BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ
  • ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ
  • ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ
  • ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ
  • ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ
  • ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ
  • ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ
  • ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತ ವಿರೋಧಿ ನೀತಿಗಳ ಜಾರಿ ವಿರುದ್ಧ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ
Trending

ರೈತ ವಿರೋಧಿ ನೀತಿಗಳ ಜಾರಿ ವಿರುದ್ಧ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ

By News Desk BenkiyabaleUpdated:November 05, 2020 6:51 pm

ತುಮಕೂರು : 

      ಕೇಂದ್ರದ ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ರಸ್ತೆ ತಡೆಗೆ ಮುಂದಾದಾಗ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

      ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದಪಟೇಲ್ ನೇತೃತ್ವದಲ್ಲಿ ನೂರಾರು ರೈತರು ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ಕಾಯ್ದೆಗಳ ಜಾರಿಯನ್ನು ವಿರೋಧಿಸಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮದ ಅಂಗವಾಗಿ, ಕ್ಯಾತ್ಸಂದ್ರದಿಂದ ಜಾಸ್ ಟೋಲ್ ವರೆಗೂ ಮೆರವಣಿಗೆ ಹೊರಟ ರೈತರನ್ನು ಕ್ಯಾತ್ಸಂದ್ರ ಸರ್ಕಲ್ ನಲ್ಲಿ ತಡೆದ ಪೊಲೀಸರು, ಅವರನ್ನು ಬಂಧಿಸಿ, ಸಂಜೆಯವರೆಗೆ ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಮೈದಾನದಲ್ಲಿರಿಸಿ, ಸಂಜೆಯ ವೇಳೆಗೆ ಬಿಡುಗಡೆ ಮಾಡಿದರು.

      ಕ್ಯಾತ್ಸಂದ್ರ ಬಳಿ ಸಮಾವೇಶಗೊಮಡಿದ್ದ ರೈತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಆನಂದಪಟೇಲ್, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದಿರುವ ರೈತ ವಿರೋಧಿ ಮಸೂದೆಗಳಾದ ಎಪಿಎಂಸಿ ತಿದ್ದುಪಡಿ ಕಾಯ್ದೆ,ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ,ವಿದ್ಯುತ್ ಖಾಸಗೀಕರಣ ಮಸೂದೆಗಳು ಅತ್ಯಂತ ಜನವಿರೋಧಿ ಮತ್ತು ರೈತ ವಿರೋಧಿಯಾಗಿವೆ.ಇದರ ವಿರುದ್ದ ರಾಷ್ಟ್ರದಾದ್ಯಂತ ಹೋರಾಟಗಳು ನಡೆಯುತ್ತಿದ್ದು, ಇದರ ಭಾಗವಾಗಿ ನಾವು ರಾಜ್ಯದಲ್ಲಿ ಹೆದ್ದಾರಿ ತಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದರೆ ಪೊಲೀಸರು ಇಲ್ಲಸಲ್ಲದ ನೆಪ ಹೇಳಿ ನಮನ್ನು ತಡೆಯುತ್ತಿದ್ದಾರೆ. ಇದು ಪೊಲೀಸ್ ಇಲಾಖೆಗೆ ಶೋಭೆ ತರುವಂತಹದ್ದಲ್ಲ ಎಂದರು.

      ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ರೈತರು ಮತ್ತು ರಾಜಕಾರಣಿಗಳ ನಡುವೆ ತಾರತಮ್ಯ ಅನುಸರಿಸುತ್ತಿದೆ. ಈ ಹಿಂದೆ ರಾಜ್ಯ ಬಂದ್‍ಗೆ ಕರೆ ನೀಡಿದ ಸಂದರ್ಭದಲ್ಲಿ ಬೈಕ್ ರ್ಯಾಲಿಗೆ ಅವಕಾಶ ನೀಡಿದೆ ಪ್ರತಿಭಟನೆ ಹತ್ತಿಕ್ಕುವ ಕೆಲಸವನ್ನು ಮಾಡಿದರೂ, ಆದರೆ ರಾಜಕಾರಣಿಯೊಬ್ಬರ ಮನೆಯ ಮೇಲೆ ಇಡಿ ರೈಡ್ ಆದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಯಾವುದೇ ಅನುಮತಿ ಇಲ್ಲದೆ ಬೈಕ್ ರ್ಯಾಲಿ ನಡೆಸಲು ಅವಕಾಶ ಕಲ್ಪಿಸಿದರು. ಇದು ಪೊಲೀಸ್ ಇಲಾಖೆಯ ಇಬ್ಬಗೆಯೇ ನೀತಿ. ಇದನ್ನು ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಆನಂದಪಟೇಲ್ ನುಡಿದರು.

      ರಸ್ತೆಯಲ್ಲಿಯೇ ರೈತರು-ಪೊಲೀಸರ ನಡುವೆ ವಾಗ್ವಾದ:ಶಾಂತಿಯುತವಾಗಿ ಕ್ಯಾತ್ಸಂದ್ರ ಸರ್ಕಲ್‍ನಿಂದ ಜಾಸ್‍ಟೋಲ್ ವರೆಗೆ ಮೆರವಣಿಗೆಗೆ ಮುಂದಾದ ರೈತರನ್ನು ಪೊಲೀಸರು ತಡೆದರು. ಈ ವೇಳೆ ರೈತ ಸಂಘದ ಮುಖಂಡರು ಮತ್ತು ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು. ಪೊಲೀಸರ ಕ್ರಮವನ್ನು ಕಟುವಾಗಿಯೇ ಟೀಕಿಸಿದ ಆನಂದ ಪಟೇಲ್, ಪೊಲೀಸರು ರಾಜಕಾರಣಿಗಳ ಗುಲಾಮರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

      ಪೊಲೀಸ್ ಠಾಣೆಯ ಮುಂದೂ ಪ್ರತಿಭಟನೆ:ರೈತರನ್ನು ಬಂಧಿಸಿ, ಡಿ.ಆರ್.ಕಚೇರಿ ಬಳಿ ಕರೆ ತಂದ ನಂತರ ಅಲ್ಲಿಯೂ ಪ್ರತಿಭಟನೆ ಮುಂದುವರೆಸಿದ ರೈತರು,ಸರಕಾರ ಜಾರಿಗೆ ತಂದಿರುವ ಕಾಯ್ದೆಗಳು, ಅವುಗಳಿಂದ ರೈತರಿಗೆ ಆಗುವ ತೊಂದರೆಗಳ ಕುರಿತು ವಿವರ ನೀಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಿದರು.

       ಪ್ರತಿಭಟನೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್,ಜಿಲ್ಲಾ ಕಾರ್ಯಾಧ್ಯಕ್ಷ ಧನಂಜಯ ಆರಾಧ್ಯ, ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯದರ್ಶಿ ರುದ್ರೇಶಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಳೆ ಸಂಪಿಗೆ ಕೀರ್ತಿ, ಕುಣಿಗಲ್ ತಾಲೂಕು ಅಧ್ಯಕ್ಷ ಅನಿಲ್ ಕುಮಾರ್, ತುರುವೇಕೆರೆ ತಾಲೂಕು ಅಧ್ಯಕ್ಷ ತಾಳೆಕೇರೆ ನಾಗೇಂದ್ರ, ಶಿರಾ ಉಪಾಧ್ಯಕ್ಷ ಕುದುರೆ ಕುಂಟೆ ಲಕ್ಕಣ್ಣ, ಗುಬ್ಬಿ ತಾಲೂಕು ಅಧ್ಯಕ್ಷ ಚಿದಾನಂದಮೂರ್ತಿ, ಲಂಕೇನಹಳ್ಳಿ ಕಾಂತರಾಜು ಸೇರಿದಂತೆ ನೂರಾರು ರೈತರು, ರೈತ ಮಹಿಳೆಯರು ಭಾಗವಹಿಸಿದ್ದರು.

(Visited 11 times, 1 visits today)
Previous Articleಸ್ವಾಮೀಜಿಗೆ ಫೇಸ್ ಶೀಲ್ಡ್ ಮಾಸ್ಫ್ ಕೊಡುಗೆ : ಕೊರೊನಾದಿಂದ ಬದಲಾದ ಸತ್ಕಾರದ ಶೈಲಿ
Next Article ರಾಸು ಮೇಯಿಸುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ
News Desk Benkiyabale

Related Posts

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm news
ತಾಜಾ ಸುದ್ಧಿಗಳು
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm
news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm
news

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
news

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
news

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm
Our Youtube Channel
Our Picks

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

By News Desk BenkiyabaleSeptember 24, 2026 6:21 pm

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಅಕ್ಟೋಬರ್…

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.