BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೋವಿಡ್ -19 ನಿಗ್ರಹ; ಇಂದಿನಿಂದ ‘ಕೋವಿಶೀಲ್ಡ್’ ಲಸಿಕಾ ವಿತರಣೆ
Trending

ಕೋವಿಡ್ -19 ನಿಗ್ರಹ; ಇಂದಿನಿಂದ ‘ಕೋವಿಶೀಲ್ಡ್’ ಲಸಿಕಾ ವಿತರಣೆ

By News Desk BenkiyabaleUpdated:January 15, 2021 7:05 pm

 ತುಮಕೂರು : 

      ಕೋವಿಡ್ -19 ನಿಗ್ರಹಕ್ಕಾಗಿ ಬಿಡುಗಡೆಗೊಂಡಿರುವ ‘ಕೋವಿಶೀಲ್ಡ್’ ಲಸಿಕಾ ವಿತರಣಾ ಅಭಿಯಾನ ದೇಶದಾದ್ಯಂತ ಇಂದಿನಿಂದ (ಜನವರಿ 16) ಪ್ರಾರಂಭಗೊಳ್ಳಲಿದ್ದು, ಜಿಲ್ಲೆಯಲ್ಲಿ ಲಸಿಕೆ ನೀಡಲು ಮಾರ್ಗಸೂಚಿ ಅನ್ವಯ ಸಕಲ ಸಿದ್ಧತೆ ಜಿಲ್ಲಾಡಳಿತ ಮಾಡಿಕೊಂಡಿದೆ.

      ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‍ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯನ್ನು ಆರೋಗ್ಯ ಇಲಾಖೆ ನೀಡಿರುವ ಸೂಚನೆಗಳನ್ನು ಅನುಸರಿಸಿ ವಿತರಣೆ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು.

      ಮಾನ್ಯ ಪ್ರಧಾನಮಂತ್ರಿಗಳು ಲಸಿಕಾ ವಿತರಣೆಗೆ ಚಾಲನೆ ನೀಡಿದ ಬಳಿಕ ಜಿಲ್ಲೆಯಲ್ಲಿ ಲಸಿಕಾ ವಿತರಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರೆ ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮುಂಚೂಣಿಯ ಕೊರೋನಾ ಯೋಧರಿಗೆ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು.

      ಸಭೆಯಲ್ಲಿ ಮಾತನಾಡಿದ ಡಿಎಚ್‍ಒ ಡಾ. ನಾಗೇಂದ್ರಪ್ಪ ಅವರು, ಜಿಲ್ಲೆಯಲ್ಲಿ ಲಸಿಕೆ ವಿತರಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ -19 ಲಸಿಕೆ ಹಾಕಿಸಿಕೊಳ್ಳಲು 20ಸಾವಿರ ಮಂದಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದು, ಮೊದಲ ಹಂತದಲ್ಲಿ 12 ಸಾವಿರ ಮಂದಿಗೆ ಲಸಿಕೆ ನೀಡಲಾಗುತ್ತದೆ. ಈ ಪೈಕಿ ಮೊದಲ ದಿನ ಇಂದು( ಜನವರಿ 16ರಂದು) 1,211 ಫಲಾನುಭವಿಗಳಿಗೆ ಲಸಿಕೆ ನೀಡಲಾಗುವುದು. ಉಳಿದ ಫಲಾನುಭವಿಗಳಿಗೆ ಸೋಮವಾರದಿಂದ ಮುಂದುವರೆಯಲಿರುವ ಲಸಿಕಾ ಅಭಿಯಾನದಲ್ಲಿ ಲಸಿಕೆ ನೀಡಲಾಗುತ್ತದೆ ಎಂದರು.

      ಮೊದಲ ಹಂತದ 13 ಕೇಂದ್ರಗಳಲ್ಲಿ ಲಸಿಕಾ ವಿತರಣೆ ನಡೆಯಲಿದೆ. ಜಿಲ್ಲೆಗೆ 12 ಸಾವಿರ ‘ಕೋವಿಶೀಲ್ಡ್’ ಡೋಸ್ ಲಸಿಕೆ ಬಂದಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಛೇರಿ ಆವರಣದಲ್ಲಿರುವ ಜಿಲ್ಲಾ ಲಸಿಕಾ ಉಗ್ರಾಣದಲ್ಲಿ ಲಸಿಕೆ ಶೇಖರಿಸಲಾಗಿತ್ತು. ಈ ಲಸಿಕೆಯನ್ನು ಶುಕ್ರವಾರ 13 ವಿತರಣಾ ಕೇಂದ್ರಗಳಿಗೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆ, ಶ್ರೀದೇವಿ ಮೆಡಿಕಲ್ ಕಾಲೇಜು, ಕ್ಯಾತ್ಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋತಿ ತೋಪಿನ ನಗರ ಆರೋಗ್ಯ ಕೇಂದ್ರ ಹಾಗೂ ಜಿಲ್ಲೆಯ 9 ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು.

      ಸರ್ಕಾರದ ಮಾರ್ಗಸೂಚಿ ಅನ್ವಯ ಸುರಕ್ಷಿತವಾಗಿ ಲಸಿಕೆ ವಿತರಣೆ ಮಾಡಲಾಗುವುದು. ಮುಂದಿನ ಹಂತದಲ್ಲಿಯೂ ಯಶಸ್ವಿ ಲಸಿಕಾ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಡಾ. ಕೇಶವ್‍ರಾಜ್, ಡಾ. ಮೋಹನ್ ದಾಸ್, ಡಾ. ಸನತ್ ಮತ್ತಿತರರು ಭಾಗವಹಿಸಿದ್ದರು.

(Visited 9 times, 1 visits today)
Previous Articleಮಾರ್ಚ್ 1 ರಿಂದ ಸಿದ್ದಗಂಗಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ
Next Article ಕೊರಟಗೆರೆ :  ಗೂಬೆಯಾಕಾರದ ಕಣ್ಣಿನ ಮೇಕೆ ಮರಿ ಜನನ
News Desk Benkiyabale

Related Posts

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm news
ತಾಜಾ ಸುದ್ಧಿಗಳು
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
Our Youtube Channel
Our Picks

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

By News Desk BenkiyabaleOctober 03, 2026 5:36 pm

ತುರುವೇಕೆರೆ: ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಕೊರೆಯುತ್ತಿದ್ದ ಹೊಸ ಬೋರ್ ವೆಲ್ ನ್ನು ಹೆಚ್ವು ಆಳಕ್ಕೆ ಕೊರೆಯಬೇಕು ಎಂದು ಒತ್ತಾಯಿಸಿ ತಾಲೂಕಿನ…

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.