ಕುಣಿಗಲ್‌ : ಇನೋವಾ ಪಲ್ಟಿ – 6 ಮಂದಿ ದುರ್ಮರಣ!!

ತುಮಕೂರು :

      ಕುಣಿಗಲ್ ತಾಲ್ಲೂಕಿನ ಸಿದ್ದಾಪುರ  ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇನೋವಾ ಕಾರೊಂದು ರಸ್ತೆ ವಿಭಜಕ ದಾಟಿ ಪಲ್ಟಿಯಾದ ಪರಿಣಾಮ  6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

      ಯಡಿಯೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು, ವಿಭಜಕ ದಾಟಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 8 ಮಂದಿಯಲ್ಲಿ 6 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.

       ಕಾರಿನಲ್ಲಿದ್ದ ಮಹಿಳೆ, ಮಗು ಬಿಟ್ಟು ಉಳಿದವರೆಲ್ಲ ಮೃತಪಟ್ಟಿದ್ದಾರೆ. ಅಮೃತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಅತಿವೇಗವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

 

(Visited 12 times, 1 visits today)

Related posts

Leave a Comment