ್ತರೊಬ್ಬರ ಪ್ರಶ್ನೆಗೆ ಸ್ಪಂದಿಸಿದ ಪರಮೇಶ್ವರ್ ಅವರು ಜಿಂದಾಲ್‍ಗೆ ಪರಭಾರೆ ಮಾಡಲಾಗಿರುವ ಒಟ್ಟು 3666 ಎಕರೆ ಜಮೀನನ್ನು ಯಾವ ಆಧಾರದ ಮೇಲೆ ನೀಡಲಾಗಿದೆ ಎನ್ನುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ತಿಳಿಸಿದರು.

      ತುಮಕೂರು ನಗರದಲ್ಲಿ ಬರುವ 20 ದಿನಗಳ ನಂತರ ನೀರಿನ ಸಮಸ್ಯೆ ತಲೆದೋರಲಿದ್ದು, ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿದ ಮಾಧ್ಯಮದವರ ಮಾತಿಗೆ ಉತ್ತರಿಸಿದ ಅವರು ಮಳೆಯೇ ನೀರಿನ ಸಮಸ್ಯೆಗೆ ಮೂಲ ಪರಿಹಾರ. ಮಳೆ ಬಾರದೆ ಕೆಆರ್‍ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗದಿದ್ದರೆ ಜುಲೈ ಮಾಹೆಯ ಅಂತ್ಯಕ್ಕೆ ಬೆಂಗಳೂರು ನಗರಕ್ಕೂ ನೀರಿನ ಬರ ಅಂಟಿಕೊಳ್ಳಲಿದೆ.

      ಅದೇ ರೀತಿ ಹೇಮಾವತಿ ನೀರು ಬಾರದಿದ್ದರೆ ತುಮಕೂರಿನ ಜನರಿಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆಯಿದೆ. ಮಳೆರಾಯನ ಅನುಗ್ರಹ ನಮಗೆಲ್ಲ ಬೇಕು.

      ಜುಲೈ ಮಾಹೆಯಲ್ಲಿ ಮಳೆ ಬಾರದಿದ್ದರೆ ಮೋಡಬಿತ್ತನೆ ಮಾಡಲು ಕ್ಯಾಬಿನೆಟ್‍ನಲ್ಲಿ ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನಂತರ ಗುಬ್ಬಿಗೆ ತೆರಳಿ ನೂತನ ಉಪ ನೋಂದಣಾಧಿಕಾರಿಗಳ ಕಚೇರಿಗೆ ಗುದ್ದಲಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಬಸ್ ನಿಲ್ದಾಣದ ಬಳಿ ಹೊಸದಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಉದ್ಘಾಟನೆ ನೆರವೇರಿಸಿದರು. ಮಾನ್ಯ ಉಪಮುಖ್ಯಮಂತ್ರಿಗಳು ಇಂದಿರಾ ಕ್ಯಾಂಟೀನ್‍ನಲ್ಲಿ ಉಪ್ಪಿಟ್ಟು, ಕೇಸರಿ ಬಾತ್ ಸವಿಯನ್ನು ಸವಿದರು.

      ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕಷ್ಣ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 7 times, 1 visits today)
Previous Articleತುಮಕೂರು : 2.5 ಕೆ.ಜಿ.ಗಾಂಜಾ ವಶ!!
Next Article ಕಾರು ಡಿಕ್ಕಿ : ಚಿರತೆಗೆ ಗಂಭೀರ ಗಾಯ!
News Desk Benkiyabale

Related Posts

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm news

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm news

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm news
ತಾಜಾ ಸುದ್ಧಿಗಳು
news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm
news

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm
news

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm
news

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm
news

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm
news

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm
Our Youtube Channel
Our Picks

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

By News Desk BenkiyabaleJuly 27, 2026 3:14 pm

ತುಮಕೂರು: ಮಲ್ಲ@ವೀರಣ್ಣ (೩೮) ವರ್ಷ ಇತನನ್ನ ಬೀಕರವಾಗಿ ಹತ್ಯೆಮಾಡಲಾಗಿದ್ದು, ಮತ್ತೆ ತುಮಕೂರಿನಲ್ಲಿ ನೆತ್ತರು ಹರಿದಿದೆ, ಇದನ್ನು ಗಮನಿಸಿದರೆ ತುಮಕೂರು…

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.