BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೇಮಾವತಿ ನಾಲೆ ನೀರನ್ನು ಕಡೆಯ ಭಾಗದ ಕೆರೆಗಳ ಭರ್ತಿ ಮಾಡಲು ಸಂಸದರ ಸೂಚನೆ
Trending

ಹೇಮಾವತಿ ನಾಲೆ ನೀರನ್ನು ಕಡೆಯ ಭಾಗದ ಕೆರೆಗಳ ಭರ್ತಿ ಮಾಡಲು ಸಂಸದರ ಸೂಚನೆ

By News Desk BenkiyabaleUpdated:September 21, 2019 5:58 pm

ತುಮಕೂರು :

       ಹೇಮಾವತಿ ನಾಲೆಯಲ್ಲಿ ಹರಿಯುವ ನೀರನ್ನು ನಾಲೆಯ ಕೊನೆಯ ಭಾಗದ ಪ್ರದೇಶದಲ್ಲಿರುವ ಕೆರೆಗಳನ್ನು ಭರ್ತಿ ಮಾಡಲು ಮೊದಲ ಆದ್ಯತೆ ನೀಡಬೇಕೆಂದು ಸಂಸದ ಜಿ.ಎಸ್.ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ನಡೆದ ದಿಶಾ (District Development Co-ordination and monitoring Committee) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗೊರೂರು ಜಲಾಶಯ ಪ್ರದೇಶದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಹೇಮಾವತಿ ನಾಲೆಗೆ ನೀರು ಹರಿಸಲಾಗುತ್ತಿದೆ. ನಾಲೆಯ ನೀರನ್ನು ನಾಲೆಗೆ ಸಂಪರ್ಕವಿರುವ ಎಲ್ಲಾ ಕೆರೆಗಳನ್ನು ತುಂಬಿಸಿಕೊಂಡರೆ ಮುಂದಿನ ಬೇಸಿಗೆಗೆ ನೀರಿನ ಬವಣೆ ತಲೆದೋರುವುದಿಲ್ಲ. ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಜಿಲ್ಲೆಯ ಜನತೆ ತತ್ತರಿಸಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಕೆರೆಗಳನ್ನು ತುಂಬಿಸಬೇಕೆಂದು ಹೇಮಾವತಿ ನಾಲಾ ವಲಯದ ಇಂಜಿನಿಯರ್ ಮೋಹನ್ ಅವರಿಗೆ ನಿರ್ದೇಶನ ನೀಡಿದರು.

      ನಾಲೆಗೆ ನೀರಿನ ಮಾಪಕವನ್ನು ಅಳವಡಿಸಿ ಪ್ರತೀದಿನ ಹರಿಯುವ ನೀರಿನ ಪ್ರಮಾಣದ ಅಂಕಿ ಅಂಶವನ್ನು ದಾಖಲಿಸಬೇಕು. ಜಲಾಶಯದಲ್ಲಿ ಸಾಕಷ್ಟು ನೀರಿನ ಲಭ್ಯತೆ ಇರುವುದರಿಂದ ಡಿಸೆಂಬರ್‍ವರೆಗೂ ನೀರು ಹರಿಯುವ ನಿರೀಕ್ಷೆಯಿದೆ. ಶಾಂತ ರೀತಿಯಿಂದ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ನೀರು ಹರಿಸಲು ಅವಕಾಶ ನೀಡಬೇಕೆಂದು ತಿಳಿಸಿದರು.

      ಹೇಮಾವತಿ ಇಂಜಿನಿಯರ್ ಮೋಹನ್ ಮಾತನಾಡಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಿರುವ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ವೇಳಾಪಟ್ಟಿ ನಿಗಧಿಪಡಿಸಿದ್ದು, ವೇಳಾಪಟ್ಟಿಯನ್ವಯ ನೀರನ್ನು ನಾಲೆಗೆ ಬಿಡಲಾಗುತ್ತಿದೆ. ಕಳೆದ ಶನಿವಾರದವರೆಗೆ 4.6 ಟಿಎಂಸಿ ನೀರನ್ನು ಹರಿಯ ಬಿಡಲಾಗಿದೆ ಎಂದು ಮಾಹಿತಿ ನೀಡಿದರು.

       ಇದಕ್ಕೂ ಮುನ್ನ ಮಾತನಾಡಿದ ಸಂಸದರು ಕೇಂದ್ರ ಸರ್ಕಾರದಿಂದ ನೀಡಿರುವ ಇಲಾಖಾವಾರು ಅನುದಾನ ಸದ್ವಿನಿಯೋಗವಾಗಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲು ಈ ಸಭೆ ಕರೆಯಲಾಗಿದ್ದು, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆಯನ್ನು ನಡೆಸಬೇಕೆಂದು ಜಿಲ್ಲಾ ಪಂಚಾಯತಿ ಸಿಇಓ ಶುಭಾ ಕಲ್ಯಾಣ್‍ಗೆ ಸೂಚನೆ ನೀಡಿದರು. ಕಳೆದ 5 ವರ್ಷದ ಹಿಂದೆ ಪ್ರಧಾನಮಂತ್ರಿ ಮೋದಿ ಅವರ ನಿರ್ದೇಶನದಂತೆ ಈ ಸಮಿತಿಯನ್ನು ರಚನೆ ಮಾಡಲಾಗಿದ್ದು, ಹಿಂದಿನ ದಿಶಾ ಸಮಿತಿಯ ಅವಧಿ ಪೂರ್ಣಗೊಂಡಿರುವುದರಿಂದ ಈಗ ಹೊಸ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

      ಈ ಹೊಸ ದಿಶಾ ಸಮಿತಿಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರು, ಪಾಲಿಕೆ ಮೇಯರ್, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಗ್ರಾಮಪಂಚಾಯತಿಗಳ ಆಯ್ದ ಐವರು ಅಧ್ಯಕ್ಷರು, ಎಲ್ಲಾ ತಾಲ್ಲೂಕು ಪಂಚಾಯತಿ ಅಧ್ಯಕ್ಷರುಗಳು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜಯಪ್ರಕಾಶ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಸಿಐಟಿಯ ನಿರ್ದೇಶಕ ಡಾ: ಡಿ.ಎಸ್.ಸುರೇಶ್, ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ, ಲೀಡ್ ಬ್ಯಾಂಕ್ ಮ್ಯಾನೇಜರ್, ಅಂಚೆ ಅಧೀಕ್ಷಕರು ಸಮಿತಿ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದ ಅವರು ವಿವಿಧ ಕ್ಷೇತ್ರಗಳ ಪ್ರತಿನಿಧಿಗಳಾದ ಟಿ.ಆರ್.ರಘೋತ್ತಮ ರಾವ್, ಎನ್.ಎಸ್. ಜಯಕುಮಾರ್, ನಾಗೇಂದ್ರ ಪ್ರಸಾದ್, ಪ್ರೇಮಹೆಗಡೆ, ಕುಂದರನಹಳ್ಳಿ ರಮೇಶ್ ಅವರನ್ನು ಸಮಿತಿ ಸದಸ್ಯರನ್ನಾಗಿ ಸಂಸದರು ನಾಮನಿರ್ದೇಶನ ಮಾಡಿದರು. ಉಳಿದಂತೆ ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾ ಪಂಚಾಯತ್ ಸಿಇಓ ಶುಭಾಕಲ್ಯಾಣ್ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

       ಅಲ್ಲದೆ ದಿಶಾ ಸಮಿತಿಯ ಅಡಿಯಲ್ಲಿ ಬರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿಯೊಂದು ಯೋಜನೆಗಳ ಯಶಸ್ವಿ ಜಾರಿಗೆ ಅಧಿಕಾರಿಗಳು, ಪರಿಣಿತರು, ನಿವೃತ್ತ ಅಧಿಕಾರಿಗಳು, ರೈತರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ಮಾಧ್ಯಮ ಮತ್ತು ಸಂಘ ಸಂಸ್ಥೆಗಳ ಪಧಾದಿಕಾರಿಗಳನ್ನೊಳಗೊಂಡ ‘ವಿಷನ್ ಮತ್ತು ಪ್ರಷರ್ ಗ್ರೂಪ್’ ರಚಿಸಲು ಸಭೆ ಕರೆದು ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಬರುವ ಎಲ್ಲಾ ಹೋಬಳಿಗಳ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಪಿಡಿಓಗಳ ಸಹಿತ ಎಲ್ಲಾ ಹೋಬಳಿ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಹೋಬಳಿಮಟ್ಟದ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ದಿಶಾ ಉಪ ಸಮಿತಿಗಳನ್ನು ರಚಿಸಬೇಕೆಂದು ಸೂಚಿಸಿದರು.

       ಕೇಂದ್ರ ಸರ್ಕಾರದಿಂದ ಹೆಚ್ಚಿಗೆ ಅನುದಾನ ಪಡೆಯಲು ಮತ್ತು ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಾಲಿ ಮತ್ತು ಮಾಜಿ ಚುನಾಯಿತ ಜನ ಪ್ರತಿನಿಧಿಗಳನ್ನು ಸಮಿತಿಯಲ್ಲಿ ಸದಸ್ಯರನ್ನಾಗಿ ನೇಮಕ ಮಾಡಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸಿದ್ಧಪಡಿಸಲು ಉದ್ದೇಶಿಸಿರುವ ‘ವಿಷನ್ ತುಮಕೂರು -2025’ ಕುರಿತು ವ್ಯಾಪಕ ಜನ ಜಾಗೃತಿ ಕೈಗೊಳ್ಳಬೇಕು. ಇದರಿಂದ ಸ್ಥಳೀಯ ಸಂಸ್ಥೆಗಳ ಮಟ್ಟದ ಅಭಿವೃದ್ಧಿ ಯೋಜನೆಗಳ ಕಡೆ ವಿಶೇಷ ಗಮನಹರಿಸಲು ಅನೂಕೂಲವಾಗುತ್ತದೆ ಎಂದು ತಿಳಿಸಿದರು.

       ಮುಂದಿನ ದಿಶಾ ಸಭೆಯಲ್ಲಿ ಸಮಿತಿಯು ಪೂರ್ಣ ಪ್ರಮಾಣದಲ್ಲಿ ರಚನೆಯಾಗಿ ಸಂಬಂಧಿಸಿದ ಎಲ್ಲಾ ಸದಸ್ಯರು, ಅಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕೆಂದರಲ್ಲದೆ ಕೇಂದ್ರ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳ ಮೂಲಕ ಸುಮಾರು 41 ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳ ಎಲ್ಲಾ ಅನುಷ್ಠಾನಾಧಿಕಾರಿಗಳು ದಿಶಾ ಸಮಿತಿ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದ ಸಂಸದರು ವಿವಿಧ ಇಲಾಖಾಧಿಕಾರಿಗಳಿಂದ ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಮಾಹಿತಿ ಪಡೆದರು.

      ನಂತರ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್‍ಕುಮಾರ್ ಮಾತನಾಡಿ, ತುಮಕೂರು ನಗರವು ಕೇಂದ್ರದ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತದ ಅನುದಾನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈವರೆಗೂ ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಲಾಂಜ್, ಡಿಜಿಟಲ್ ಲೈಬ್ರರಿ, ಮಲ್ಟಿಡೈಮೆನ್ಷನಲ್ ಆಡಿಟೋರಿಯಂ, ಪೆರಿಫರಲ್ ರಿಂಗ್ ರಸ್ತೆ ನಿರ್ಮಾಣ, ಸ್ಮಾರ್ಟ್ ತರಗತಿ, ಸ್ಮಾರ್ಟ್ ರಸ್ತೆ, ಬಸ್ ಶೆಲ್ಟರ್, ಅಮಾನಿಕರೆ ಅಭಿವೃದ್ಧಿ, ಮತ್ತಿತರ ಕಾಮಗಾರಿಗಳನ್ನು ಕೈಗೊಂಡು ಕಾಮಗಾರಿಗಳು ಪ್ರಗತಿಯಲ್ಲಿವೆ. ಈವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ 112.46 ಕೋಟಿ ರೂ.ಗಳನ್ನು ವಿವಿಧ ಕಾಮಗಾರಿಗಳಿಗೆ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

      ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾತನಾಡಿ, ನಗರದಲ್ಲಿ ಕೇಂದ್ರದ ಅಮೃತ್ ಯೋಜನೆಯಡಿ ಒಳಚರಂಡಿ, ಮಳೆನೀರು ಚರಂಡಿ, ನೀರು ಪೂರೈಕೆ, ನಗರ ಸಾರಿಗೆ(ಮೋಟಾರು ರಹಿತ), ಹಸಿರು ವಲಯ ಹಾಗೂ ಉದ್ಯಾನವನ ಅಭಿವೃದ್ಧಿಗಾಗಿ 10.38 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಒಟ್ಟಾರೆ ನಿಗಧಿಯಾಗಿದ್ದ 32 ಕಾಮಗಾರಿಗಳ ಪೈಕಿ 20 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಉಳಿದಂತೆ 9 ಕಾಮಗಾರಿ ಪ್ರಗತಿಯಲ್ಲಿದ್ದು, 1 ಕಾಮಗಾರಿ ಟೆಂಡರು ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

      ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಇಫ್ತಿಕಾರ್ ಅಹಮದ್ ಸಭೆಗೆ ಮಾಹಿತಿ ನೀಡುತ್ತಾ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಗಾಗಿ ಜಿಲ್ಲೆಗೆ 6.08ಕೋಟಿ ರೂ. ಬಿಡುಗಡೆಯಾಗಿದ್ದು, ಈವರೆಗೂ 156 ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ 1470 ಶುದ್ಧ ಕುಡಿಯುವ ನೀರಿನ ಘಟಕ(ಆರ್.ಓ.ಪ್ಲಾಂಟ್)ಗಳನ್ನು ಸ್ಥಾಪಿಸಲಾಗಿದ್ದು, ಹೊಸದಾಗಿ 115 ಘಟಕಗಳನ್ನು ನಿರ್ಮಿಸುವ ಯೋಜನೆ ತಯಾರಿಸಲಾಗುತ್ತಿದೆ ಹಾಗೂ 1466 ಆರ್.ಓ ಘಟಕಗಳನ್ನು ಸ್ಥಾಪಿಸುವ ಕಾಮಗಾರಿ ಕಾರ್ಯಾರಂಭ ಮಾಡಲಾಗಿದ್ದು, ಈ ಪೈಕಿ 62 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲವೆಂದು ತಿಳಿಸಿದರು.

      ಗ್ರಾಮೀಣ ಜನರು ಕುಡಿಯುವ ನೀರಿನ ತೊಂದರೆ ಅನುಭವಿಸುವುದು ಈವರೆಗೂ ಕೊನೆಗೊಂಡಿಲ್ಲ. ಆರ್.ಓ. ಘಟಕ ಸ್ಥಾಪಿಸಿ 3 ತಿಂಗಳೊಳಗೆ ಕೆಟ್ಟುಹೋಗುತ್ತಿದೆ. ಘಟಕ ಸ್ಥಾಪಿಸುವ ಏಜೆನ್ಸಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರಲ್ಲದೆ ಜಿಲ್ಲೆಯಲ್ಲಿ ಕೊರೆಯಲಾದ 149 ಕೊಳವೆ ಬಾವಿಗಳಿಗೆ ಇದುವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸದಿರುವ ಬಗ್ಗೆ ಸ್ಪಷ್ಟೀಕರಣ ಕೇಳಿದಾಗ ಉತ್ತರಿಸಿದ ಬೆಸ್ಕಾಂ ಇಂಜಿನಿಯರ್ ಇದುವರೆಗೂ ಕೊರೆದ ಕೊಳವೆ ಬಾವಿಗಳ ವಿದ್ಯುತ್ ಸಂಪರ್ಕಕ್ಕೆ ಬೆಸ್ಕಾಂ ಸಂಸ್ಥೆಗೆ ನೋಂದಣಿಗೆ ಮನವಿ ಸಲ್ಲಿಸಿರುವುದಿಲ್ಲ. ನೋಂದಣಿ ಮಾಡಿಸಿದ ಕೂಡಲೇ ವಿದ್ಯುತ್ ಸಂಪರ್ಕಕ್ಕೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

       ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್ ಕುಮಾರ್ ಮಾತನಾಡಿ, ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ಸರ್ಕಾರದಿಂದ 11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದರೂ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯು ಕ್ರಮ ಕೈಗೊಂಡಿಲ್ಲ. ಕ್ರಿಯಾ ಯೋಜನೆ ಅನುಮೋದನೆ ದೊರೆಯದ ಕೊಳವೆ ಬಾವಿಗಳಿದ್ದರೆ ಅನುಮೋದನೆಗಾಗಿ ಕಾಯದೇ ಕೂಡಲೇ ಬೆಸ್ಕಾಂ ಸಂಸ್ಥೆಗೆ ವಿದ್ಯುದ್ದೀಕರಣಕ್ಕಾಗಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಿದರು.

       ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಪ್ರಗತಿಗೆ ಸಂಬಂಧಿಸಿದಂತೆ ಸಂಸದರು ಮಾಹಿತಿ ಕೇಳಿದಾಗ ಉತ್ತರಿಸಿದ ಜಿಲ್ಲಾಧಿಕಾರಿ ಹಾಗೂ ರೈಲ್ವೆ ಅಧಿಕಾರಿಗಳು ಈ ಯೋಜನೆಯನ್ನು ಜಿಲ್ಲೆಯ 1217.60 ಎಕರೆ ಪ್ರದೇಶದಲ್ಲಿ 102.60 ಕಿ.ಮೀ. ಉದ್ದದ ರೈಲ್ವೆ ಮಾರ್ಗವನ್ನು ನಿರ್ಮಿಸಲು ಅನುಷ್ಠಾನಗೊಳಿಸಲಾಗುತ್ತಿದೆ. ತುಮಕೂರು, ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕುಗಳ ಮೂಲಕ ಹಾದು ಹೋಗುವ ಈ ರೈಲು ಮಾರ್ಗದ ಕಾಮಗಾರಿಯು ಭೂಸ್ವಾಧೀನ ಸಮಸ್ಯೆಯಿಂದ ವಿಳಂಬವಾಗಿದೆ. ಈವರೆಗೂ ಯೋಜನಾನುಷ್ಠಾನಕ್ಕಾಗಿ 149 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಭೂಸ್ವಾಧೀನಕ್ಕೊಳಗಾದ ಜಮೀನಿನ ಮಾಲೀಕರಿಗೆ ಪರಿಹಾರ ನೀಡಲಾಗುತ್ತಿದೆ. ಅದೇ ರೀತಿ ತುಮಕೂರು-ದಾವಣಗೆರೆ, ತುಮಕೂರು-ಅರಸೀಕೆರೆ ದ್ವಿಪಥ ರೈಲ್ವೇ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

        ನಂತರ ಸಂಸದರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 4 ಪ್ಯಾಕೇಜ್‍ನಡಿ ಅಭಿವೃದ್ಧಿ ಕಾರ್ಯವನ್ನು ಅಕ್ಟೋಬರ್‍ನಲ್ಲಿ ಕೈಗೆತ್ತಿಕೊಳ್ಳುವ ಬಗ್ಗೆ ಸಂಬಂಧಿಸಿದ ಅಧಿಕಾರಿಯಿಂದ ಮಾಹಿತಿ ಪಡೆದರು.

      ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ತುಮಕೂರು ಹಾಗೂ ಶಿರಾ ತಾಲ್ಲೂಕಿನಲ್ಲಿ 1091.90 ಕಿ.ಮೀ. ಉದ್ದದ 194 ರಸ್ತೆಗಳನ್ನು ಅಭಿವೃದ್ಧಿಪಡಿಸಿ 24868.84 ರೂ.ಗಳನ್ನು ಖರ್ಚು ಮಾಡಲಾಗಿದ್ದು, ವಾರ್ಷಿಕ ನಿರ್ವಹಣೆಯಡಿ ಕಾಲಕಾಲಕ್ಕೆ ಮರು ಡಾಂಬರೀಕರಣಗೊಳಿಸಲಾಗುತ್ತಿದೆ ಎಂದು ಪಿಎಂಜಿಎಸ್‍ವೈ ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.

      ಗಣಿಬಾಧಿತ ಪ್ರದೇಶಗಳಾದ ತುಮಕೂರು, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ 13ಸಾವಿರ ಕೋಟಿ ರೂ. ಬಿಡುಗಡೆಯಾಗಿದ್ದು, ನಿಯಮಾವಳಿಯನ್ವಯ ಕ್ರಿಯಾ ಯೋಜನೆ ತಯಾರಿಸಿ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪದ್ಮಜ ಅವರಿಗೆ ಸಂಸದರು ಸೂಚಿಸಿದರು.

       ನಕಲಿ ಪಡಿತರ ಚೀಟಿಗಳ ವಿತರಣೆ ಬಗ್ಗೆ ಮಾಹಿತಿ ಒದಗಿಸಲು ಸಂಸದರು ಸೂಚಿಸಿದಾಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸಯ್ಯ ಮಾತನಾಡಿ, ಜಿಲ್ಲೆಯಲ್ಲಿ ಬಯೋ ಮೆಟ್ರಿಕ್ ಪದ್ಧತಿಯಿದ್ದು, ಇಲಾಖೆ ಸಂಪೂರ್ಣವಾಗಿ ಗಣಕೀಕರಣಗೊಂಡಿರುವುದರಿಂದ ನಕಲಿ ಪಡಿತರ ಚೀಟಿ ವಿತರಣೆಗೆ ಆಸ್ಪದವಿಲ್ಲ. ಎಲ್ಲಾ ಪಡಿತರ ಚೀಟಿಗಳನ್ನು ಆಧಾರ್ ಲಿಂಕ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕೇಂದ್ರದ ಉಜ್ವಲ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ಅಡುಗೆ ಅನಿಲ ಸಂಪರ್ಕ ಕಾಮಗಾರಿ ಪ್ರಗತಿಯಲ್ಲಿದ್ದು, ಈವರೆಗೆ 118161 ಬಿಪಿಎಲ್ ಕುಟುಂಬದ ಮನೆಗಳಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.

       ಖಜಾನೆ 1 ರಿಂದ ಖಜಾನೆ 2ಗೆ ಬದಲಾಗಿರುವುದರಿಂದ ಜಿಲ್ಲೆಯಲ್ಲಿ ವಿತರಿಸಲಾಗುತ್ತಿರುವ ವೃದ್ದಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನ, ಮತ್ತಿತರ ಪಿಂಚಣಿ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲು ವಿಳಂಬವಾಗುತ್ತಿದೆ. ಬರುವ ದಿನಗಳಲ್ಲಿ ಮನಿ ಆರ್ಡರ್ ಮೂಲಕ ವಿತರಣೆ ಮಾಡಲಾಗುತ್ತಿರುವ ಪಿಂಚಣಿ ಧನವನ್ನು ಆರ್‍ಟಿಜಿಎಸ್ ಮೂಲಕ ನೇರವಾಗಿ ಅವರ ಖಾತೆಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ಸಂಸದರ ಗಮನಕ್ಕೆ ತಂದರು.

       ಕೇಂದ್ರದ ಆಯುಷ್ಮಾನ್ ಆರೋಗ್ಯ ಭಾರತ್ ಯೋಜನೆಯಡಿ ಜಿಲ್ಲೆಯಲ್ಲಿರುವ 27ಲಕ್ಷ ಜನಸಂಖ್ಯೆಯ ಪೈಕಿ ಕೇವಲ 260000 ಫಲಾನುಭವಿಗಳಿಗೆ ಮಾತ್ರ ಹೆಲ್ತ್ ಕಾರ್ಡ್ ವಿತರಣೆಯಾಗಿದ್ದು, ತ್ವರಿತವಾಗಿ ಎಲ್ಲಾ ಫಲಾನುಭವಿಗಳಿಗೂ ವಿತರಿಸಲು ಕ್ರಮ ಕೈಗೊಳ್ಳಬೇಕು. ಹೆಲ್ತ್ ಕಾರ್ಡ್ ವಿತರಣೆಗೆ ನಿಗಧಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡಬಾರದೆಂದು ಡಿಹೆಚ್‍ಓ ಡಾ|| ಚಂದ್ರಿಕಾಗೆ ನಿರ್ದೇಶನ ನೀಡಿದರು.

        ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 9569 ರೈತರ ಅರ್ಜಿಗಳು ಬ್ಯಾಂಕಿನಿಂದ ಕಾಲಮಿತಿಯೊಳಗೆ ಸಲ್ಲಿಸದ ಕಾರಣ ತಿರಸ್ಕøತಿಗೊಂಡಿತ್ತು. ನಂತರ ಪರಿಶೀಲಿಸಿದಾಗ ಈ ಅರ್ಜಿಗಳ ಪೈಕಿ 7957 ಅರ್ಜಿ ವಿಮಾ ಪರಿಹಾರ ಪಡೆಯಲು ಅರ್ಹಗೊಂಡಿವೆ. ಆದರೆ ರೈತರಿಗೆ ವಿತರಿಸಬೇಕಾದ 6.81 ಕೋಟಿ ರೂ.ಗಳ ವಿಮಾ ಮೊತ್ತದ ಹಣವನ್ನು ಸಂಬಂಧಿಸಿದ ಬ್ಯಾಂಕುಗಳೇ ಪಾವತಿ ಮಾಡಬೇಕೆಂದು ಸರ್ಕಾರದ ಅಪರ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

       ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಮಾತನಾಡಿ, ಪಾವಗಡ ಹಾಗೂ ಶಿರಾ ತಾಲ್ಲೂಕಿನಲ್ಲಿರುವ ಸರ್ಕಾರಿ ಹಾಗೂ ಖಾಸಗಿ ನಿವೇಶನಗಳು, ನಿವೇಶನ ಸಹಿತ ಹಾಗೂ ರಹಿತ ಕುಟುಂಬಗಳು, ಸ್ಮಶಾನ ಭೂಮಿಗಳ ಬಗ್ಗೆ ಸಮೀಕ್ಷೆ ನಡೆಸಿ ಮಾಹಿತಿ ಒದಗಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

       ವಸಂತನರಸಾಪುರ ಹಾಗೂ ಶಿರಾ ಕೈಗಾರಿಕಾ ಪ್ರದೇಶದಲ್ಲಿ ಪರಿಶಿಷ್ಟ ಜಾತಿ/ಪಂಗಡದವರಿಗೆ ಶೇ. 22.5 ಪ್ರದೇಶವನ್ನು ಮೀಸಲಿಡಬೇಕು. ಈ ಬಗ್ಗೆ ಪತ್ರಿಕಾ ಜಾಹೀರಾತು ನೀಡಿ ಸಮುದಾಯದವರಿಗೆ ಮಾಹಿತಿ ತಿಳಿಯುವಂತೆ ಪ್ರಚಾರ ನೀಡಬೇಕು ತಾಕೀತು ಮಾಡಿದರು.

      ಪಾವಗಡ ತಾಲ್ಲೂಕು ಪೆಮ್ಮನಹಳ್ಳಿ ಗೊಲ್ಲರಹಟ್ಟಿಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ. ಈ ಹಟ್ಟಿಗೆ ಸೂಕ್ತ ರಸ್ತೆ ಸಂಪರ್ಕವಿಲ್ಲ, ಚರಂಡಿ ವ್ಯವಸ್ಥೆ, ಶಾಲಾ ಅಭಿವೃದ್ಧಿ ಕಂಡಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ. ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗೊಲ್ಲರಹಟ್ಟಿಗಳ ಅಭಿವೃದ್ಧಿಗೆ ಮುಂದಾಗ ಬೇಕಲ್ಲದೆ ಅಲ್ಲಿರುವ ಕಂದಾಚಾರಗಳು, ಮೌಢ್ಯತೆ ಬಗ್ಗೆ ಅರಿವು ಮೂಡಿಸಬೇಕೆಂದರು.

       ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಯೋಜನಾ ನಿರ್ದೇಶಕ ಮಾಂಕಾಳಪ್ಪ, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 25 times, 1 visits today)
Previous Articleಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ರಿಂದ ಗುರುವಾರ ರಾತ್ರಿ ಶಾಲಾ ವಾಸ್ತವ್ಯ-ಸಂವಾದ
Next Article ಪೌರಕಾರ್ಮಿಕರು ನಿಜವಾದ ಶ್ರಮಜೀವಿಗಳು-ಶಾಸಕ ಜಿ.ಬಿ.ಜ್ಯೋತಿಗಣೇಶ್
News Desk Benkiyabale

Related Posts

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm news
ತಾಜಾ ಸುದ್ಧಿಗಳು
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm
news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
Our Youtube Channel
Our Picks

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

By News Desk BenkiyabaleSeptember 08, 2026 5:26 pm

ಪಾವಗಡ ಮುಂಬರುವ ಶ್ರೀ ಗಣೇಶ ಚತುರ್ಥಿ ಸೇರಿದಂತೆ ಯಾವುದೇ ಸಾರ್ವಜನಿಕ ಹಬ್ಬ ಹರಿದಿನಗಳು ಹಾಗೂ ಸಮಾರಂಭಗಳಲ್ಲಿ ಧ್ವನಿವರ್ಧಕ ಡಿಜೆ ಬಳಕೆಯನ್ನು…

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.