ತುಮಕೂರು:

ಕುರುಬ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ.
ಭಾರತ ದೇಶದಲ್ಲಿ ಬುಡಕಟ್ಟು ಜನಾಂಗವಾಗಿರುವ ಕುರುಬ ಸಮುದಾಯವು ಬ್ರಿಟಿಷರ ಆಳ್ವಿಕೆಯಲ್ಲೂ ಸಹ ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿ ಪಟ್ಟಿಯಲ್ಲಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ಜೇನು ಕುರುಬ, ಕಾಡು ಕುರುಬ, ಗೊಂಡ, ರಾಜಗೊಂಡ ಮತ್ತು ಕುರುಬ (ಕೊಡಗು ಜಿಲ್ಲೆ) ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ. ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. 28 ನೇ ಪಟ್ಟಿಯಲ್ಲಿರುವ ಕುರುಬ (ಕೊಡಗು). ಇದನ್ನು ರಾಜ್ಯದ 30 ಜಿಲ್ಲೆಗಳಿಗೂ ವಿಸ್ತರಿಸಬೇಕೆಂದು ಇದರ ಸಂಬಂಧ ಹಲವು ವರ್ಷಗಳಿಂದ ಜಾಗೃತಿ ಸಭೆಗಳು, ಸಂವಾದಗಳು, ಬೃಹತ್ ಸಮಾವೇಶದಲ್ಲಿನ ನಿರ್ಣಯಗಳನ್ನು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಮೂಲಕವೂ ಸರ್ಕಾರಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ. ಮಾನ್ಯ ಮುಖ್ಯಮಂತ್ರಿಗಳು, ಪರಿಶಿಷ್ಟ ಪಂಗಡ (ಎಸ್.ಟಿ.) ಮೀಸಲಾತಿ ಪ್ರಮಾಣವನ್ನು ಶೇಕಡ 9ಕ್ಕೆ ಹೆಚ್ಚಿಸಿ, ಕರ್ನಾಟಕ ರಾಜ್ಯದಲ್ಲಿ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿರುವ ಕುರುಬ ಜಾತಿಯನ್ನು ಪರಿಶಿಷ್ಟ ಪಂಗಡ (ಎಸ್.ಟಿ.) ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಮತ್ತೊಮ್ಮೆ ತಮಗೆ ಮನವಿ ಮಾಡಿಕೊಳ್ಳುತ್ತಿದ್ದೇವೆ.
ನಿನ್ನೆ ತುಮಕೂರು ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ ನವರಿಗೆ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರಿಗೆ ತುಮಕೂರು ಹಾಲುಮತ ಮಹಾಸಭಾ ವತಿಯಿಂದ ಮನವಿ ಪತ್ರವನ್ನು ಅರ್ಪಿಸಲಾಯಿತು.“ಎಸ್ಟಿ ವಿಚಾರವಾಗಿ ಕಳೆದ ನಾಲ್ಕು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದು , ಈಗ ನಮ್ಮ ಸಮಾಜ ಬಂಧುಗಳಲ್ಲಿ ಜಾಗೃತಿ ಮೂಡಿ ಹೋರಾಟವು ಒಂದು ಹಂತಕ್ಕೆ ಬಂದು ತಲುಪಿದೆ.
ಸದ್ಯದಲ್ಲೇ ಅಧಿವೇಶನ ಪ್ರಾರಂಭವಾಗುವುದರಿಂದ ಈ ವಿಚಾರವೂ ಸದನದಲ್ಲಿ ಚರ್ಚೆಯಾಗಲಿ ಎಂಬುದು ನಮ್ಮ ಉದ್ದೇಶ . ಆದ್ದರಿಂದ “ರಾಜ್ಯದ 28 ಜಿಲ್ಲೆಯಲ್ಲಿ ಇಂದು ಏಕಕಾಲದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಮನವಿ ಪತ್ರವನ್ನು ನೀಡಲಾಯಿತು, ಈ ಹೋರಾಟದಿಂದ ನಮ್ಮ ಮುಂದಿನ ಪೀಳಿಗೆಯವರಿಗೆ ಶಿಕ್ಷಣ ಕ್ಷೇತ್ರ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅನುಕೂಲವಾಗಲಿ ಎಂಬುದು ನಮ್ಮ ಆಶಯ “ಎಸ್ಟಿ ನಮ್ಮ ಹಕ್ಕು“ ಈ ಸಂದರ್ಭದಲ್ಲಿ ಹಾಲುಮತ ಮಹಾಸಭಾ ಜಿಲ್ಲಾ ಅಧ್ಯಕ್ಷ ಟಿ.ಎಂ. ಗರುಡಯ್ಯ ರಾಜ್ಯ ಸಂಚಾಲಕ ಲಕ್ಷ್ಮಿ ನರಸಿಂಹ ರಾಜು ಕರ್ನಾಟಕ ಪ್ರದೇಶ ಕುರುಬರ ಸಂಘದ ತುಮಕೂರು ಜಿಲ್ಲಾ ನಿರ್ದೇಶಕ ಹಾಗೂ ಹಾಲುಮತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ಹಾಗೂ ಸಮಾಜದ ಹಿರಿಯ ಮುಖಂಡರಾದ ಹನುಮಂತಯ್ಯ, ಸಿರಿವಾರ ಶಿವರಾಮಯ್ಯನವರು, ಮೇಳಕೋಟೆ ರವಿ, ನೆಲಹಾಳ್ ಭೀಮಯ್ಯ, ಕುಮಾರಿಪಿಂಕಿ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

 
									 
					



