BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ
  • ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ
  • ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ
  • ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು
  • ದಲಿತ ಯುವಕನ ಹತ್ಯೆ ಖಂಡಿಸಿ ಬಿಜೆಪಿ ಎಸ್.ಸಿ ಮೋರ್ಚಾ ಪ್ರತಿಭಟನೆ
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗೆ ಚಾಲನೆ
Trending

ತುಮಕೂರು : ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗೆ ಚಾಲನೆ

By News Desk BenkiyabaleUpdated:May 18, 2020 6:35 pm

ತುಮಕೂರು :

    ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಸಾರ್ವಜನಿಕರ ಉಪಯೋಗಕ್ಕಾಗಿ ತುಮಕೂರು ಕೆಸ್ಸಾರ್ಟಿಸಿ ನಿರ್ಮಿಸಿರುವ ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಚಾಲನೆ ನೀಡಿದರು.

      ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಕರಾರಸಾ ನಿಗಮ ವತಿಯಿಂದ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಲು ಬಸ್ಸನ್ನು ಮಾರ್ಪಾಡು ಮಾಡಿ, ಮೋಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದಿಂದ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಅನವಶ್ಯಕ ಓಡಾಟವನ್ನು ತಪ್ಪಿಸಬಹುದು. ಅವಶ್ಯಕತೆ ಇರುವ ಕಡೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ನಲ್ಲಿಯೇ ಗಂಟಲು ದ್ರವ ಮಾದರಿಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

      ಜಿಲ್ಲಾಧಿಕಾರಿ ಡಾ.ಕೆ ರಾಕೇಶ್‍ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕಡೆ ರ್ಯಾಂಡಮ್ ಆಗಿ ಪರೀಕ್ಷೆ ಮಾಡಲು ಜನರ ಗಂಟಲು ದ್ರವ ಮಾದರಿನ್ನು ಪಡೆಯಬಹುದು. ಅಲ್ಲದೇ ಸಾರ್ವಜನಿಕರಿಗೆ ವೈದ್ಯಕೀಯ ಪರೀಕ್ಷೆಯನ್ನು ಮಾಡಲು ಸಹ ಇದು ಉಪಯೋಗವಾಗುತ್ತದೆ. ಸಾರ್ವಜನಿಕರು ಇದರ ಉಪಯೋಗ ಪಡೆದು ಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

      ನಂತರ ಡಿ.ಎಚ್.ಓ ಡಾ|| ನಾಗೇಂದ್ರಪ್ಪ ಮಾತನಾಡಿ, ಜನಸಂದಣಿ ಹೆಚ್ಚಿರುವ ಸ್ಥಳಕ್ಕೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್ ತೆಗೆದುಕೊಂಡು ಹೋಗಿ ಅವಶ್ಯಕವಿರುವವರ ಗಂಟಲು ದ್ರಾವವನ್ನು ಪರೀಕ್ಷೆ ಮಾಡಲು ವ್ಯಸ್ಥೆಯನ್ನು ಮಾಡಿದ್ದು, ಆರೋಗ್ಯ ಇಲಾಖೆ ವತಿಯಿಂದ ಈಗಾಗಲೇ ಬಸ್ ಕಾರ್ಯನಿರ್ವಹಿಸುತ್ತಿತ್ತು. ಅದರ ಜೊತೆಗೆ ಕೆಎಸ್ಸಾರ್ಟಿಸಿ ವತಿಯಿಂದ ಒಂದು ಬಸ್ ಕಾರ್ಯನಿರ್ವಹಿಸುತ್ತದೆ ಎಂದರು.

      ಸದರಿ ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಕೆಎ-06 ಎಫ್-662 ವಾಹನವನ್ನು ಉಪಯೋಗಿಸಿಕೊಳ್ಳಲಾಗಿದ್ದು, ಈ ಬಸ್ಸಿನಲ್ಲಿ ಒಟ್ಟು 12 ಜನ ನುರಿತ ತಾಂತ್ರಿಕ ಸಿಬ್ಬಂದಿಗಳಿಂದ 05 ದಿನಗಳಲ್ಲಿ 50 ಸಾವಿರ ರೂ. ವೆಚ್ಚದಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಬಸ್ ನಿರ್ಮಿಸಲಾಗಿದೆ ಎಂದು ಕೆಸ್ಸಾರ್ಟಿಸಿ ಡಿಸಿ ಗಜೇಂದ್ರಕುಮಾರ್ ಇದೇ ಸಂದರ್ಭದಲ್ಲಿ ತಿಳಿಸಿದರು.

 ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ನ ಸೌಲಭ್ಯಗಳು:-

      ವೈದ್ಯರ ಕ್ಯಾಬಿನ್, ನರ್ಸ ಕ್ಯಾಬಿನ್, ರೋಗಿಗಳ ತಪಾಸಣೆಗಾಗಿ ಪ್ರತ್ಯೇಕ ಡಯಾಗ್ನೋಸಿಂಗ್ ಘಟಕ, ಸ್ವ್ಯಾಬ್ ಸ್ಯಾಂಪಲ್ ಕಲೇಕ್ಷನ್‍ಗಾಗಿ ಪ್ರತ್ಯೇಕ ಕ್ಯಾಬಿನ್, ಸ್ಯಾನಿಟೈಜರ್ ಯುನಿಟ್, ರೋಗಿಗಳಿಗಾಗಿ ಆಸನಗಳು, ವಾಶ್ ಬೇಸಿನ್, ಪ್ಯಾನ್‍ಗಳು, ಬೆಳಕಿನ ವ್ಯವಸ್ಥೆ, ವಾಹನದ ಹೊರ ಕವಚದ ಮೇಲೆ ಕೋವಿಡ್-19 ಸಂಬಂಧಿಸಿದಂತೆ ಮಾಹಿತಿ ಹಾಗೂ ವಹಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಪ್ಲೆಕ್ ಅಳವಡಿಸಲಾಗಿರುತ್ತದೆ.

 ಮೊಬೈಲ್ ಫೀವರ್ ಕ್ಲಿನಿಕ್ ಬಸ್‍ನ ಉಪಯೋಗ:-

       ವಾಹನವನ್ನು ಯಾವುದೇ ಸ್ಥಳಕ್ಕೆ/ಊರುಗಳಿಗೆ ಕೊಂಡೊಯ್ಯವುದು ರೋಗಿಗಳನ್ನು ತಪಾಸಣೆ ಹಾಗೂ ಸ್ವ್ಯಾಬ್ ಸ್ಯಾಂಪಲ್ ಕಲೇಕ್ಷನ್ ಮಾಡಬಹುದಾಗಿರುತ್ತದೆ. ಹಳ್ಳಿಗಳಿಂದ ಮತ್ತು ಇತರೆ ಸ್ಥಳಗಳಿಂದ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ಅನವಶ್ಯಕವಾಗಿ ಓಡಾಟವನ್ನು ತಪ್ಪಿಸಬಹುದಾಗಿರುತ್ತದೆ. ವಲಸೆ ಬಂದವರನ್ನು ಗುಂಪು ಸೇರದಂತೆ ಅವರಿರುವ ಸ್ಥಳದಲ್ಲಿ ಪರೀಕ್ಷೆ ಮಾಡಬಹುದಾಗಿರುತ್ತದೆ. ಬಸ್‍ನಿಲ್ದಾಣ/ರೈಲ್ವೆ ನಿಲ್ದಾಣಗಳಲ್ಲಿ ಶಂಕಿತ ಸಾರ್ವಜನಿಕರ ತಪಾಸಣೆ ಮಾಡಲು ಅನುಕೂಲವಾಗುತ್ತದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ||ವೀರಭದ್ರಯ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

(Visited 4 times, 1 visits today)
Previous Articleನರೇಗಾ ಯೋಜನೆಯಡಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾಮಗಾರಿ ಕೈಗೊಳ್ಳಿ : ಸಚಿವ
Next Article ತುಮಕೂರು : ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ!!
News Desk Benkiyabale

Related Posts

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm news

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm news

ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ

September 23, 2026 5:47 pm news
ತಾಜಾ ಸುದ್ಧಿಗಳು
news

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
news

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm
news

ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ

September 23, 2026 5:47 pm
news

ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು

September 23, 2026 5:45 pm
news

ದಲಿತ ಯುವಕನ ಹತ್ಯೆ ಖಂಡಿಸಿ ಬಿಜೆಪಿ ಎಸ್.ಸಿ ಮೋರ್ಚಾ ಪ್ರತಿಭಟನೆ

September 23, 2026 5:43 pm
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Our Youtube Channel
Our Picks

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm

ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ

September 23, 2026 5:47 pm

ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು

September 23, 2026 5:45 pm

ದಲಿತ ಯುವಕನ ಹತ್ಯೆ ಖಂಡಿಸಿ ಬಿಜೆಪಿ ಎಸ್.ಸಿ ಮೋರ್ಚಾ ಪ್ರತಿಭಟನೆ

September 23, 2026 5:43 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

By News Desk BenkiyabaleSeptember 23, 2026 5:52 pm

ತುಮಕೂರು: ಸಾರ್ವಜನಿಕರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಅವರಿಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ…

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm

ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ

September 23, 2026 5:47 pm

ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು

September 23, 2026 5:45 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.