BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
  • ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು
  • ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ
  • ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ
  • ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ
  • ಉದ್ಯಮ ಸಂಸ್ಥೆ ಜೊತೆ ಎಸ್‌ಎಸ್‌ಐಟಿ ಒಡಂಬಡಿಕೆ
  • ವಿಬಿ ಜಿ ರಾಮ್ ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ: ಜನರು ಗುಳೆ ಹೋಗುವುದನ್ನು ತಪ್ಪಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೀಲ್‍ಡೌನ್ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ!
Trending

ಸೀಲ್‍ಡೌನ್ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ!

By News Desk BenkiyabaleUpdated:July 16, 2020 6:37 pm

ಗುಬ್ಬಿ:

     ಸೀಲ್‍ಡೌನ್ ಪ್ರದೇಶದಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸುವ ಜತೆಗೆ ಕೊರೋನಾ ವಾರಿಯರ್ಸ್‍ಗಳಾದ ಆಶಾ ಕಾರ್ಯಕರ್ತೆಯರ ಬವಣೆ ಆಲಿಸುವ ಕೆಲಸ ಸೇವೆಗೆ ಅರ್ಥ ನೀಡಿದೆ ಎಂದು ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ ತಿಳಿಸಿದರು.

      ತಾಲ್ಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ ವಿಎಸ್‍ಎಸ್‍ಎನ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾದ ದಿನಸಿ ಪದಾರ್ಥಗಳ ಕಿಟ್ ನೀಡಿ ಮಾತನಾಡಿದ ಅವರು ದೊಡ್ಡಗುಣಿ ಭಾಗದಲ್ಲಿ ಎರಡು ಕೊರೋನಾ ಪಾಸಿಟೀವ್ ಪ್ರಕರಣ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಈ ವಾರಿಯರ್ಸ್‍ಗಳ ಸೇವೆ ಸ್ಮರಣೀಯ. ಅವರ ಶ್ರಮದ ಫಲ ಮತ್ತೇ ಯಾವುದೇ ಪ್ರಕರಣ ಈ ಭಾಗದಲ್ಲಿ ಕಂಡಿಲ್ಲ ಎಂದು ಶ್ಲಾಘಿಸಿದರು.

      ಕೊರೋನಾ ವೈರಸ್ ಗ್ರಾಮೀಣ ಭಾಗದಲ್ಲಿ ಕಾಡುತ್ತಿದೆ. ಮುಗ್ದ ಜನರ ಬದುಕಿನಲ್ಲಿ ಆವಾಂತರ ಹುಟ್ಟಿಸುವ ಈ ವೈರಾಣು ತಡೆಗೆ ಅಗತ್ಯ ಜಾಗೃತಿ ಕ್ರಮವನ್ನು ಸ್ವಯಂಪ್ರೇರಿತರಾಗಿ ಜನರು ಅನುಸರಿಸಬೇಕಿದೆ. ಈ ಸಂದರ್ಭದಲ್ಲಿ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ. ಆದರೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೂ ತೆರಳಿ ಜಾಗೃತಿ ಜತೆಗೆ ಮನದಟ್ಟು ಮಾಡಿ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭ ನಡೆಯದಂತೆ ನೋಡಿಕೊಂಡಿದ್ದಾರೆ. ಕಂದಾಯ ಇಲಾಖೆಯ ಕೆಲಸಗಳಿಗೆ ಸಾಥ್ ನೀಡಿದ ಅವರು ಕಾರ್ಯವೈಖರಿ ಮೆಚ್ಚುವಂತಹದು ಎಂದರು.

      ದೊಡ್ಡಗುಣಿ ವಿಎಸ್‍ಎಸ್‍ಎನ್ ಅಧ್ಯಕ್ಷ ಕಾರೇಕುರ್ಚಿ ಸತೀಶ್ ಮಾತನಾಡಿ ರೈತಪರ ಕೆಲಸ ಮಾಡುತ್ತಾ ಬೆಳದ ಈ ವಿಎಸ್‍ಎಸ್‍ಎನ್ 2.50 ಕೋಟಿ ರೂಗಳ ಬೆಳೆ ಸಾಲ ನೀಡಿ ಜಿಲ್ಲೆಯಲ್ಲಿ ಉತ್ತಮ ಸೊಸೈಟಿ ಎನಿಸಿಕೊಂಡಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುವ ಜತೆಗೆ ಕೊರೋನಾ ಸಂದರ್ಭದಲ್ಲಿ ಕ್ವಾರಂಟೈನ್‍ಗೆ ಒಳಗಾಗುವ ಕುಟುಂಬಗಳ ಸಂಕಷ್ಟಕ್ಕೂ ಸ್ಪಂದಿಸಲಾಗಿದೆ. ಆದರೆ ಕನಿಷ್ಠ ವೇತನದಲ್ಲಿ ಬದುಕು ನಡೆಸುವ ಆಶಾ ಕಾರ್ಯಕರ್ತೆಯರ ಕುಟುಂಬ ಸಹ ಕಷ್ಟ ಅನುಭವಿಸುತ್ತಿವೆ. ಈ ಸಂದರ್ಭದಲ್ಲಿ ಗೌರವಧನ ಸಹ ನಿಗದಿತ ಸಮಯಕ್ಕೆ ದೊರೆಯದ ಕಾರಣ ಅವರ ಕುಟುಂಬಕ್ಕೂ ದಿನಸಿ ಕಿಟ್ ನೀಡುವ ಉದ್ದೇಶದಲ್ಲಿ ಎಲ್ಲಾ ಸದಸ್ಯರು ಒಗ್ಗೂಡಿ ನಿರ್ಧರಿಸಿ ದೊಡ್ಡಗುಣಿ ಆಸ್ಪತ್ರೆಗೆ ಸಂಬಂಧಿಸಿದ 30 ಮಂದಿ ಸಿಬ್ಬಂದಿಗಳಿಗೆ ಕಿಟ್ ನೀಡಲಾಗಿದೆ ಎಂದರು.

      ತಾಲ್ಲೂಕಿನಲ್ಲಿ 30 ಪ್ರಕರಣ ಕಾಣಿಸಿಕೊಂಡಿದೆ. ಈಗಾಗಲೇ ಎಲ್ಲಾ ಹೋಬಳಿಯಲ್ಲೂ ಕಾಣಿಸಿಕೊಂಡ ಈ ವೈರಸ್ ತಡೆಗೆ ಆಶಾ ಕಾರ್ಯಕರ್ತೆಯರ ಪರಿಶ್ರಮ ಅತ್ಯಗತ್ಯವಾಗಿದೆ. ಪ್ರತಿ ಮನೆ ತಲುಪಿ ಗರ್ಭಿಣಿ ಸ್ತ್ರೀಯರು, ವಿವಿಧ ಕಾಯಿಲೆಗೆ ಒಳಪಟ್ಟವರು, ಮಕ್ಕಳು ಮತ್ತು ವೃದ್ದರು ಹೀಗೆ ಎಲ್ಲಾ ಮಾಹಿತಿ ಪಡೆದು ಕೊರೋನಾ ಜಾಗೃತಿಗೆ ನಿಗಾವಹಿಸಿದ್ದಾರೆ. ಆರೋಗ್ಯ ಇಲಾಖೆ ಜತೆಗೆ ನಿಕಟ ಸಂಪರ್ಕದಲ್ಲಿ ಪಾಸಿಟೀವ್ ಪ್ರಕರಣ ಕಂಡು ಹಿಡಿದು ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ವಿಳಾಸ ಕಂಡು ಹಿಡಿಯುವಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯ ಎಂದರು.

      ಈ ಸಂದರ್ಭದಲ್ಲಿ ತಾಪಂ ಸದಸ್ಯ ರಾಜಣ್ಣ, ವಿಎಸ್‍ಎಸ್‍ಎನ್ ಉಪಾಧ್ಯಕ್ಷ ಡಿ.ಎಸ್.ಪರಶಿವಮೂರ್ತಿ, ಸದಸ್ಯರಾದ ಡಿ.ಎಸ್.ರೇಣುಕಾಪ್ರಸಾದ್, ಪಂಚಾಕ್ಷರಯ್ಯ, ಬಸವರಾಜು, ಮಂಜುನಾಥ್, ಕಂಚಿರಾಯ, ಗಂಗಾಧರಯ್ಯ, ಯೋಗೀಶ್, ಜಯಣ್ಣ, ಈರಣ್ಣ, ವೈದ್ಯ ಡಾ.ಕಿರಣ್, ಸಹಕಾರ ಅಭಿವೃದ್ಧಿ ಅಧಿಕಾರಿ ಸುರೇಶ್, ಪಿಡಿಓ ರಂಗಸ್ವಾಮಿ, ವಿಎಸ್‍ಎಸ್‍ಎನ್ ಸಿಇಓ ಓಂಕಾರಮೂರ್ತಿ ಇತರರು ಇದ್ದರು.

(Visited 7 times, 1 visits today)
Previous Articleಪ.ಜಾತಿ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಎಸಿಗೆ ಮನವಿ!
Next Article ಬೆಳೆ ಸಮೀಕ್ಷೆ ಮಾಡಿದ ಪಿಆರ್‍ಗಳಿಗೆ ಹಣ ನೀಡದ ಕೃಷಿ ಇಲಾಖೆ
News Desk Benkiyabale

Related Posts

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm news
ತಾಜಾ ಸುದ್ಧಿಗಳು
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm
news

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm
news

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm
news

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
news

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
news

ಸಚಿವ ಬಿ.ನಾಗೇಂದ್ರ ವಿರುದ್ಧ ಪಿತೂರಿಗೆ ವಾಲ್ಮೀಕಿ ಸಮಾಜ ಖಂಡನೆ

August 12, 2026 5:37 pm
Our Youtube Channel
Our Picks

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

August 13, 2026 5:40 pm

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm

ಕನ್ನಡಪರ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

August 13, 2026 5:35 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ

By News Desk BenkiyabaleAugust 13, 2026 5:40 pm

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೧೫ರ ಶನಿವಾರ ಬೆಳಗ್ಗೆ ೯ ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘ಸ್ವಾತಂತ್ರö್ಯ ದಿನಾಚರಣೆ-೨೦೨೬’…

ಡಿಸಿಎಂಯಿದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ

August 13, 2026 5:39 pm

ಐಸಿಎಚ್-೫ ತಳಿಯ ಹರಳು ಬೆಳೆದರೆ ಕೈ ತುಂಬ ದುಡ್ಡು

August 13, 2026 5:38 pm

ಚಿಗುರು ಬಾಲ ಪ್ರತಿಭೆಗಳಿಗೆ ಪ್ರೋತ್ಸಾಹ ಕಾರ್ಯಕ್ರಮ

August 13, 2026 5:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.