BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ
  • ಪುಟ್ಟ ಮಕ್ಕಳಿಗೆ ಉಚಿತ ಶ್ರವಣ ಸಾಧನ ವಿತರಣೆ
  • ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್ ತುರ್ತು ನೆರವಿಗೆ ಮನವಿ
  • ರಾಗಿ ಮಾರಾಟ ಮಾಡಿ ೬ ತಿಂಗಳು ಕಳೆದರೂ ಹಣವಿಲ್ಲ
  • ರಾಜ್ಯ ಮಿನಿ ಒಲಂಪಿಕ್ಸ್ನಲ್ಲಿ ಭಾಗವಹಿಸಲು ತುಮಕೂರಿನ ಮಕ್ಕಳಿಗೆ ತರಬೇತಿ: ಜಿಲ್ಲಾಧಿಕಾರಿ
  • ಜೆಡಿಎಸ್ ಕಾರ್ಯಕರ್ತರ ಮೇಲಿನ ಸುಳ್ಳು ಪ್ರಕರಣಕ್ಕೆ ಖಂಡನೆ
  • ಶೀಘ್ರದಲ್ಲಿಯೇ ಆಸಕ್ತರಿಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವು ಕಾರ್ಯಾಗಾರ
  • ರಾತ್ರಿ ಅಂಗಡಿ ಮುಗ್ಗಟ್ಟುಗಳ ಕಾರ್ಯಾಚರಣೆ ಸಮಯ ನಿಗದಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅನಂತ ಯಾನ ಅಂತ್ಯ
ಬೆಂಗಳೂರು

ಅನಂತ ಯಾನ ಅಂತ್ಯ

By News Desk BenkiyabaleUpdated:November 13, 2018 6:17 pm

ಬೆಂಗಳೂರು:

       ಸೋಮವಾರ ವಿಧಿವಶರಾದ ಬಿಜೆಪಿಯ ದಿಗ್ಗಜ ನಾಯಕ,ಕೇಂದ್ರ ಸಚಿವ ಎಚ್‌.ಎನ್‌.ಅನಂತ್‌ ಕುಮಾರ್‌ ಅವರ ಅಂತಿಮ ಸಂಸ್ಕಾರ ಮಂಗಳವಾರ ಮಧ್ಯಾಹ್ನ ಗಣ್ಯಾತೀಗಣ್ಯರ ಸಮಕ್ಷಮ, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ  ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.ಈ ವೇಳೆ ಪತ್ನಿ ತೇಜಸ್ವಿನಿ ಮತ್ತು ಪುತ್ರಿಯರಿಬ್ಬರು ತೀವ್ರ ಕಂಬನಿ ಮಿಡಿದರು. 

        ಅನಂತಕುಮಾರ್ ಸೋದರ ನಂದಕುಮಾರ್ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಸೇನಾ ಸಿಬ್ಬಂದಿ ಸರ್ಕಾರಿ ಗೌರವ ಸಲ್ಲಿಸಿದರು. ಪಕ್ಷಾತೀತವಾಗಿ ಪ್ರಮುಖ ರಾಜಕೀಯ ನಾಯಕರು, ಸಚಿವರು, ಶಾಸಕರು ಮತ್ತು ಅಭಿಮಾನಿಗಳು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

      ಮುಂಜಾನೆ 7.30ಕ್ಕೆ ಬಸವನಗುಡಿಯಲ್ಲಿರುವ ಅನಂತಕುಮಾರ್ ಅವರ ಸ್ವಗೃಹ ‘ಸುಮೇರು’ವಿನಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿ ‘ಜಗನ್ನಾಥ ಭವನ’ಕ್ಕೆ ಪುಷ್ಪಾಲಂಕೃತ ಸೇನಾ ವಾಹನದಲ್ಲಿ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ಪಕ್ಷದ ಕಚೇರಿಯಲ್ಲಿ ಗೌರವ ಸಲ್ಲಿಸಿದರು.

      ಅಲ್ಲಿಂದ ನ್ಯಾಷನಲ್ ಕಾಲೇಜು ಮೈದಾನಕ್ಕೆ ಪಾರ್ಥಿವ ಶರೀರ ತರಲಾಯಿತು. ಅಲ್ಲಿ ಸಾವಿರಾರು ಸಾರ್ವಜನಿಕರು ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆದರು. 

      ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರು ಶಿಷ್ಯ ಅನಂತ್‌ ಕುಮಾರ್‌ ಅವರ ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ಅನಂತ್‌ ಕುಮಾರ್‌ ಅವರ ಪಾರ್ಥೀವ ಶರೀರ ಕಂಡು ಕಂಬನಿ ಮಿಡಿದರು. ಅನಂತ್‌ ಕುಮಾರ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. 

      ಕೇಂದ್ರ ಸಚಿವರಾದ ರಾಜ್‌ನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌ , ಡಿ.ವಿ.ಸದಾನಂದ ಗೌಡ ಸೇರಿ 20 ಕ್ಕೂ ಹೆಚ್ಚು ಮಂದಿ ಅಂತಿಮ ಕ್ರಿಯೆಯಲ್ಲಿ ಹಾಜರಾಗಿ  ಗೌರವ ಸಮರ್ಪಣೆ ಮಾಡಿದರು. ರಾಜ್ಯ ಸರ್ಕಾರದ ಪರವಾಗಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಅಂತಿಮ ನಮನ ಸಲ್ಲಿಸಿದರು. 

       ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಿತು. ಸ್ಮಾರ್ಥ ಬ್ರಾಹ್ಮಣ ವಿಧಿಗಳಂತೆ ಅಂತಿಮ ಸಂಸ್ಕಾರ ನಡೆಯಿತು. ಶ್ರೀಗಂಧ, ಹಸುವಿನ ತುಪ್ಪ ಮೊದಲಾದ ದ್ರವ್ಯಗಳಿಂದ ಶರೀರವನ್ನು ದಹನ ಮಾಡಲಾಯಿತು.  ಪುರೋಹಿತ ಶ್ರೀನಾಥ ಶರ್ಮಾ ಮಾರ್ಗದರ್ಶನದಲ್ಲಿ  ಮಂತ್ರಘೋಷಗಳೊಂದಿಗೆ ಅಂತಿಮ ವಿಧಿ ಗಳನ್ನು ನಡೆಸಿದರು.  

      ಸಾರ್ವಜನಿಕರಿಗೆ ಅಂತಿಮ ವಿಧಿಗಳನ್ನು ವೀಕ್ಷಿಸುವ ಸಲುವಾಗಿ ಮೈದಾನದ ಹೊರಗೆ ಬೃಹತ್‌ ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದೆ. ರುದ್ರಭೂಮಿಯತ್ತ ಲಕ್ಷಾಂತರ ಜನರು ಹರಿದು ಬಂದಿದ್ದರು. ವ್ಯಾಪಕ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿತ್ತು. 

 

 

 

(Visited 23 times, 1 visits today)
Previous Articleಅನಂತಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ
Next Article ಸರ್ಕಾರಿ ಜಾಗದಲ್ಲಿರುವ ಗುಡಿಸಲನ್ನು ತೆರವುಗೊಳಿಸಲು 3 ದಿನಗಳ ಗಡುವು
News Desk Benkiyabale

Related Posts

ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ

September 16, 2026 5:17 pm news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm news

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm news
ತಾಜಾ ಸುದ್ಧಿಗಳು
news

ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

October 06, 2026 5:58 pm
news

ಪುಟ್ಟ ಮಕ್ಕಳಿಗೆ ಉಚಿತ ಶ್ರವಣ ಸಾಧನ ವಿತರಣೆ

October 06, 2026 5:57 pm
news

ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್ ತುರ್ತು ನೆರವಿಗೆ ಮನವಿ

October 06, 2026 5:55 pm
news

ರಾಗಿ ಮಾರಾಟ ಮಾಡಿ ೬ ತಿಂಗಳು ಕಳೆದರೂ ಹಣವಿಲ್ಲ

October 06, 2026 5:53 pm
news

ರಾಜ್ಯ ಮಿನಿ ಒಲಂಪಿಕ್ಸ್ನಲ್ಲಿ ಭಾಗವಹಿಸಲು ತುಮಕೂರಿನ ಮಕ್ಕಳಿಗೆ ತರಬೇತಿ: ಜಿಲ್ಲಾಧಿಕಾರಿ

October 06, 2026 5:52 pm
news

ಜೆಡಿಎಸ್ ಕಾರ್ಯಕರ್ತರ ಮೇಲಿನ ಸುಳ್ಳು ಪ್ರಕರಣಕ್ಕೆ ಖಂಡನೆ

October 05, 2026 5:34 pm
Our Youtube Channel
Our Picks

ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

October 06, 2026 5:58 pm

ಪುಟ್ಟ ಮಕ್ಕಳಿಗೆ ಉಚಿತ ಶ್ರವಣ ಸಾಧನ ವಿತರಣೆ

October 06, 2026 5:57 pm

ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್ ತುರ್ತು ನೆರವಿಗೆ ಮನವಿ

October 06, 2026 5:55 pm

ರಾಗಿ ಮಾರಾಟ ಮಾಡಿ ೬ ತಿಂಗಳು ಕಳೆದರೂ ಹಣವಿಲ್ಲ

October 06, 2026 5:53 pm

ರಾಜ್ಯ ಮಿನಿ ಒಲಂಪಿಕ್ಸ್ನಲ್ಲಿ ಭಾಗವಹಿಸಲು ತುಮಕೂರಿನ ಮಕ್ಕಳಿಗೆ ತರಬೇತಿ: ಜಿಲ್ಲಾಧಿಕಾರಿ

October 06, 2026 5:52 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತಹಶೀಲ್ದಾರ್ ಮಮತಾ ಸ್ಥಳಕ್ಕೆ ಭೇಟಿ: ಜೆಸಿಬಿ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ

By News Desk BenkiyabaleOctober 06, 2026 5:58 pm

ಹುಳಿಯಾರು: ಸೋಮವಾರ ಬೆಳಗ್ಗೆ ಮತ್ತು ರಾತ್ರಿ ವೇಳೆಗೆ ಹುಳಿಯಾರು ಪಟ್ಟಣದಲ್ಲಿ ಭರ್ಜರಿ ಮಳೆ ಸುರಿದ ಪರಿಣಾಮ ಪಟ್ಟಣದ ಹಲವು ಭಾಗಗಳಲ್ಲಿ…

ಪುಟ್ಟ ಮಕ್ಕಳಿಗೆ ಉಚಿತ ಶ್ರವಣ ಸಾಧನ ವಿತರಣೆ

October 06, 2026 5:57 pm

ಮಾತಂಗ ಮುನಿ ಪರಿವಾರ ಸೇವಾ ಟ್ರಸ್ಟ್ ತುರ್ತು ನೆರವಿಗೆ ಮನವಿ

October 06, 2026 5:55 pm

ರಾಗಿ ಮಾರಾಟ ಮಾಡಿ ೬ ತಿಂಗಳು ಕಳೆದರೂ ಹಣವಿಲ್ಲ

October 06, 2026 5:53 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.