BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೊರರಾಜ್ಯಕ್ಕೆ ಹುಣಸೆ ಮತ್ತು ಕೊಬ್ಬರಿ : ಸಚಿವ ಮಾಧುಸ್ವಾಮಿ
Trending

ಹೊರರಾಜ್ಯಕ್ಕೆ ಹುಣಸೆ ಮತ್ತು ಕೊಬ್ಬರಿ : ಸಚಿವ ಮಾಧುಸ್ವಾಮಿ

By News Desk BenkiyabaleUpdated:April 22, 2020 6:13 pm

ತುಮಕೂರು:

      ಜಿಲ್ಲೆಯಿಂದ ಹುಣಸೆ ಹಣ್ಣು ಮತ್ತು ಕೊಬ್ಬರಿಯನ್ನು ಕೆಲವು ನಿಬಂಧನೆಗೊಳಪಟ್ಟು ಹೊರ ರಾಜ್ಯಗಳಿಗೆ ಕಳುಹಿಸಲು ಏಪ್ರಿಲ್ 24ರಿಂದ(ನಾಡಿದ್ದು) ಅವಕಾಶ ಕಲ್ಪಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ತಿಳಿಸಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೊವಿಡ್-19 ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಹೊರ ರಾಜ್ಯಗಳಿಗೆ ಹುಣಸೆ ಹಣ್ಣು ಮತ್ತು ಕೊಬ್ಬರಿ ತೆಗೆದುಕೊಂಡು ಹೋಗಿ ವಾಪಸ್ ಬರುವ ಲಾರಿ ಡ್ರೈವರ್‍ಗಳನ್ನು 14 ದಿನಗಳವರೆಗೆ ಕಡ್ಡಾಯವಾಗಿ ಕ್ವಾರೆಂಟೈನ್ ಮಾಡಲಾಗುವುದು ಎಂದರು.

      ಕೋವಿಡ್-19ರ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ರೈಸ್‍ಮಿಲ್‍ಗಳಲ್ಲಿ ಹೊರ ರಾಜ್ಯಗಳಿಂದ ಭತ್ತ ತರಿಸುತ್ತಿರುವುದು ಹಾಗೂ ರೈಸ್ ಸರಬರಾಜು ಮಾಡುತ್ತಿದ್ದು, ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ ಕೊಬ್ಬರಿ ಹಾಗೂ ಹುಣಸೆ ಹಣ್ಣಿನ ವರ್ತಕರು/ಎಪಿಎಂಸಿಗಳು ನಿರ್ವಹಣೆ ಮಾಡಬೇಕು ಎಂದರು.

      ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಮಾತನಾಡಿ, ಹೊರ ರಾಜ್ಯಗಳಿಗೆ ಹೋಗುವ ಲಾರಿ ಚಾಲಕರನ್ನು ಆರೋಗ್ಯ ತಪಾಸಣೆಗೊಳಪಡಿಸಬೇಕು. ಸಾರ್ವಜನಿಕರ ಆರೋಗ್ಯದ ಸುರಕ್ಷತೆಯಿಂದ ಅವರನ್ನು ಕ್ವಾರೆಂಟೈನ್ ಮಾಡುವ ಷರತ್ತುಗೊಳಪಟ್ಟು ವಹಿವಾಟಿಗೆ ಅನುಮತಿ ನೀಡಲಾಗುತ್ತಿದೆ. ಅಲ್ಲದೇ ವಾಹನ ಚಾಲಕನಿಗೆ ಮಾಸ್ಕ್, ಸ್ಯಾನಿಟೈಸರ್‍ಗಳನ್ನು ಒದಗಿಸಿ, ಊಟವನ್ನು ಪಾರ್ಸಲ್ ತಂದು ಲಾರಿಯಲ್ಲಿಯೇ ತಿನ್ನಬೇಕು ಮತ್ತು ಜಿಲ್ಲೆಯಿಂದ ಹೋಗುವ ಚಾಲಕರಿಗಾಗಿ ಸಹಾಯವಾಣಿ ತೆರೆಯಲಾಗುವುದು. ಯಾವುದೇ ರೀತಿಯ ಸಮಸ್ಯೆಯಾದಲ್ಲಿ ಅವರು ಸಂಪರ್ಕಿಸಬಹುದು ಎಂದರು.

      ಹೊರರಾಜ್ಯಗಳಿಗೆ ಹುಣಸೆ ಹಣ್ಣು ಹಾಗೂ ಕೊಬ್ಬರಿ ಮಾರಾಟ ಮಾಡಲು ಎಸ್‍ಓಪಿ (ಸ್ಟಾಂಡರ್ಡ್ ಆಫ್‍ರೆಟಿಂಗ್ ಪ್ರೊಸಿಜರ್ಸ್)ಗಳನ್ನು ಜಿಲ್ಲಾಡಳಿತ ರೂಪಿಸಿ ಆದೇಶ ಹೊರಡಿಸಲಿದೆ. ಅದರಂತೆ ಎಪಿಎಂಸಿ/ವರ್ತಕರು ಈ ಸೂಚನೆಗಳನ್ನು ಪಾಲಿಸಬೇಕಾಗುತ್ತದೆ. ಚಾಲಕರು ಆರೋಗ್ಯವನ್ನು ಪರಿಶೀಲಿಸಲು ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ಎಪಿಎಂಸಿಯಲ್ಲಿ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು.

      ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಲಾರಿ ಚಾಲಕರು ಸೂಚಿಸಿರುವ ಸ್ಥಳವನ್ನು ಹೊರತುಪಡಿಸಿ ಬೇರೆ ಕಡೆ ಓಡಾಡಬಾರದು. ರಾಜ್ಯ ಹಾಗೂ ಜಿಲ್ಲೆಯಲ್ಲಿ ಕೋವಿಡ್-19ರ ನಿಯಂತ್ರಣವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ ಎಂದರು.

      ಶಾಸಕ ಬಿ.ಸಿ ನಾಗೇಶ್ ಮಾತನಾಡಿ, ತುರುವೇಕೆರೆ, ದಂಡಿನಶಿವರಗಳಲ್ಲಿ ಹೆಚ್ಚಾಗಿ ಕೊಬ್ಬರಿ ಲೋಡ್ ಆಗುತ್ತಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದು, ರೈತರಿಂದ ಕೊಬ್ಬರಿಯನ್ನು ಕಡಿಮೆಬೆಲೆಗೆ ಖರೀದಿಸುತ್ತಿದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದರು.

      ಲಾಕ್‍ಡೌನ್ ಅವಧಿಯಲ್ಲಿ ನೀರಾವರಿ ಯೋಜನೆಗಳ ಕಾಮಗಾರಿಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು, ಲೋಕೋಪಯೋಗಿ ಇಲಾಖೆಯ ಮುಂದುವರೆದ ಕಾಮಗಾರಿಗಳು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ಅವಕಾಶ ನೀಡಿದೆ ಎಂದು ಸಚಿವರು ತಿಳಿಸಿದರು.

      ಕೋವಿಡ್-19 ನಿಯಂತ್ರಣ ಸಂಬಂಧ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ನಾಳೆಯಿಂದ(ಇಂದಿನಿಂದ) ಮನೆಮನೆ ಸಮೀಕ್ಷೆ ನಡೆಸಿ ಹೈರಿಸ್ಕ್ ಇರುವ ರೋಗಿಗಳ ಮಾಹಿತಿ ಪಡೆಯಲಾಗುವುದು. ಹೊರ ಜಿಲ್ಲೆಯಿಂದ ಅದರಲ್ಲೂ ಹಾಟ್‍ಸ್ಪಾಟ್ ಸ್ಥಳಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಲು 53 ಮೊಬೈಲ್ ಸ್ಕ್ವಾಡ್‍ಗಳನ್ನು ರಚಿಸಲಾಗಿದೆ ಹಾಗೂ ಗ್ರಾಮ ಕಾರ್ಯಪಡೆಗಳು ಈ ದಿಸೆಯಲ್ಲಿ ಕಾರ್ಯೋನ್ಮುಖವಾಗಿವೆ. ಹೊರಗಡೆಯಿಂದ ಬರುವವರನ್ನು ಪರೀಕ್ಷಿಸಿ 14 ದಿನಗಳ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.

      ಸಭೆಯಲ್ಲಿ ಮಾತನಾಡಿದ ಡಿಹೆಚ್‍ಓ ಡಾ: ಚಂದ್ರಿಕಾ ಅವರು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಪ್ರಯೋಗಾಲಯ ಸ್ಥಾಪಿಸಲು ಕ್ರಮ ಕೈಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಸ್ಥಾಪನೆಯಾಗಲಿದೆ. ಈಗಾಗಲೇ 2 ತಂಡಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿ ತರಬೇತಿ ಕೊಡಿಸಲಾಗಿದೆ ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಸಂಸದರಾದ ಜಿ.ಎಸ್.ಬಸವರಾಜು, ಶಾಸಕರುಗಳಾದ ಜ್ಯೋತಿಗಣೇಶ್, ವೀರಭದ್ರಯ್ಯ, ಸತ್ಯನಾರಾಯಣ, ಜಯರಾಂ, ರಂಗನಾಥ್, ವಿಧಾನಪರಿಷತ್ ಶಾಸಕರಾದ ತಿಪ್ಪೇಸ್ವಾಮಿ, ಬೆಮೆಲ್ ಕಾಂತರಾಜ್, ಚೌಡರೆಡ್ಡಿ, ಜಿ.ಪಂ. ಸಿಇಓ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಕೊನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಎಪಿಎಂಸಿ ಕಾರ್ಯದರ್ಶಿ ಪುಷ್ಪ, ವರ್ತಕರ ಸಂಘದ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 10 times, 1 visits today)
Previous Articleಕೃಷಿ ಚಟುವಟಿಕೆ ಯಾವುದೇ ನಿಬಂಧವಿಲ್ಲ- ಸಚಿವ ಬಿ.ಸಿ ಪಾಟೀಲ್
Next Article ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುತ್ತದೆ – ಸಚಿವ ಸುರೇಶ್ ಕುಮಾರ್
News Desk Benkiyabale

Related Posts

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news
ತಾಜಾ ಸುದ್ಧಿಗಳು
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
Our Youtube Channel
Our Picks

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

By News Desk BenkiyabaleSeptember 19, 2026 5:39 pm

ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ , ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ವಿರುದ್ಧ ತುಮಕೂರು ನಗರ ಪೊಲೀಸ್…

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.