BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
  • ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಧುಗಿರಿ ಪುರಸಭೆಯಿಂದ ಸಿದ್ದಾಪುರ ಕೆರೆಯ ನೀರು ಮಲಿನ!
Trending

ಮಧುಗಿರಿ ಪುರಸಭೆಯಿಂದ ಸಿದ್ದಾಪುರ ಕೆರೆಯ ನೀರು ಮಲಿನ!

By News Desk BenkiyabaleUpdated:October 09, 2019 7:00 pm

ಮಧುಗಿರಿ :

      ಪಟ್ಟಣದ ಜನತೆಗೆ ಕುಡಿಯುವ ನೀರಿನ ದಾಹ ತೀರಿಸುತ್ತಿರುವ ಸಿದ್ದಾಪುರ ಕೆರೆಯಲ್ಲಿ ಪುರಸಭೆಯವರು ಸಕ್ಕಿಂಗ್ ಯಂತ್ರವನ್ನು  ತೊಳೆದು ಹೇಮಾವತಿ ನೀರನ್ನು ಮಲಿನ ಮಾಡುತ್ತಿರುವುದು ನಿಜಕ್ಕೂ ಅಸಹ್ಯಕರ ಘಟನೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

       ದೇಶದೆಲ್ಲೆಡೆ ಸ್ವಚ್ಛ ಭಾರತದ ಘೋಷಣೆ ಮಂತ್ರ ಜಪಿಸುತ್ತಿದ್ದರೆ. ಪುರಸಭೆಯವರು ಮಾತ್ರ ಪಟ್ಟಣದ ಜನತೆಗೆ ಕುಡಿಯುವ ನೀರೊದಗಿಸುವ ಸಿದ್ದಾಪುರ ಕೆರೆಯಲ್ಲಿ ಸಕ್ಕಿಂಗ್ ಯಂತ್ರ ತೊಳೆಯುವ ಮೂಲಕ ಹೇಮೆಯನ್ನು ಕಲುಷಿತಗೊಳಿಸಿ ಸ್ವಚ್ಛ ಭಾರತದ ಘೋಷಣೆಗೆ ವಿರುದ್ಧ ನಿಂತಿದ್ದಾರೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

       ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಧುಗಿರಿ ಪುರಸಭೆಗೆ ಸೇರಿದ ಸಕ್ಕಿಂಗ್ ಯಂತ್ರ ವನ್ನು ಸಿದ್ದಾಪುರ ಕೆರೆಗೆ ತಂದು ನಿಲ್ಲಿಸಿ ಆ ವಾಹನವನ್ನು ಕೆರೆಯೊಳಗೆ ತೊಳೆದು ನಿಲ್ಲಿಸಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತ ಪುರಸಭೆ ಯವರ ಘನ ಕಾರ್ಯದ ಬಗ್ಗೆ ವ್ಯಾಪಕವಾದ ಟೀಕೆಗಳಿಗೆ ಪುರಸಭಾ ಸಿಬ್ಬಂದಿವರ್ಗ ಒಳಗಾಗಿದೆ. ಮಲದ ಗುಂಡಿಗಳನ್ನು ಕ್ಲೀನ್ ಮಾಡುವ ಯಂತ್ರವನ್ನು ತೊಳೆದಿರುವುದು ಸರಿಯಲ್ಲ ಹಾಗೂ ಇದರಿಂದ ಕೆರೆಯ ನೀರು ಮಲಿನವಾಗುವ ಜೊತೆಗೆ ನೀರಿನಲ್ಲಿರುವ ಜಲಚರ ಪ್ರಾಣಿಗಳಿಗೂ ಸಹ ಕಂಟಕ ವಾಗುತ್ತದೆ ಎಂಬ ಪ್ರಜ್ಞೆ ಪುರಸಭಾ ಸಿಬ್ಬಂದಿಗೆ ತಿಳಿದಿಲ್ಲವೇ. ಕುಡಿಯುವ ನೀರಿನ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದ ಪುರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕರು ಇದೊಂದು ಬೇಜವಾಬ್ದಾರಿ ಕೆಲಸವೆಂದು ಟೀಕಿಸುತ್ತಿದ್ದಾರೆ.

      ಇತ್ತೀಚೆಗಂತೂ ಕೆರೆಗಳಲ್ಲಿ ವಾಹನಗಳನ್ನು ತೊಳೆಯುವುದು ಹೆಚ್ಚು ಕಂಡು ಬರುತ್ತಿದ್ದು ಇಂತಹ ಮಲೀನ ಕಾರ್ಯಗಳ ಬಗ್ಗೆ ಕೆರೆಯ ಬಳಿ ಸೂಚನಾ ಫಲಕಗಳನ್ನು ಆಳವಡಿಸುವ ಮೂಲಕ ಜನರಿಗೆ ಅರಿವು ಮೂಡಿಸಿ ನೀರಿನ ಮಹತ್ವ ಹಾಗೂ ಸ್ವಚ್ಚತಾ ಕಾರ್ಯ ನಿರ್ವಸುವ ಕೆಲಸ ಮಾಡಬೇಕಾದ ಪುರಸಭೆಯೆ ಇಂತಹ ಮಲೀನ ಕಾರ್ಯ ಮಾಡಿರುವುದು ಎಷ್ಟು ಸರಿ. ಇಷ್ಟು ವರ್ಷಗಳಾದರೂ ಹೇಮಾವತಿ ನೀರು ನಿಲ್ಲುತ್ತಿರುವ ಸಿದ್ದಾಪುರ ಕೆರೆಯ ಬಳಿ ಎಲ್ಲಿಯೂ ಸಹ ಸೂಚನಾ ಫಲಕಗಳು ಆಳವಡಿಸದೆ ಇರುವುದು ಪುರಸಭೆಯವರ ದಿವ್ಯ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಪುರಸಭೆಯವರು ಎಚ್ಚರಿಕೆ ವಹಿಸುವರೇ ಎಂದು ಕಾದು ನೋಡಬೇಕಿದೆ.

(Visited 12 times, 1 visits today)
Previous Articleಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರತಿಭಟನೆ
Next Article ತುಮಕೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಗೆ ಐಟಿ ಶಾಕ್!!
News Desk Benkiyabale

Related Posts

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm news
ತಾಜಾ ಸುದ್ಧಿಗಳು
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
news

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm
news

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm
news

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
Our Youtube Channel
Our Picks

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

By News Desk BenkiyabaleSeptember 30, 2026 6:04 pm

ಹುಳಿಯಾರು: ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮದಲ್ಲಿನ ನೂತನವಾಗಿ ನಿರ್ಮಿಸಲಾಗಿರುವ ಬೋರನಕಣಿವೆ ಸರ್ಕಾರಿ ಐಟಿಐ ಕಾಲೇಜಿನ ಉದ್ಘಾಟನೆಗೊಂಡು ಇನ್ನೂ ಒಂದು ತಿಂಗಳು…

ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ

September 30, 2026 6:02 pm

ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ

September 30, 2026 6:01 pm

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ

September 30, 2026 5:59 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.