BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
  • ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗುರಿ ಮುಟ್ಟಲು ಶಿಕ್ಷಣ ಪ್ರಮುಖ ಸಾಧನ – ಅತೀಕ್
ತುಮಕೂರು ಜಿಲ್ಲಾ ಸುದ್ಧಿಗಳು

ಗುರಿ ಮುಟ್ಟಲು ಶಿಕ್ಷಣ ಪ್ರಮುಖ ಸಾಧನ – ಅತೀಕ್

By News Desk BenkiyabaleUpdated:January 13, 2020 6:08 pm

ತುಮಕೂರು :

      ಯಾವುದೇ ಒಬ್ಬ ವ್ಯಕ್ತಿಯು ಜೀವನದಲ್ಲಿ ತನ್ನ ಗುರಿಯನ್ನು ಮುಟ್ಟಲು ಶಿಕ್ಷಣವು ಪ್ರಮುಖ ಸಾಧನವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅತೀಕ್ ಅಭಿಪ್ರಾಯ ವ್ಯಕ್ತಪಡಿಸಿದರು.

      ತುಮಕೂರು ನಗರದ ಪಿ.ಹೆಚ್.ಕಾಲೋನಿಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಖುರ್ಷಿದ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ನೋಟ್ ಬುಕ್ ಹಾಗೂ ಕಂಪ್ಯೂಟರ್ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು,
ವಿದ್ಯೆಯು ಸಾಧಕನ ಸ್ವತ್ತು. ಶಾಲೆಗೆ ಹೋಗುವ ಮೂಲಕ ಸತತ ಪರಿಶ್ರಮದಿಂದ ಸಾಧಿಸಿದಾಗ ಮಾತ್ರ ವಿದ್ಯೆ ನಮಗೆ ಒಲಿಯುತ್ತದೆ. ಇಂದಿನ ಮಕ್ಕಳೇ ನಾಳೆಯ ಭವ್ಯ ಭಾರತದ ಪ್ರಜೆಗಳು. ಕೆಲವರಿಗೆ ಶಾಲೆಗೆ ಹೋಗಲು ಆಸಕ್ತಿ ಇದ್ದರೂ ಅವಕಾಶ ಸಿಗುವುದಿಲ್ಲ. ಆದರೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ತಮಗೆ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಪೋಷಕರ ಆಸೆಗಳನ್ನು ಈಡೇರಿಸಲು ಸಾಧ್ಯವಾಗಲಿದೆ ಎಂದರು.

      ವಿದ್ಯೆಗಾಗಿ, ಜ್ಞಾನಾರ್ಜನೆಗಾಗಿ ವಿದ್ಯಾರ್ಥಿಗಳು ವಿದೇಶಗಳಿಗೆ ಹೋದರೂ ತಪ್ಪಿಲ್ಲ. ಜ್ಞಾನವು ವಿಶಾಲವಾದುದು. ಅದನ್ನು ಪಡೆಯಲು ಎಲ್ಲರೂ ಮುಂದಾಗಬೇಕು. ಅದರಲ್ಲಿಯೂ ಹೆಣ್ಣು ಮಕ್ಕಳು ಹೆಚ್ಚು ಹೆಚ್ಚು ವ್ಯಾಸಂಗ ಮಾಡುವ ಮೂಲಕ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.

       ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾಕಲ್ಯಾಣ್ ಮಾತನಾಡುತ್ತಾ, ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಒಬ್ಬ ವ್ಯಕ್ತಿ ಇಂದು ರಾಜ್ಯ ಸರ್ಕಾರದ ಉನ್ನತ ಹುದ್ದೆಯನ್ನು ಅಲಂಕರಿಸಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿ. ಅವರ ಮಾರ್ಗದರ್ಶನ ತಮಗೆಲ್ಲಾ ದಾರಿದೀಪ ಎಂದು ಬಣ್ಣಿಸಿದರು.

      ವ್ಯಾಸಂಗದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದುವುದು ಬಿಟ್ಟರೆ ಯಾವುದೇ ಜವಾಬ್ದಾರಿ ಇರುವುದಿಲ್ಲ. ವಿದ್ಯಾರ್ಥಿ ಜೀವನವನ್ನು ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಮೀಸಲಿಟ್ಟು ನಿಗಧಿತ ಗುರಿ ಮುಟ್ಟಲು ಸತತ ಪರಿಶ್ರಮಪಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಕಾಮಾಕ್ಷಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

      ಸರ್ಕಾರಿ ಪೌಢಶಾಲೆಯ ಮುಖ್ಯ ಶಿಕ್ಷಕಿ ಅಸ್ಮಾ ತಬಸುಂ ಅವರು, ಶಾಲೆಗೆ ಸ್ವಂತ ಕಟ್ಟಡವಿಲ್ಲದೆ ವಕ್ಫ್ ಬೋರ್ಡ್ ಕಟ್ಟಡದಲ್ಲಿ ಕಳೆದ 25 ವರ್ಷಗಳಿಂದ ನಡೆಸಲಾಗುತ್ತಿದ್ದು, ಆದಷ್ಟು ಬೇಗ ಶಾಲೆಗೆ ಸ್ವಂತ ನಿವೇಶನ ನೀಡುವಂತೆ ನೆರೆದಿದ್ದ ಅಧಿಕಾರಿಗಳಲ್ಲಿ ಮನವಿ ಮಾಡಿದರು.

      ಈ ಸಂದರ್ಭದಲ್ಲಿ ಖುರ್ಷಿದ್ ಫೌಂಡೇಶನ್ ಅಧ್ಯಕ್ಷ ಮೊಹಮ್ಮದ್ ಅಸಾದುಲ್ಲಾ ಖಾನ್, ಪಾಯಿಜ ಅತೀಕ್, ತುಮಕೂರು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್ ಸೇರಿದಂತೆ ಖುರ್ಷಿದ್ ಫೌಂಡೇಶನ್ನ ಸದಸ್ಯರು, ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

      ಗೇರಹಳ್ಳಿ ಸರ್ಕಾರಿ ಶಾಲೆಗೆ ಭೇಟಿ: ನಂತರ ತುಮಕೂರು ತಾಲ್ಲೂಕು ಕೋರ ಹೋಬಳಿ ಓಬಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳಿಗೆ ಉಚಿತ ನೋಟ್ಬುಕ್ ಹಾಗೂ ಕಂಪ್ಯೂಟರ್ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

(Visited 9 times, 1 visits today)
Previous Articleಪ್ರಧಾನಿ ಮೋದಿ ಸಂವಾದ ಕಾರ್ಯಕ್ರಮ : ಮಧುಗಿರಿ ಶೈಕ್ಷಣಿಕ ಜಿಲ್ಲೆಯ 4 ವಿದ್ಯಾರ್ಥಿಗಳು ಭಾಗಿ!
Next Article ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ : ಅರ್ಹರ ನೋಂದಣಿಗೆ ಡಿಸಿ ಸೂಚನೆ
News Desk Benkiyabale

Related Posts

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm news
ತಾಜಾ ಸುದ್ಧಿಗಳು
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm
news

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
news

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
Our Youtube Channel
Our Picks

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

By News Desk BenkiyabaleSeptember 29, 2026 5:00 pm

ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ…

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.