ತುಮಕೂರು:
ಪದೋನ್ನತಿ ಹೊಂದಿ ರುವ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹೆಚ್.ಸವಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಎನ್. ಸೌಭಾಗ್ಯ ಅವರಿಗೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಸೋಮವಾರ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.
ಸವಿತಾ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ತಹಶೀಲ್ದಾರರಾಗಿ ಹಾಗೂ ಸೌಭಾಗ್ಯ ಅವರು ಸಿದ್ದರಬೆಟ್ಟ ಶ್ರೀ ಸಿದ್ದೇಶ್ವರ ದೇವಾಲಯದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ.
ಬೀಳ್ಕೊಡುಗೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಪದೋನ್ನತಿ ಹೊಂದಿದವರು ಸಲ್ಲಿಸಿದ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದೆಯೂ ಇದೇ ರೀತಿ ಉತ್ತಮ ಸೇವೆ ಸಲ್ಲಿಸಬೇಕೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಯಡಿಯೂರು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ವೈ.ಎಸ್. ಪ್ರಭು, ಜಿಲ್ಲಾ ಅರ್ಚಕ ಸಂಘದ ಅಧ್ಯಕ್ಷ ರಾಮತೀರ್ಥ, ವಿವಿಧ ಅರ್ಚಕರು, ಮುಜರಾಯಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.



