BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಿಕ್ಕನಾಯಕನಹಳ್ಳಿ: ಬೆಂಗಳೂರಿಗೆ ಬಂದ ವ್ಯಕ್ತಿ ಮೃತ : ಜನರಲ್ಲಿ ಆತಂಕ!!
Trending

ಚಿಕ್ಕನಾಯಕನಹಳ್ಳಿ: ಬೆಂಗಳೂರಿಗೆ ಬಂದ ವ್ಯಕ್ತಿ ಮೃತ : ಜನರಲ್ಲಿ ಆತಂಕ!!

By News Desk BenkiyabaleUpdated:July 17, 2020 6:57 pm

ಚಿಕ್ಕನಾಯಕನಹಳ್ಳಿ:

      ತಾಲ್ಲೂಕಿನ ಮೂಲದ ವೃದ್ಧನೊಬ್ಬ ಬೆಂಗಳೂರಿನಿಂದ ಸ್ವಂತ ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದು, ನಂತರ ಗ್ರಾಮಕ್ಕೆ ಪ್ರವೇಶನೀಡದ ಕಾರಣ ಬೆಂಗಳೂರಿಗೆ ಹಿಂತಿರುಗುವ ಸಂದರ್ಭದಲ್ಲಿ ಮರಣಹೊಂದಿದ್ದಾನೆ ಎಂಬ ಸುದ್ದಿಯಿಂದ ಗ್ರಾಮಗಳಲ್ಲಿ ಆತಂಕ ಮನೆಮಾಡಿದೆ.

       ತಾಲ್ಲೂಕಿನ ಕುಪ್ಪೂರು ಪಂಚಾಯಿತಿಯ ದಿಬ್ಬದಹಳ್ಳಿಯ ಮೂಲದ ರಾಜಣ್ಣ(65) ಎಂಬುವರು ಬೆಂಗಳೂರಿನಲ್ಲಿ ತಮ್ಮ ಮಕ್ಕಳ ಮನೆಯಲ್ಲಿದ್ದರು. ಈಚೆಗೆ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾದ ಕಾರಣಕ್ಕೆ ಊರಿನಲ್ಲಿರುವ ಸಂಬಂಧಿಕರ ಮನೆಯಲ್ಲಿ ಕೆಲವು ಸಮಯ ಇರಲು ಗ್ರಾಮಕ್ಕೆ ಪ್ರಯಾಣ ಬೆಳೆಸಿದ್ದರು. ಬುಧವಾರ ಬೆಂಗಳೂರಿನಿಂದ ಚಿ.ನಾ. ಹಳ್ಳಿಗೆ ಬಂದು, ಇಲ್ಲಿಂದ ದಿಬ್ಬದಹಳ್ಳಿಗೆ ತೆರಳಲು ವಾಹನವಿರದ ಕಾರಣ ನಡೆದುಕೊಂಡೆ ಪಯಣಬೆಳೆಸಿದರು. ಆದರೆ ಊರಿನ ಸಮೀಪದ ಕುರುಬಳ್ಳಿಗೆ ಬಂದಾಗ ವಿಷಯತಿಳಿದ ಈತನ ನೆಂಟರು ಇವರನ್ನು ತಮ್ಮ ಮನೆಗೆ ಬರುವುದಕ್ಕೆ ಅಸಮ್ಮತಿ ವ್ಯಕ್ತವಾದ ಹಿನ್ನಲೆಯಲ್ಲಿ ಕುರುಬರಳ್ಳಿಯ ತಂಗುದಾಣದಲ್ಲಿಯೇ ವಿಶ್ರಾಂತಿ ಪಡೆದರು.

       ಈ ಸಮಯದಲ್ಲಿ ಈ ಗ್ರಾಮದ ಕೆಲವರೊಂದಿಗೆ ಮಾತನಾಡಿದ್ದರು. ಇವರಿಗೆ ಉಬ್ಬಸವಿದ್ದಕಾರಣ ತೀವ್ರ ನಿತ್ರಾಣರಾಗಿದ್ದ ಕಾರಣ ಗ್ರಾಮಸ್ಥರು ಕೋವಿಡ್19 ಗೆ ಮಾಹಿತಿ ನೀಡಿದರು. ನಂತರ ಸ್ಥಳಕ್ಕೆ ಕೋವಿಡ್19 ವಾಹನದಲ್ಲಿ ಇವರನ್ನು ತಕ್ಷಣ ತುಮಕೂರಿನಾಸ್ಪತ್ರೆಗೆ ಕೊಂಡೊಂಯ್ಯಲಾಯಿತು.

       ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಮರಣಹೊಂದಿದ್ದಾರೆ ಎಂಬ ವದಂತಿ ಗ್ರಾಮಗಳಲ್ಲಿ ದಟ್ಟವಾಗಿ ಹರಡಿದೆ. ಇದರಿಂದ ಇವರನ್ನು ಮಾತನಾಡಿಸಿದ ಜನರಿಗೆ ಆತಂಕ ತಲೆದೂರಿದೆ. ಈತನು ಬೆಂಗಳೂರಿನಿಂದ ಬಂದು ಚಿಕ್ಕನಾಯಕನಹಳ್ಳಿಯಲ್ಲಿ ಇಳಿದು ನಂತರ ಕುರುಬರಹಳ್ಳಿಗೆ ನಡೆದುಕೊಂಡುಬಂದು ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿರುವ ಹಿನ್ನಲೆಯಲ್ಲಿ ಇವರಿಗೆ ಕೊರೊನಾ ಸೋಂಕು ಇದಯೇ ಎಂಬ ಬಗ್ಗೆ ಈವರೆಗೂ ಮಾಹಿತಿಯಿಲ್ಲ. ಪ್ರಯಾಣದ ನಡುವೆ ಇವರಿಗೆ ಎಲ್ಲಿಯೂ ಆರೋಗ್ಯದ ಪರೀಕ್ಷೆ ನಡೆಸಲಿಲ್ಲವೇಕೆ ಎಂಬುದು ಯಕ್ಷಪ್ರಶ್ನೆಯಾಗಿದೆ.

      ಈ ಪ್ರಕರಣ ನಡೆದ ಮಾರನೇದಿನ ಜಿಲ್ಲಾಧಿಕಾರಿಗಳು ತಾಲ್ಲೂಕಿಗೆ ಭೇಟಿ ನೀಡಿದ್ದರೂ ಸ್ಥಳೀಯ ಆಡಳಿತ ಈ ಪ್ರಕರಣದ ಮಾಹಿತಿಯನ್ನು ಮಾಧ್ಯಮದವರಿಗೂ ಹಂಚಿಕೊಂಡಿಲ್ಲ. ಜೊತೆಗೆ ವ್ಯಕ್ತಿಯನ್ನು ಕೊವಿಡ್ ವಾಹನದಲ್ಲಿ ಕೊಂಡೊಯ್ದಿದ್ದರೂ ಈವರೆಗಿನ ಹಾಗೂ ನಂತರದ ವಿವರಣೆಯನ್ನು ಯಾರಿಗೂ ತಿಳಿಸಿದೆ ಮುಚ್ಚಿಡುವ ಯತ್ನ ನಡೆಸಿ ಸಂಬಂಧಿಸಿದ ಗ್ರಾಮಗಳಲ್ಲಿ ಭಯದ ವಾತಾವರಣ ಸೃಷ್ಠಿಗೆ ಕಾರಣವಾಗಿದೆ. ಈ ವ್ಯಕ್ತಿ ತೆರಳಿದ ಗ್ರಾಮಗಳಲ್ಲಿ ಈವರೆಗೆ ಯಾವುದೇ ಸೋಂಕು ಬಂದಿಲ್ಲದ ಕಾರಣ ನೆಮ್ಮದಿಯಿಂದಿದ್ದ ಗ್ರಾಮಸ್ಥರಿ ಆತಂಕಕ್ಕೊಳಗಾಗಿದ್ದಾರೆ. ತಾಲ್ಲೂಕುಆಡಳಿತ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ವ್ಯಕ್ತಿ ಮೃತನಾಗಿದ್ದಾನಯೇ, ಇಲ್ಲವೇ ಸೋಂಕಿತನೇ ಎಂಬ ಸತ್ಯವನ್ನು ಹೊರಗೆಡವಬೇಕಿದೆ.

(Visited 6 times, 1 visits today)
Previous Articleರೈಲ್ವೆ ಖಾಸಗೀಕರಣ ವಿರುದ್ಧ ಸಿಐಟಿಯು ಪ್ರತಿಭಟನೆ
Next Article ತುಮಕೂರು : ಶನಿವಾರ 23 ಮಂದಿಗೆ ಕೊರೊನಾ ಸೋಂಕು ದೃಢ!!
News Desk Benkiyabale

Related Posts

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm news

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm Trending

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm news
ತಾಜಾ ಸುದ್ಧಿಗಳು
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Trending

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
Our Youtube Channel
Our Picks

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

By News Desk BenkiyabaleSeptember 22, 2026 5:12 pm

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.