BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರಿನಲ್ಲಿ ಸರಳ ಕ್ರಿಸ್‍ಮಸ್ ಸಂಭ್ರಮಾಚರಣೆ
Trending

ತುಮಕೂರಿನಲ್ಲಿ ಸರಳ ಕ್ರಿಸ್‍ಮಸ್ ಸಂಭ್ರಮಾಚರಣೆ

By News Desk BenkiyabaleUpdated:December 25, 2020 6:46 pm

ತುಮಕೂರು :

      ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್‍ಮಸ್ ಹಬ್ಬವನ್ನು ನಗರದಲ್ಲಿ ಸಡಗರ ಸಂಭ್ರಮ ಇಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಯಿತು.

      ಕ್ರಿಸ್‍ಮಸ್ ಎಂದಾಕ್ಷಣ ಕ್ರಿಸ್‍ಮಸ್ ಟ್ರೀ ಅಲಂಕಾರ, ಕ್ರಿಸ್ಮಸ್ ಕೇಕ್‍ಗಳು, ಸಂತಕ್ಲಾಸ್ ಕ್ಯಾಂಡಲ್‍ಗಳು, ವಿವಿಧ ಅಲಂಕಾರಗಳು ನೆನಪಿಗೆ ಬರುತ್ತವೆ. ಪಟಾಕಿ ಸಿಡಿಸುವುದು, ಗುಂಪು ಸೇರುವುದು, ಸಾಮೂಹಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಸಂಭ್ರಮದ ಮನೆ ಮಾಡಿರಲಿಲ್ಲ.

      ನಗರದ ಚರ್ಚ್ ಸರ್ಕಲ್‍ನಲ್ಲಿರುವ ಸಿಎಸ್‍ಐ ಮಹಾದೇವಾಲಯದಲ್ಲಿ ಸರಳವಾಗಿ ಕ್ರಿಸ್‍ಮಸ್ ಹಬ್ಬವನ್ನು ಆಚರಿಸಲಾಯಿತು.
ಸಿಎಸ್‍ಐ ವೆಸ್ಲಿ ಮಹಾದೇವಾಲಯದಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ದೇವಾಲಯಕ್ಕೆ ಬಂದ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗಳಿಗೆ ಸ್ಯಾನಿಟೈಸರ್ ಹಾಕಲಾಗುತ್ತಿತ್ತು. ಹಾಗೆಯೇ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲಾಗಿತ್ತು.

      ಕ್ರೈಸ್ತ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಈ ಕೊರೊನಾ ಮಹಾಮಾರಿ ಜಗತ್ತಿನಿಂದ ಬಹುಬೇಗ ದೂರವಾಗಲಿ ಎಂದು ಏಸುಕ್ರಿಸ್ತನಲ್ಲಿ ಪ್ರಾರ್ಥಿಸಿದರು. ನಂತರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

      ಪ್ರಾರ್ಥನೆ ಬಳಿಕ ಹಬ್ಬದ ಸಂದೇಶ ನೀಡಿದ ಸಿಎಸ್‍ಐ ಮಹಾದೇವಾಲಯದ ಸಭಾ ಪಾಲಕರು ಹಾಗೂ ತುಮಕೂರು ಕ್ಷೇತ್ರದ ಅಧ್ಯಕ್ಷರಾದ ಮಾರ್ಗನ್ ಸಂದೇಶ್, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕ್ರಿಸ್‍ಮಸ್ ಹಬ್ಬವನ್ನು ಸಡಗರ ಸಂಭ್ರಮ ಇಲ್ಲದೆ ಸರ್ಕಾರದ ಕೋವಿಡ್ ಮಾರ್ಗಸೂಚಿಗಳು ಹಾಗೂ ಮುಂಜಾಗ್ರತಾ ಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

      ಈ ವರ್ಷ ಕೊರೊನಾ ವೈರಸ್ ಪರಿಣಾಮದಿಂದಾಗಿ ಇಡೀ ಜಗತ್ತು ತಲ್ಲಣಗೊಂಡಿದೆ. ಹಾಗಾಗಿ ಈ ಬಾರಿಯ ಕ್ರಿಸ್‍ಮಸ್ ಹಬ್ಬದ ಆಚರಣೆಗಳಲ್ಲಿ ಸ್ವಲ್ಪ ಕಡಿಮೆ ಆಚರಣೆಗಳು ನಡೆಯುತ್ತಿವೆ. ಎಂದಿನಂತೆ ಅನೇಕ ಕಾರ್ಯಕ್ರಮಗಳ್ನು ಸಭೆಗಳಲ್ಲಿ ಮಾಡಲು ಸಾಧ್ಯವಾಗಿಲ್ಲ. ಮಕ್ಕಳು, ಮಹಿಳೆಯರಿಗಾಗಿ ಮಾಡುತ್ತಿದ್ದಂತಹ ಸಾಮೂಹಿಕ ಕೊರೊನಾ ಹಿನ್ನೆಲೆಯಲ್ಲಿ ಮಾಡಲಾಗುತ್ತಿಲ್ಲ. ಹಾಗೆಯೇ ಆಟೋಟ ಸ್ಪರ್ಧೆಗಳನ್ನು ನಿಲ್ಲಿಸಲಾಗಿದೆ ಎಂದರು.

      ಕ್ರಿಸ್‍ಮಸ್ ಹಬ್ಬ ಇಡೀ ಜಗತ್ತಿನಾದ್ಯಂತ ಸಂತೋಷ, ಸಡಗರ ತಂದಂತಹ ಹಬ್ಬ. ಪ್ರಾರಂಭದಿಂದ ಹಿಡಿದು ಇಲ್ಲಿಯವರೆಗೆ ಅದರದೇ ಆದಂತಹ ಹಿನ್ನೆಲೆ, ಮೌಲ್ಯಗಳನ್ನು ಹೊಂದಿದೆ. ಜನರ ಮೇಲಿನ ಪ್ರೀತಿ, ರಕ್ಷಣೆಗೋಸ್ಕರ ದೇವರು ಭೂಮಿಗೆ ಬಂದಂತಹ ಸಂಕೇತವನ್ನು ಈ ಹಬ್ಬ ಸೂಚಿಸುತ್ತದೆ ಎಂದರು.

      ಪ್ರತಿ ವರ್ಷ ಈ ಹಬ್ಬ ಆಚರಿಸುವಾಗ ವಿವಿಧ ರೀತಿಯ ಕಾರ್ಯಗಳನ್ನು ಸಾಂಕೇತಿಕವಾಗಿ ಮಾಡುತ್ತಿದ್ದೆವು. ಕ್ರಿಸ್‍ಮಸ್ ಎಂದಾಕ್ಷಣ ಕ್ರಿಸ್‍ಮಸ್ ಟ್ರೀ ಅಲಂಕಾರ, ಕ್ರಿಸ್ಮಸ್ ಕೇಕ್‍ಗಳು, ಸಂತಕ್ಲಾಸ್ ಕ್ಯಾಂಡಲ್‍ಗಳು, ವಿವಿಧ ಅಲಂಕಾರಗಳು ನೆನಪಿಗೆ ಬರುತ್ತದೆ. ಪಟಾಕಿ ಸಿಡಿಸುವುದು, ಗುಂಪು, ಸಾಮೂಹಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸಂಭ್ರಮದ ಹಬ್ಬ ಇಲ್ಲ ಎಂದರು.

      ಕ್ರಿಸ್‍ಮಸ್ ಸರಳ ಆಚರಣೆಗಷ್ಟೇ ಮಹತ್ವ ಕೊಡದೆ ಕ್ರಿಸ್‍ಮಸ್ ಹಬ್ಬದ ಉದ್ದೇಶ, ಹಿನ್ನೆಲೆಯನ್ನು ತಿಳಿದುಕೊಂಡು ಆರಾಧನೆ ಮಾಡಲಾಗುತ್ತಿದೆ ಎಂದು ಹೇಳಿದರು.  ಈ ಸಂದರ್ಭದಲ್ಲಿ ರಾಜೇಂದ್ರಕುಮಾರ್, ಅನಿಲ್, ರಂಜನ್‍ಕುಮಾರಿ, ಮನೋಜ್ ಪ್ರಭಾಕರ್ ಮತ್ತಿತರರು ಪಾಲ್ಗೊಂಡಿದ್ದರು.

 

(Visited 15 times, 1 visits today)
Previous Articleಸಾಮಾಜಿಕ ಜಾಲತಾಣಗಳಲ್ಲಿ ಗ್ರಾ.ಪಂ.ಚುನಾವಣಾ ಪ್ರಚಾರ
Next Article ಡಾ.ಸೂಲಗಿತ್ತಿ ನರಸಮ್ಮ ಗದ್ದುಗೆಯನ್ನು ಪ್ರವಾಸಿ ತಾಣವಾಗಿಸಬೇಕು
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.